ಮಂಗಳೂರು: ಕಾರಿಗೆ ಡಿಕ್ಕಿ ಹೊಡಿದ ನಾಯಿ (Dog) ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾಗಿರುವಂತಹ ವಿಚಿತ್ರ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಂಡುಬಂದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ನಾಯಿ ಸುಮಾರು 70 ಕಿ.ಮೀ ಪ್ರಯಾಣ ಮಾಡಿದೆ. ಆದರೆ ಅಚ್ಚರಿಯ ವಿಷಯವೇನೆಂದರೆ ಒಂದೇ ಒಂದು ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮ ಮನೆಗೆ ವಾಪಸ್ಸ್ ಆಗುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಎಲ್ಲಿಯೂ ಪತ್ತೆ ಆಗಿಲ್ಲ. ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್ನ ಗ್ರಿಲ್ ತುಂಡಾಗುರುವುದು ಗಮನಕ್ಕೆ ಬಂದಿದೆ.
ತುಂಡಾದ ಗ್ರಿಲ್ ಮಧ್ಯೆ 70 ಕಿ.ಮೀ ಹಿಂದೆ ತನಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದೆ ಗ್ಯಾರೇಜ್ಗೆ ತೆರಳಿದ ಸುಬ್ರಹ್ಮಣ್ಯ ನಾಯಿಯನ್ನು ಹೊರ ತೆಗೆದಿದ್ದಾರೆ. ಈ ಘಟನೆಯ ವಿಡಿಯೋ ಒಂದು ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ: ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು
ಮೈಸೂರು: ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಸೆರೆ ಆಗಿರುವಂತಹ ಘಟನೆ ತಾಲೂಕಿನ ಮೈದನಹಳ್ಳಿ ಬಳಿ ನಡೆದಿದೆ. ಇತ್ತೀಚೆಗೆ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಬೋನು ಇಟ್ಟಿದ್ದರು. ಚಿರತೆ ಸೆರೆಯಿಂದ ಮೈದನಹಳ್ಳಿ ಗ್ರಾಮಸ್ಥರು ಕೊಂಚ ನಿರಾಳರಾಗಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕುಟ್ಟಂದಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಾಳೆ, ಕಾಪಿ ಬೆಳೆ ಹಾನಿಯಾಗಿದೆ. ಪೂವಿ ಚೋಂದಮ್ಮ ಎಂಬುವರಿಗೆ ಸೇರಿದ ಕಾಫಿ, ಬಾಳೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ: ರೈತರಿಗೆ ತಲೆನೋವಾಗಿದ್ದ ಕಾಡಾನೆ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ (Tiger attack) ಮಾಡಿರುವಂತಹ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮೇಟಿಕುಪ್ಪೆ ಬಳಿ ನಡೆದಿದೆ. ಮುನೇಶ್ವರ(27) ಗಾಯಗೊಂಡ ಕಾರ್ಮಿಕ. ಜಮೀನಿನಲ್ಲಿ ಕೂಲಿ ಕೆಲಸಕ್ಕೆ ಮೂವರು ಕಾರ್ಮಿಕರು ಬಂದಿದ್ದು, ಬಾಳೆಗೊನೆ ಕತ್ತರಿಸುವಾಗ ಪೊದೆಯಲ್ಲಿದ್ದ ಹುಲಿ ಸಡನ್ ಆಗಿ ದಾಳಿ ಮಾಡಿದೆ. ಗಾಬರಿಯಿಂದ ಕೂಲಿ ಕಾರ್ಮಿಕರು ಕೂಗಾಡುತ್ತಿದ್ದಂತೆ ಹುಲಿ ಓಡಿ ಹೋಗಿದೆ. ಈ ವೇಳೆ ಮುನೇಶ್ವರ ಬಲಗೈ ಬೆರಳಿಗೆ ಗಾಯವಾಗಿದ್ದು, ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್. ಡಿ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:24 pm, Fri, 3 February 23