ಐರ್ಲೆಂಡ್​ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ

ಐರ್ಲೆಂಡ್‌ನ ಡಬ್ಲಿನ್‌ನಲ್ಲಿ ಕಡಬದ ಯುವಕ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಟ್ರುಪಾಡಿ ನಿವಾಸಿಯಾದ ಸುನೀಲ್ ಅವರ ದೇಹ ಚಾರ್ಲ್ಸ್‌ಟೌನ್ ನಿವಾಸದಲ್ಲಿ ಪತ್ತೆಯಾಗಿದೆ. ಐರ್ಲೆಂಡ್ ಪೊಲೀಸರು ಈ ಸಂಶಯಾಸ್ಪದ ಸಾವಿನ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ. ಸುನೀಲ್ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ.

ಐರ್ಲೆಂಡ್​ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ
ಸಾಂಜೋ ಸುನೀಲ್
Image Credit source: tv9 kannada
Edited By:

Updated on: Feb 19, 2026 | 6:16 PM

ಮಂಗಳೂರು, ಫೆಬ್ರವರಿ 19: ಕೆನಡಾದಲ್ಲಿ ಸಾಫ್ಟ್​​ವೇರ್ ಇಂಜಿನಿಯರ್​​​ ಆಗಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್​​ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಐರ್ಲೆಂಡ್​ನಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದು (death), ಇದೀಗ ಶವ ಪತ್ತೆ ಆಗಿದೆ. ಸಾಂಜೋ ಸುನೀಲ್(31) ಮೃತ ಯುವಕ. ಸದ್ಯ ಸುನೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ.

ನಡೆದಿದ್ದೇನು?

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಸಾಂಜೋ ಸುನೀಲ್​​ ಐರ್ಲೆಂಡ್​ನ ಡಬ್ಲಿನ್​ನ ಫಿಂಗ್ಲಾಸ್​ನ ಚಾರ್ಲ್ಸ್​ಟೌನ್​ನಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುನೀಲ್ ಮೃತದೇಹ ಪತ್ತೆ ಆಗಿದೆ. ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆತ್ಮಹತ್ಯೆ ಅಥವಾ ಬೇರೆ ಏನಾದರೂ ಆಗಿದೆಯಾ ಎಂದು ಸದ್ಯ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ! ಹತ್ತಾರು ಬಾರಿ ಗುಂಡು ಹಾರಿಸಿ ಕ್ರೌರ್ಯ

ವರ್ಷದ ಹಿಂದೆ ಕಡಬ ಮೂಲದ ಯುವತಿಯನ್ನ ಸಾಂಜೋ ಸುನೀಲ್ ವಿವಾಹವಾಗಿದ್ದರು. ಮೊದಲು ಇಸ್ರೇಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ ಸುನೀಲ್, ಪತ್ನಿ ಐರ್ಲೆಂಡ್​ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಹಿನ್ನೆಲೆ ಕೆಲವು ತಿಂಗಳ ಹಿಂದಷ್ಟೇ ಐರ್ಲೆಂಡ್​ಗೆ ತೆರಳಿ ವಾಸವಾಗಿದ್ದರು. ಸದ್ಯ ಸುನೀಲ್ ಅನುಮಾನಾಸ್ಪದ ಸಾವು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಕೆನಡಾದಲ್ಲಿ ಕನ್ನಡಿಗನ ಸಾವು

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್, ಕೆನಡಾದಲ್ಲಿ ಸಾಫ್ಟ್​​ವೇರ್ ಇಂಜಿನಿಯರ್ ಆಗಿ ಬದುಕು ಕಟ್ಟಿಕೊಂಡಿದ್ದರು. 4 ಕನ್ನಡ ಪರ ಸಂಘಟನೆಗಳನ್ನ ಕಟ್ಟಿಕೊಂಡು ಕನ್ನಡಿಗರ ಧ್ವನಿ ಆಗಿದ್ದರು. ಆದರೆ ಕಳೆದ 10 ದಿನದ ಹಿಂದೆ ಆಗಂತುಕರು ಗುಂಡಿನ ದಾಳಿ ನಡೆಸಿ, ಚಂದನ್​ನ ಬರ್ಬರವಾಗಿ ಕೊಂದು ಹಾಕಿದ್ದರು.

ಇದನ್ನೂ ಓದಿ: ಕೆನಡಾದಲ್ಲಿ ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ

ಇನ್ನು ಕೆನಡಾದ ಟೊರಾಂಟೋ ಪೊಲೀಸರು ಚಂದನ್ ಹತ್ಯೆ ಕೇಸ್​ನ ತನಿಖೆ ನಡೆಸ್ತಿದ್ದಾರೆ. ಆದರೆ ಕೊಲೆಗೆ ಕಾರಣ ಏನು? ಕೊಂದಿದ್ದು ಯಾರು? ತನಿಖೆ ಎಲ್ಲಿವರೆಗೂ ಬಂತು ಅನ್ನೋ ಗುಟ್ಟು ಮಾತ್ರ ಬಿಟ್ಟುಕೊಟ್ಟಿಲ್ಲ. ಈ ಮಧ್ಯೆ ಇತ್ತೀಚೆಗೆ ಹುಟ್ಟೂರಲ್ಲಿ ಚಂದನ್ ಅಂತ್ಯಕ್ರಿಯೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us