
ಮಂಗಳೂರು, ಜೂನ್ 20: ಜೂನ್ 17ರ ಮದ್ಯರಾತ್ರಿ ನಗರದ ಹೊರವಲಯದ ಜಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ್ದ ಕಾರು ಅಪಘಾತದಲ್ಲಿ (accident) ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಯುವಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಎನ್ಎಸ್ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಮೃತರು. ರಾತ್ರಿ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಮದ್ಯಪಾನ ಮಾಡಿ ಅತಿವೇಗವಾಗಿ ಕಾರು ಚಾಲನೆ ಮಾಡಿರುವುದೇ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಅತೀಯಾದ ವೇಗ, ಡ್ರಿಂಕ್ & ಡ್ರೈವ್ ಅಡಿ ಪ್ರಕರಣ ದಾಖಲಾಗಿದೆ.
ಮದ್ಯರಾತ್ರಿವರೆಗೂ ಎಣ್ಣೆ ಪಾರ್ಟಿ ಮಾಡಿದ್ದ ಐವರು ಯುವಕರು ಬಳಿಕ ಕಾರಿನಲ್ಲಿ ತಲಪಾಡಿಯಿಂದ ಮಂಗಳೂರಿನ ಕಡೆಗೆ ಹೊರಟ್ಟಿದ್ದರು. ಪೊಲೀಸರ ಪ್ರಕಾರ ಕಾರು ಗಂಟೆಗೆ 192 ಕಿಲೋಮೀಟರ್ ವೇಗದಲ್ಲಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಮಡಿಕೇರಿಯಲ್ಲಿ ಪೊಲೀಸರ ಮನೆಗಳಲ್ಲೇ ಕಳ್ಳತನ, ಬರೋಬ್ಬರಿ 9 ಮನೆಗಳಲ್ಲಿ ಕೈಚಳಕ!
ಐವರು ಯುವಕರ ಪೈಕಿ ಓಂಶ್ರೀ ಪೂಜಾರಿ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಮೃತಪಟ್ಟಿದ್ದು, ವಂಶಿ ಮತ್ತು ಆಶಿಕ್ಗೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಟಲಿ ಮೂಲದ ಇನ್ನೊಬ್ಬ ಗೆಳೆಯ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಅತೀ ವೇಗಕ್ಕೆ ಫೋಕ್ಸ್ ವೇಗನ್ ಕಾರು ಅಪ್ಪಚ್ಚಿಯಾಗಿದೆ.
ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಉಮೇಶ್, ತಬ್ರೇಜ್ ಮತ್ತು ಜಬೀರ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ 12 ಲಕ್ಷ ಮೌಲ್ಯದ ಆರು ಓಮ್ನಿ ಕಾರು ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ಪ್ರೀತಿಯ ನಾಟಕ, ಅಶ್ಲೀಲ ವಿಡಿಯೋ ರೆಕಾರ್ಡ್: ಆಂಧ್ರದ ಮಹಿಳೆಯ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನ ಬಂಧನ
ಈ ಗ್ಯಾಂಗ್ ಹಿಂದೆ ಟ್ರ್ಯಾಕ್ಟರ್ಗಳನ್ನು ಕದ್ದು ಮಾರುತ್ತಿದ್ದರು. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 2020ರಲ್ಲಿ ಟ್ರ್ಯಾಕ್ಟರ್ ಕಳ್ಳತನ ಕೇಸ್ನಲ್ಲಿ ಗ್ಯಾಂಗ್ ಅನ್ನು ಬಂಧಿಸಲಾಗಿತ್ತು. ಬಳಿಕ ಜೈಲಿನಿಂದ ಹೊರಬಂದು ಟ್ರ್ಯಾಕ್ಟರ್ ಬಿಟ್ಟು ಓಮ್ನಿ ಕಾರು ಕದಿಯುತ್ತಿದ್ದರು. ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಹಳ್ಳಿಗಳಲ್ಲಿ ಮಾರುತ್ತಿದ್ದರು. ಮೇ ತಿಂಗಳಲ್ಲಿ ವಿದ್ಯಾರಣ್ಯಪುರದಲ್ಲಿ ಕಾರು ಕದ್ದಿದ್ದರು. ಆರೋಪಿಗಳು ಕಾರು ಕದಿಯುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಇದೀಗ ಮತ್ತೆ ಲಾಕ್ ಆಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:21 am, Fri, 20 June 25