AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ: ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ, ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ವಿಚಾರಣೆಗೆ ಹಾಜರಾಗದಿದ್ದಲ್ಲಿ ಗಡಿಪಾರು ಮಾಡುವುದಾಗಿ ತಿಳಿಸಲಾಗಿದೆ.

ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ: ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 23, 2024 | 3:26 PM

Share

ಮಂಗಳೂರು, ಜನವರಿ 23: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮುಖಂಡ (Hindu leader) ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅವಿನಾಶ್​ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ. ಒಂದು ವೇಳೆ ನಾಳೆ ಅವಿನಾಶ್ ವಿಚಾರಣೆಗೆ ಹಾಜರಾಗದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್​ಗೆ ಗಡಿಪಾರು ಮಾಡುವುದಾಗಿ ನೋಟಿಸ್​ನಲ್ಲಿ ಈ ಬಗ್ಗೆ ಸಹಾಯಕ ಆಯುಕ್ತರ ಕಚೇರಿ ಉಲ್ಲೇಖ ಮಾಡಿದ್ದಾರೆ.

ನೋಟಿಸ್​​ನಲ್ಲಿ ಏನಿದೆ? 

ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಇವರನ್ನು ದಕ್ಷಿಣ ಕನ್ನಡ ಕರ್ನಾಟಕ ಪೊಲೀಸ್ ಕಾಯ್ದೆ- 1963 ಕಲಂ 55(ಎ) ಮತ್ತು (ಬಿ) ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ 24 ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Ayodhya Ram Mandir: ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನಲ್ಲಿ ಹೈ ಅಲರ್ಟ್

ಈ ಪ್ರಕರಣದಲ್ಲಿ ನೀವು ಸ್ವತಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ

ಉತ್ತರ ಕನ್ನಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಂದ ಉತ್ತರ ಕನ್ನಡ ಡಿಸಿ ಕಚೇರಿ ಕಟ್ಟಡದಲ್ಲಿರುವ ಸಂಸದ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಭಾಗಿಯಾಗಿದ್ದಾರೆ.

ಇದನ್ನ ಓದಿ: Dredgers Wanted: ಮಂಗಳೂರಿನ ಹಳೆಬಂದರಿನಲ್ಲಿ ಬರೀ ಹೂಳು! ಹೂಳು ಎತ್ತುವವರು ತಕ್ಷಣ ಬೇಕಾಗಿದ್ದಾರೆ!

ಸಂಸದರ ಕಚೇರಿಗೆ ಬಿಗ ಹಾಕಿದಕ್ಕೆ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಸಂಸದರ ಕಚೇರಿಗೆ ಬೀಗ ಹಾಕಿ ಬಹಳ ದಿನ ಆಯ್ತು. ನಾವು ಇಂದು ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದೆವೆ. ನಮ್ಮ ಮನವಿ ಸ್ವೀಕರಿಸಲು ಸಹ ಕಚೇರಿಯನ್ನ ಓಪನ್ ಮಾಡಲಿಲ್ಲ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸುವ ನಿರ್ಣಯ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಚಿತ್ರದುರ್ಗ ಡಿಸಿ ದಿವ್ಯ ಪ್ರಭು ವರ್ಗಾವಣೆ

ಚಿತ್ರದುರ್ಗ ಡಿಸಿ ದಿವ್ಯಾ ಪ್ರಭು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಮಂಗಳವಾರ ಆದೇಶ ಹೊರಡಿಸಿದ್ದು, ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಆಗಿ ಟಿ.ವೆಂಕಟೇಶ್‌ ನೇಮಕ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್