AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ!

ಮಂಗಳೂರಿನ ಮುಲ್ಕಿಯಲ್ಲಿ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ BCA ವಿದ್ಯಾರ್ಥಿನಿ ಸುಹಾನಳನ್ನು ಪೊಲೀಸರು ಬಂಧಿಸಿದ್ದಾರೆ. ಚೆನ್ನೈನಿಂದ ಡ್ರಗ್ಸ್ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಈಕೆಯ ಮೇಲೆ ಈಗಾಗಲೇ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಕ್ರಿಮಿನಲ್ ಪ್ರಕರಣಗಳಿವೆ ಎಂಬುದು ತಿಳಿದುಬಂದಿದೆ.

35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ!
ಸುಹಾನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 13, 2026 | 3:42 PM

Share

ಮಂಗಳೂರು, ಮೇ 13: ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂ. ಮೌಲ್ಯದ  ಮಾದಕ ವಸ್ತುವನ್ನು (Drugs) ವಶಪಡಿಸಿಕೊಂಡಿದ್ದಾರೆ. ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಖ್ಯಾಂಶಗಳು

  • ಚೆನ್ನೈನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸುಹಾನ ಬಂಧನ.
  •  ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಪೊಲೀಸರ ವಶ.
  •  ಬಂಧಿತ ವಿದ್ಯಾರ್ಥಿನಿ ಮೇಲೆ ಈಗಾಗಲೇ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿವೆ.

ನಡೆದಿದ್ದೇನು?

ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಸುಹಾನ (21) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದಾಳೆ. ಮಂಗಳವಾರ (ಮೇ 12) ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.

ಏನೆಲ್ಲಾ ವಶಕ್ಕೆ?

ಬಂಧಿತ ವಿದ್ಯಾರ್ಥಿನಿಯಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ಎಂಬ ಅತೀ ದುಬಾರಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಮತ್ತು ಇತರ ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಸುಹಾನ ಈ ಮಾದಕ ವಸ್ತುವನ್ನು ಚೆನ್ನೈನಿಂದ ಮಂಗಳೂರಿಗೆ ತರಿಸಿಕೊಂಡಿದ್ದಳು. ಇಲ್ಲಿನ ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಇದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುವ ಸಂಚು ರೂಪಿಸಿದ್ದಳು ಎನ್ನಲಾಗಿದೆ.

ಇದನ್ನೂ ಓದಿ ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್: 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್!

ಹಳೆ ಪ್ರಕರಣಗಳ ನಂಟು

ಕೇವಲ 21 ವರ್ಷದ ಈ ವಿದ್ಯಾರ್ಥಿನಿ ಈಗಾಗಲೇ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಈಕೆಯ ಮೇಲೆ ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯಲ್ಲೂ ಈಕೆಯ ವಿರುದ್ಧ ಮಾದಕ ದ್ರವ್ಯ ಸಾಗಾಟದ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಪ್ರಸ್ತುತ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇರುವ ದೊಡ್ಡ ತಲೆಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 am, Wed, 13 May 26

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!