ಮಂಗಳೂರು: ರೈಲಿನಲ್ಲಿ ಸಾಗಿಸುತ್ತಿದ್ದ ಟ್ಯಾಂಕರ್​ಗಳಲ್ಲಿ ಗ್ಯಾಸ್ ಸೋರಿಕೆ, ಹಳಿ ಸುತ್ತಮುತ್ತ ಸಾರ್ವಜನಿಕರಿಗೆ ನಿರ್ಬಂಧ

|

Updated on: Mar 10, 2023 | 8:27 PM

ರಸ್ತೆ, ಹೆದ್ದಾರಿಗಳಲ್ಲಿ ಟ್ಯಾಂಕರ್​ಗಳು ಸಂಚರಿಸುವಾಗ ಗ್ಯಾಸ್ ಸೋರಿಕೆಯಾದ ಪ್ರಕರಣಗಳು ಸಾಮಾನ್ಯವಾಗಿದೆ. ಆದರೆ ರೈಲಿನಲ್ಲಿ ಸಾಗುವ ಟ್ಯಾಂಕರ್​ಗಳಲ್ಲಿ ಸೋರಿಕೆಯಾದ ಪ್ರಕರಣ ಕೇಳಿದ್ದೀರಾ? ಇಂತಹ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ರೈಲಿನಲ್ಲಿ ಸಾಗಿಸುತ್ತಿದ್ದ ಟ್ಯಾಂಕರ್​ಗಳಲ್ಲಿ ಗ್ಯಾಸ್ ಸೋರಿಕೆ, ಹಳಿ ಸುತ್ತಮುತ್ತ ಸಾರ್ವಜನಿಕರಿಗೆ ನಿರ್ಬಂಧ
ರೈಲಿನಲ್ಲಿ ಸಾಗಿಸುತ್ತಿದ್ದ ಟ್ಯಾಂಕರ್​ಗಳಲ್ಲಿ ಗ್ಯಾಸ್ ಸೋರಿಕೆ
Follow us on

ಮಂಗಳೂರು: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್​ನಿಂದ (HPCL) ಟ್ಯಾಂಕರ್​ಗಳಲ್ಲಿ ಗ್ಯಾಸ್ ತುಂಬಿಸಿ ರೈಲು ಮೂಲಕ ಕಳುಹಿಸಲಾಗಿತ್ತು. ಆದರೆ ಗ್ಯಾಸ್ ಸೋರಿಕೆ (Gas Leakage) ಶಂಕೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ 7 ಕಿ.ಮೀ ದೂರ ತೆರಳಿದ ರೈಲು ವಾಪಸ್ ಹೆಚ್​​ಪಿಸಿಎಲ್​ಗೆ ಆಗಮಿಸಿದೆ. ಮಂಗಳೂರಿನಿಂದ ಸರಕು ಸಾಗಣೆ ರೈಲಿನಲ್ಲಿ ಗ್ಯಾಸ್ ತುಂಬಿದ ಟ್ಯಾಂಕರ್​ಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಕೆಲವೊಂದು ಟ್ಯಾಂಕರ್​ಗಳಲ್ಲಿ ದಾರಿ ಮಧ್ಯೆ ಗ್ಯಾಸ್ ಸೋರಿಕೆಯಾಗಿರುವ ಶಂಕೆ ವ್ಯಕ್ತವಾದ ಹಿನ್ನಲೆ ತಕ್ಷಣ ಹೆಚ್​ಪಿಸಿಎಲ್​ಗೆ ಹಿಂತಿರುಗಿಸಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಪ್ರಯಾಣಿಸಿದ 7 ಕಿಲೋ ಮೀಟರ್ ದಾರಿ ಮಧ್ಯೆ ಗ್ಯಾಸ್ ಸೋರಿಕೆಯಾದ ಹಿನ್ನಲೆ ಜೋಕಟ್ಟೆ ಬಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಸುದ್ದಿ ತಿಳಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ರೈಲ್ವೇ ಗೇಟ್ ಬಳಿ ಅಗ್ನಿಶಾಮಕ ವಾಹನ ನಿಯೋಜನೆ ಮಾಡಲಾಗಿದ್ದು, ರೈಲ್ವೆ ಹಳಿ ಸುತ್ತಮುತ್ತ ಸಾರ್ವಜನಿಕರು ಬಾರದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ: ಪಶ್ಚಿಮಘಟ್ಟದಲ್ಲಿ ಭೂಕುಸಿತದ ಭೀತಿ, ಪ್ರಲ್ಹಾದ್ ಜೋಶಿ ಸ್ಪಷ್ಟನೆ

ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ ನಗರದ ನಾಯಂಡಹಳ್ಳಿ ಮೆಟ್ರೋ ರೈಲು ನಿಲ್ದಾಣದ ಬಳಿ ನಡೆದಿದೆ. ಸಂಚರಿಸುತ್ತಿದ್ದ ಕಾರಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಹೊರಬಂದಿದ್ದು ಘಟನೆಯಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅರ್ಧ ಗಂಟೆಗಳ ಕಾಲ ಕಾರಿನ ಮುಂಭಾಗ ಸಂಪೂರ್ಣ ದಹಿಸಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Fri, 10 March 23