KSRTC Dasara Package Tour ಮಂಗಳೂರು ದಸರಾ ದರ್ಶನಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ಯಾಕೇಜ್ ಟೂರ್

ದಕ್ಕಾಗಿ ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಟಿಕೆಟ್ ಕಾಯ್ದಿರಿಸಿ ನವರಾತ್ರಿಯ ಸಮಯದಲ್ಲಿ ಕರಾವಳಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಬಹುದು

KSRTC Dasara Package Tour ಮಂಗಳೂರು ದಸರಾ ದರ್ಶನಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ಯಾಕೇಜ್ ಟೂರ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 23, 2022 | 1:24 PM

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಮಂಗಳೂರು ವಿಭಾಗವು ಮಂಗಳೂರು ದಸರಾ (Mangaluru Dasara) ದರ್ಶನಕ್ಕಾಗಿ ಪ್ಯಾಕೇಜ್ ಟೂರ್ (Package Tour) ಆಯೋಜಿಸಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ಪ್ರಮುಖ ದೇವಾಲಯಗಳನ್ನು ಒಳಗೊಂಡಿದೆ. ಕೆಎಸ್‌ಆರ್‌ಟಿಸಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಹಬ್ಬದ ಎಲ್ಲಾ ದಿನಗಳಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಅನ್ನು ನಿರ್ವಹಿಸುತ್ತದೆ. ಇದಕ್ಕಾಗಿ ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಟಿಕೆಟ್ ಕಾಯ್ದಿರಿಸಿ ನವರಾತ್ರಿಯ ಸಮಯದಲ್ಲಿ ಕರಾವಳಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪ್ಯಾಕೇಜ್ ಟೂರ್ ನಲ್ಲಿ ಬಸ್ ಪ್ರಯಾಣಿಕರನ್ನು ಮಂಗಳಾದೇವಿ ದೇವಾಲಯ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯ, ಗುರುಪುರದಲ್ಲಿರುವ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಾಲಯ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯ, ಸಸಿಹಿತ್ಲು ಶ್ರೀ ಭಗವತಿ ದೇವಾಲಯ ಮತ್ತು ಸಮುದ್ರ ಕಿನಾರೆಗೆ ಕರೆದೊಯ್ಯಲಿದೆ.

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೂ ತೆರಳಲಿದೆ. ಪ್ರಯಾಣದರ ಹಿರಿಯರಿಗೆ 300 ರೂ., ಮಕ್ಕಳಿಗೆ 250 ರೂ.

ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್ (ಜೆಎನ್‌ಎನ್‌ಯುಆರ್‌ಎಂ) ನಗರ ಸರಿಗೆ ಬಸ್‌ಗಳನ್ನು ಪ್ಯಾಕೇಜ್ ಟೂರ್‌ಗೆ ಬಳಸಲಾಗುವುದು ಎಂದು ರಾಜೇಶ್ ಶೆಟ್ಟಿ ಹೇಳಿದರು. ನವರಾತ್ರಿ ಉತ್ಸವದಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಒಂದು ದಿನದ ಪ್ರವಾಸವು ಬೆಳಗ್ಗೆ 8 ರಿಂದ ರಾತ್ರಿ 8.30 ರವರೆಗೆ ಕೆಎಸ್‌ಆರ್‌ಟಿಸಿ ನಿಲ್ದಾಣದಿಂದ ಪ್ರಾರಂಭವಾಗಲಿದೆ. ಜನರ ಪ್ರತಿಕ್ರಿಯೆಗೆ ಅನುಗುಣವಾಗಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಬಸ್‌ಗಳನ್ನು ಓಡಿಸಲು ನಿಗಮವು ಯೋಜಿಸಿದೆ ಎಂದು ಅವರು ಹೇಳಿದ್ದಾರೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?