AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ ಗಾದಿಗೆ ಮಾಜಿ ರೌಡಿಶೀಟರ್​ ಆಯ್ಕೆ: ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ದಿನೇಶ್ ಗುಂಡುರಾವ್ ಅವರ ಶಿಫಾರಸಿನ ಮೇರೆಗೆ ಈ ನೇಮಕವಾಗಿದೆ. ಹರೀಶ್ ಅವರ ವಿರುದ್ಧ ಹಲವು ಆರೋಪಗಳಿವೆ. ಇದರಿಂದ ದೇವಸ್ಥಾನದ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಗ್ರಾಮಸ್ಥರು ಆಕ್ಷೇಪಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ ಗಾದಿಗೆ ಮಾಜಿ ರೌಡಿಶೀಟರ್​ ಆಯ್ಕೆ: ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ
ಹರೀಶ್ ಇಂಜಾಡಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 14, 2025 | 2:21 PM

Share

ಮಂಗಳೂರು, ಮೇ 14: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ (Kukke Subrahmanya Temple) ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ (harish injadi) ನೇಮಕವಾಗಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು MLC ಮಂಜುನಾಥ ಭಂಡಾರಿ ಕಾಂಗ್ರೆಸ್ ಮುಖಂಡ ಕಂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಆದರೆ ಹರೀಶ್​ಗೆ ಅಧ್ಯಕ್ಷ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರು ವಿರೋಧಿಸಿದ್ದರು.

ದೇಗುಲ ಆಡಳಿತ ಮಂಡಳಿಗೆ ದೋಖಾ: ಜೈಲುಪಾಲಾಗಿದ್ದ ಹರೀಶ್

ಕಾಂಗ್ರೆಸ್ ಮುಖಂಡ ಕಂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇಗುಲ ಆಡಳಿತ ಮಂಡಳಿಗೆ ವಂಚನೆ ಮಾಡಿರುವ ಆರೋಪ ಇದೆ. ಇದೇ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಇದನ್ನೂ ಓದಿ
Image
ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ BJP ಮನವಿ
Image
ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್
Image
ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ: ಸೈಬರ್ ತಜ್ಞರಿಂದ ಎಚ್ಚರಿಕೆ ಸಂದೇಶ
Image
ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್​ ಹೆಸರು ಶಿಫಾರಸ್ಸು

ಅಲ್ಲದೇ ಮರಳು‌ ಮಾಫಿಯಾ ಮತ್ತು ಮರ ಕಳ್ಳ ಸಾಗಾಣೆ ಆರೋಪಿಸಿ ದಾಖಲೆ ಸಮೇತ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸುಬ್ರಹ್ಮಣ್ಯ ಗ್ರಾಮಸ್ಥರು ಪತ್ರ‌ ಬರೆದಿದ್ದರು. ಆದರೆ ಗ್ರಾಮಸ್ಥರ ಮನವಿಗೂ ಕ್ಯಾರೆ ಎನ್ನದೇ ಹರೀಶ್ ಇಂಜಾಡಿ ನೇಮಕ ಮಾಡಲಾಗಿದೆ. ಆಡಳಿತ ಮಂಡಳಿ ಸದ್ಯಸ್ಯರಾಗಲು ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಆಗಬಾರದು ಎನ್ನುವ ನಿಯಮ ಮೀರಿ ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ 

ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ರೌಡಿ ಶೀಟರ್ ಎಂದಿದ್ದ ಕಾಂಗ್ರೆಸ್. ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್​ಗೆ ಕುಕ್ಕೆ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

‘ರೌಡಿಶೀಟರ್​ಗೆ ನಾಗ ಕ್ಷೇತ್ರ ರಾಜ್ಯದ ನಂ. 1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಮಿತಿ ಅಧ್ಯಕ್ಷ ಸ್ಥಾನ. ರೌಡಿ ಭಾಗ್ಯ’. ‘ರೌಡಿಶೀಟರ್ ಮನೆಗೆ ಭೇಟಿ ನೀಡಲ್ಲ ಎಂದು ಹೇಳುತ್ತಿದ್ದ ಸರ್ಕಾರ ಇಂದು ರೌಡಿ ಶೀಟರ್​ಗೆ ಅಧ್ಯಕ್ಷ ಸ್ಥಾನ ಕೊಟ್ಟಿದೆ’. ‘ಇದಕ್ಕೂ ಮೊದಲು ಕುಕ್ಕೆ ದೇವಸ್ಥಾನಕ್ಕೆ ವಚನೆ ಮೋಸ ಮಾಡಿರುವ ಪ್ರಕರಣಗಳು ಇವರ ಮೇಲಿದೆ. ಇದೀಗ ಅಧ್ಯಕ್ಷ ಸ್ಥಾನ ಕೊಟ್ಟು ದೇವಸ್ಥಾನವನ್ನು ಏನು ಮಾಡುತ್ತಾರೆ ನೋಡಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು

ಈ ಪ್ರಕರಣ ವಿಚಾರವಾಗಿ ಸ್ಥಳೀಯರು ಹೈಕೋರ್ಟ್ ಮೆಟ್ಟಿಲೇರಿದ್ದು, ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಸಂಬಂಧಿಪಟ್ಟ ಅಧಿಕಾರಿಗಳ ಮೇಲೆ ಕ್ರಮ ತಗೆದುಕೊಳ್ಳವಂತೆ ಕೋರ್ಟ್ ಮೊರೆ ಹೊಗಲಾಗಿದೆ. ಸಚಿವರಿಂದ ಒತ್ತಡ ಹಾಕಿ ಅನರ್ಹ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಆರೋಪ ಮಾಡಲಾಗಿದೆ. ಅಧ್ಯಕ್ಷ ಸ್ಥಾನ ಹಾಗೂ ಸದಸ್ಯ ಸ್ಥಾನ ರದ್ದುಗೊಳಿಸುವವಂತೆ ದೂರು ಕೂಡ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 am, Wed, 14 May 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ