ಮಂಗಳೂರು: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ, ಆರೋಪಿ ಸಯ್ಯದ್ ಬಶೀರ್ ಬಂಧನ

ರವಿವಾರ (ಜ.28) ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ನಡೆದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಆರೋಪಿ ಸಯ್ಯದ್​ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದೆ.

ಮಂಗಳೂರು: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ, ಆರೋಪಿ ಸಯ್ಯದ್ ಬಶೀರ್ ಬಂಧನ
ಆರೋಪಿ ಸಯ್ಯದ್ ಬಶೀರ್, ಬ್ಲಾಸ್ಟ್​ ಆದ ಸ್ಥಳ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ

Updated on:Jan 29, 2024 | 9:59 AM

ಮಂಗಳೂರು, ಜನವರಿ 29: ಪಟಾಕಿ ಗೋದಾಮಿನಲ್ಲಿ (Firecracker Godown) ಸಂಭವಿಸಿದ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು (Belthangadi Police) ಬಂಧಿಸಿದ್ದಾರೆ. ವೇಣೂರಿನಿಂದ ಪರಾರಿಯಾಗುತ್ತಿದ್ದಾಗ ಸುಳ್ಯದಲ್ಲಿ ಬಶೀರ್​ನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪೊಲೀಸರು ಅಜ್ಞಾತಸ್ಥಳದಲ್ಲಿ ಬಶೀರ್ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸ್ಥಳಕ್ಕೆ ತಡರಾತ್ರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆದಿದೆ.

ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ವೃದ್ಧ ದಂಪತಿ

ಸ್ಪೋಟಗೊಂಡ ಗೋದಾಮಿನ ಪಕ್ಕದಲ್ಲಿ ಮನೆಯೊಂದು ಇದೆ. ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದಾರೆ. ರವಿವಾರ (ಜ.28) ಸ್ಪೋಟಗೊಂಡ ಸಮಯದಲ್ಲಿ ವೃದ್ಧ ದಂಪತಿ ಮನೆಯ ಹೊರಗಡೆ ಕೂತು ಚಹಾ ಕುಡಿಯುತ್ತಿದ್ದರು. ಈ ವೇಳೆ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀರ್ವತೆಗೆ ವೃದ್ಧ ದಂಪತಿಯ ಮನೆ ಕೂಡ ಕುಸಿದು ಬಿದ್ದಿದೆ. ಅದೃಷ್ಟವಶಾತ್​​ ದಂಪತಿ ಹೊರಗಡೆ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದ್ದು, ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಛಾವಣಿಯ ಶೀಟ್​ಗಳು ತುಂಡು ತುಂಡಾಗಿ ಮುರಿದು ಕೆಳಗೆ ಬಿದ್ದಿವೆ.

ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಈ ಗೋಡಾನ್​ನಲ್ಲಿ ತಯಾರಾಗುತ್ತಿತ್ತಾ ಗ್ರೆನೇಡ್?

ಐದು ಬಾರಿ ಸ್ಫೋಟ

ಒಟ್ಟು ಐದು ಬಾರಿ ಸ್ಫೋಟ ಸಂಭವಿಸಿತು. ಸ್ಫೋಟ ಆಗುತ್ತಿದ್ದಂತೆಯೇ ಕಣ್ಣು ಮಂಜಾಯಿತು. ಮನೆಯ ಶೀಟ್​ಗಳು ಮುರಿದು ಕೆಳಗೆ ಬಿದ್ದವು. ಮನೆ ಜಖಂಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಪರಿಹಾರ‌ ನೀಡಬೇಕು ಎಂದು ವೃದ್ಧ ದಂಪತಿ ಆಗ್ರಹಿಸಿದ್ದಾರೆ.

ರವಿವಾರ ಯಾವುದೋ ಟ್ರಯಲ್ ಬ್ಲಾಸ್ಟ್ ನಡೆದಿದೆ: ಸ್ಥಳೀಯರ ಅನುಮಾನ

ಕಳೆದ ಎರಡು ತಿಂಗಳ ಹಿಂದೆ 9 ಜನ ಕಾರ್ಮಿಕರು ಬಂದು ಕೆಲಸ ಮಾಡುತ್ತಿದ್ದರು. ಯಾರನ್ನೂ ಗೋದಾಮಿನ ಹತ್ತಿರ ಬಿಡದೆ, ರೋಡ್​ನಲ್ಲಿ ವಾಚ್ ಮಾಡುತ್ತಾ ಕೆಲಸ ಮಾಡುತ್ತಿದ್ದರು. ಇಲ್ಲಿ ಪಟಾಕಿ ತಯಾರಿಸುವುದಾಗಿ ಬಶೀರ್ ಲೈಸೆನ್ಸ್ ತೆಗೆದುಕೊಂಡಿದ್ದನು. ಅದರೆ ಇಲ್ಲಿ ಬಾಂಬ್ ತಯಾರು ಮಾಡುತ್ತಿದ್ದರು ಅಂತ ಸ್ಥಳೀಯರು ಅನುಮಾನ ವ್ಯಕ್ತ ಪಡಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಸರಿಯಾಗಿ ಕೆಲಸ ನಡೆಯುತ್ತಿತ್ತು. ಆದರೆ ಎರಡು ತಿಂಗಳಿಂದ ಬೇರೆ ಏನೋ ನಡೆಯುತ್ತಿದೆ. ಇಲ್ಲಿ ರವಿವಾರ ಯಾವುದೋ ಟ್ರಯಲ್ ಬ್ಲಾಸ್ಟ್ ನಡೆದಿದೆ. ಸುತ್ತಾಮುತ್ತಾ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಮಕ್ಕಳು ಊಟ ಮಾಡುತ್ತಿಲ್ಲ. ಇನ್ಮುಂದೆ ಇಲ್ಲಿ ಪಟಾಕಿ ತಯಾರಿಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:54 am, Mon, 29 January 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ