ಮಂಗಳೂರು: ಈದ್ ಮಿಲಾದ್ ಮೆರವಣಿಗೆ ಹೆಸರಲ್ಲಿ ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ಜಾರಿ
ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿ ನೋಟಿಸ್ ಜಾರಿ ಮಾಡಿದ್ದಾರೆ.
ಮಂಗಳೂರು, ಅ.3: ಈದ್ ಮಿಲಾದ್ ಮೆರವಣಿಗೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ವಿಡಿಯೋ ಆಧರಿಸಿ ಯುವಕರ ಪತ್ತೆ ಹಚ್ಚಿ ನೋಟಿಸ್ ಜಾರಿ ಮಾಡಿದ್ದಾರೆ.
ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ನೂರಾರು ಯುವಕರು ಅಬ್ಬಕ್ಕ ಸರ್ಕಲ್ ಹತ್ತಿ ಪ್ರತಿಮೆ ಎದುರು ಹಸಿರು ಬಾವುಟ ಪ್ರದರ್ಶಿಸಿ ಚೀರಾಡುತ್ತಾ ಪುಂಡಾಟ ಮೆರೆದಿದ್ದರು. ಅಲ್ಲದೆ, ರಸ್ತೆ ಬಂದ್ ಮಾಡಿ ಬೈಕ್ ಹಾರ್ನ್ ಹಾಕಿಕೊಂಡು ಹುಚ್ಚಾಟ ಮೆರೆದಿದ್ದರು.
ಇದನ್ನೂ ಓದಿ: ಮಂಗಳೂರು: ದೇವಸ್ಥಾನದ ತಡೆಗೋಡೆ ಕಟ್ಟುತ್ತಿದ್ದ ಮುಸ್ಲಿಂ ಯುವಕನ ಮೈಯಲ್ಲಿ ಬಂದ ದೈವ
ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ಗಮನಿಸಿದ ಉಳ್ಳಾಲ ಠಾಣಾ ಪೊಲೀಸರು, ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿದ್ದಾರೆ. ಪುಂಡಾಟ ಮೆರೆದವರು ಮಂಜನಾಡಿ, ಮದಕ, ಬಂಟ್ವಾಳ, ಬೆಳ್ತಂಗಡಿ, ದೇರಳಕಟ್ಟೆ, ಕೊಣಾಜೆ ಹಾಗೂ ಉಳ್ಳಾಲ ಭಾಗದ ಯುವಕರು ಎಂದು ತಿಳಿದುಬಂದಿದೆ.
ಸದ್ಯ ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಯುವಕರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲೂ ಇಂತಹದ್ದೇ ಘಟನೆ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ