AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಾರಿಗೆ ನಾಯಿ ಡಿಕ್ಕಿ, 70 ಕಿ.ಮೀ ಪ್ರಯಾಣದ ಬಳಿಕ ಬಂಪರಿನೊಳಗೆ ಶ್ವಾನ ಪ್ರತ್ಯಕ್ಷ

ಕಾರಿಗೆ ಡಿಕ್ಕಿ ಹೊಡಿದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾಗಿರುವಂತಹ  ವಿಚಿತ್ರ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಂಡುಬಂದಿದೆ.

ಮಂಗಳೂರು: ಕಾರಿಗೆ ನಾಯಿ ಡಿಕ್ಕಿ, 70 ಕಿ.ಮೀ ಪ್ರಯಾಣದ ಬಳಿಕ ಬಂಪರಿನೊಳಗೆ ಶ್ವಾನ ಪ್ರತ್ಯಕ್ಷ
ಕಾರಿನ ಬಂಪರ್​ನಲ್ಲಿ ಶ್ವಾನ ಪ್ರತ್ಯಕ್ಷ
ಗಂಗಾಧರ​ ಬ. ಸಾಬೋಜಿ
|

Updated on:Feb 03, 2023 | 8:25 PM

Share

ಮಂಗಳೂರು: ಕಾರಿಗೆ ಡಿಕ್ಕಿ ಹೊಡಿದ ನಾಯಿ (Dog) ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾಗಿರುವಂತಹ  ವಿಚಿತ್ರ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಂಡುಬಂದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ನಾಯಿ ಸುಮಾರು 70 ಕಿ.ಮೀ ಪ್ರಯಾಣ ಮಾಡಿದೆ. ಆದರೆ ಅಚ್ಚರಿಯ ವಿಷಯವೇನೆಂದರೆ ಒಂದೇ ಒಂದು ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮ ಮನೆಗೆ ವಾಪಸ್ಸ್​ ಆಗುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಎಲ್ಲಿಯೂ ಪತ್ತೆ ಆಗಿಲ್ಲ. ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್​ನ ಗ್ರಿಲ್ ತುಂಡಾಗುರುವುದು ಗಮನಕ್ಕೆ ಬಂದಿದೆ. ತುಂಡಾದ ಗ್ರಿಲ್ ಮಧ್ಯೆ 70 ಕಿ.ಮೀ ಹಿಂದೆ ತನಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದೆ ಗ್ಯಾರೇಜ್​ಗೆ ತೆರಳಿದ ಸುಬ್ರಹ್ಮಣ್ಯ ನಾಯಿಯನ್ನು ಹೊರ ತೆಗೆದಿದ್ದಾರೆ. ಈ ಘಟನೆಯ ವಿಡಿಯೋ ಒಂದು ವೈರಲ್​ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ: ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು

ಮೈಸೂರು ತಾಲೂಕಿನ ಮೈದನಹಳ್ಳಿ ಬಳಿ ಬೋನಿಗೆ ಬಿದ್ದ ಚಿರತೆ

ಮೈಸೂರು: ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಸೆರೆ ಆಗಿರುವಂತಹ ಘಟನೆ ತಾಲೂಕಿನ ಮೈದನಹಳ್ಳಿ ಬಳಿ ನಡೆದಿದೆ. ಇತ್ತೀಚೆಗೆ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಬೋನು ಇಟ್ಟಿದ್ದರು. ಚಿರತೆ ಸೆರೆಯಿಂದ ಮೈದನಹಳ್ಳಿ ಗ್ರಾಮಸ್ಥರು ಕೊಂಚ ನಿರಾಳರಾಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ಹಾವಳಿ

ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕುಟ್ಟಂದಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಾಳೆ, ಕಾಪಿ ಬೆಳೆ ಹಾನಿಯಾಗಿದೆ. ಪೂವಿ ಚೋಂದಮ್ಮ ಎಂಬುವರಿಗೆ ಸೇರಿದ ಕಾಫಿ, ಬಾಳೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ರೈತರಿಗೆ ತಲೆನೋವಾಗಿದ್ದ ಕಾಡಾನೆ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಾರ್ಮಿಕನ ಮೇಲೆ ಹುಲಿ ದಾಳಿ

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ (Tiger attack) ಮಾಡಿರುವಂತಹ ಘಟನೆ ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನ ಮೇಟಿಕುಪ್ಪೆ ಬಳಿ ನಡೆದಿದೆ. ಮುನೇಶ್ವರ(27) ಗಾಯಗೊಂಡ ಕಾರ್ಮಿಕ. ಜಮೀನಿನಲ್ಲಿ ಕೂಲಿ ಕೆಲಸಕ್ಕೆ ಮೂವರು ಕಾರ್ಮಿಕರು ಬಂದಿದ್ದು, ಬಾಳೆಗೊನೆ ಕತ್ತರಿಸುವಾಗ ಪೊದೆಯಲ್ಲಿದ್ದ ಹುಲಿ ಸಡನ್​ ಆಗಿ ದಾಳಿ ಮಾಡಿದೆ. ಗಾಬರಿಯಿಂದ ಕೂಲಿ ಕಾರ್ಮಿಕರು ಕೂಗಾಡುತ್ತಿದ್ದಂತೆ ಹುಲಿ ಓಡಿ ಹೋಗಿದೆ. ಈ ವೇಳೆ ಮುನೇಶ್ವರ ಬಲಗೈ ಬೆರಳಿಗೆ ಗಾಯವಾಗಿದ್ದು, ಹೆಚ್​​.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್. ಡಿ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Fri, 3 February 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ