ಮಂಗಳೂರು ಗೋವಾ ವಂದೇ ಭಾರತ್ ರೈಲು ವೇಳಾಪಟ್ಟಿ, ಪ್ರಯಾಣದ ಸಮಯ: ಇಲ್ಲಿದೆ ಪೂರ್ಣ ವಿವರ

Mangaluru Goa Vande Bharat express Train: ಮಂಗಳೂರು ಗೋವಾ ವಂದೇ ಭಾರತ್ ರೈಲಿನ ಆರಂಭದೊಂದಿಗೆ ಕರ್ನಾಟಕದಲ್ಲಿ ನಾಲ್ಕನೇ ವಂದೇ ಭಾರತ್‌ ರೈಲು ಕಾರ್ಯಾರಂಭ ಮಾಡಿದಂತಾಗಲಿದೆ. ಮಂಗಳೂರು ಗೋವಾ ವಂದೇ ಭಾರತ್ ರೈಲಿನ ಪ್ರಯಾಣದ ಸಮಯ, ವೇಳಾಪಟ್ಟಿ ಮತ್ತಿತರ ಸಂಪೂರ್ಣ ವಿವರ ಇಲ್ಲಿದೆ.

ಮಂಗಳೂರು ಗೋವಾ ವಂದೇ ಭಾರತ್ ರೈಲು ವೇಳಾಪಟ್ಟಿ, ಪ್ರಯಾಣದ ಸಮಯ: ಇಲ್ಲಿದೆ ಪೂರ್ಣ ವಿವರ
ಪ್ರಾಯೋಗಿಕ ಸಂಚಾರದ ವೇಳೆ ವಂದೇ ಭಾರತ್ ರೈಲಿನಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಇತರರು
Follow us
| Updated By: ಗಣಪತಿ ಶರ್ಮ

Updated on:Dec 29, 2023 | 12:54 PM

ಮಂಗಳೂರು, ಡಿಸೆಂಬರ್ 29: ಮಂಗಳೂರು ಗೋವಾ ವಂದೇ ಭಾರತ್ ರೈಲಿಗೆ (Mangaluru Goa Vande Bharat express Train) ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಿದ್ಧತೆ ಪರಿಶೀಲಿಸಿದರು. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಅಧಿಕಾರಿಗಳ ಜೊತೆ ನಿಲ್ದಾಣಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಮಂಗಳೂರು ಗೋವಾ ವಂದೇ ಭಾರತ್ ರೈಲಿನ ಆರಂಭದೊಂದಿಗೆ ಕರ್ನಾಟಕದಲ್ಲಿ ನಾಲ್ಕನೇ ವಂದೇ ಭಾರತ್‌ ರೈಲು ಕಾರ್ಯಾರಂಭ ಮಾಡಿದಂತಾಗಲಿದೆ.

ವಂದೇ ಭಾರತ್ ರೈಲಿಗೆ ಚಾಲನೆ ವೇಳೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ಹೊಸ 4 ಮತ್ತು 5ನೇ ಫ್ಲ್ಯಾಟ್‌ ಫಾರಂ ಕೂಡ ಉದ್ಘಾಟನೆಯಾಗಲಿದೆ. ಅಲ್ಲಿಗೂ ನಳಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಮಧ್ಯೆ, ರೈಲಿನ ಆರಂಭಿಕ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯದಿಂದ ಸಕಲ ಸಿದ್ಧತೆ ಮಾಡಲಾಗಿದೆ. ಇದರೊಂದಿಗೆ ಹೊಸ ವರ್ಷಕ್ಕೆ ಗೋವಾ ಪ್ರವಾಸ ತೆರಳುವವರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದಂತಾಗಿದೆ.

ಮಂಗಳೂರು ಗೋವಾ ವಂದೇ ಭಾರತ್ ವೇಳಾಪಟ್ಟಿ

ಮಂಗಳೂರು ಗೋವಾ ವಂದೇ ಭಾರತ್ ಸೂಪರ್ ಫಾಸ್ಟ್ ರೈಲು ಮಂಗಳೂರಿನಿಂದ ಕೇವಲ 4.15 ಗಂಟೆ ಅವಧಿಯಲ್ಲಿ ಗೋವಾ ತಲುಪಲಿದೆ. ಈ ರೈಲು ಗಂಟೆಗೆ 160 ಕಿಮೀ ವೇಗದಲ್ಲಿ ಸಂಚರಿಸಲಿದೆ. ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ವಾರದ ಆರು ದಿನವೂ ಸಂಚಾರ ಮಾಡಲಿದೆ.

ಮಂಗಳೂರಿನಿಂದ ಬೆಳಗ್ಗೆ 8.30 ಕ್ಕೆ ಹೊರಡುವ ವಂದೇ ಭಾರತ್ ರೈಲು ಮಧ್ಯಾಹ್ನ 1.15 ಕ್ಕೆ ಗೋವಾದ ಮಡಗಾಂವ್ ತಲುಪಲಿದೆ. ಮತ್ತೆ ಸಂಜೆ ಮಡಗಾಂವ್ ನಿಂದ 6.10ಕ್ಕೆ ಹೊರಟು ರಾತ್ರಿ 10.45ಕ್ಕೆ ಮಂಗಳೂರು ತಲುಪಲಿದೆ.

ಈ ರೈಲಿಗೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ಕಡೆ ಮಾತ್ರ ನಿಲುಗಡೆ ಇರಲಿದೆ. ಇದು ಎಂಟು ಬೋಗಿಗಳ ಹವಾನಿಯಂತ್ರಿತ ವ್ಯವಸ್ಥೆಯ ರೈಲಾಗಿದ್ದು, ಏರ್ ಲೈನ್ ಮಾದರಿ ಸೀಟುಗಳ ಜೊತೆಗೆ ಎಕ್ಸಿಕ್ಯುಟಿವ್ ಚೇರ್​​ಗಳ ವ್ಯವಸ್ಥೆ ಇದರಲ್ಲಿದೆ. ಆನ್​​ಬೋರ್ಡ್ ಸಸ್ಯಹಾರಿ ಮತ್ತು ಮಾಂಸಹಾರಿ ಊಟದ ವ್ಯವಸ್ಥೆ ಕೂಡ ರೈಲಿನಲ್ಲಿದೆ.

ಇದನ್ನೂ ಓದಿ: ನಾಳೆಯಿಂದ ಮಂಗಳೂರು – ಗೋವಾ ವಂದೇ ಭಾರತ್‌ ರೈಲು: ಪ್ರಾಯೋಗಿಕ ಸಂಚಾರ ಯಶಸ್ವಿ

ಆನ್‌ಬೋರ್ಡ್ ವೈ-ಫೈ ಮತ್ತು ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಔಟ್‌ಲೆಟ್‌ಗಳು ಮತ್ತು ರೀಡಿಂಗ್ ಲೈಟ್‌ಗಳ ಸೌಲಭ್ಯ ಇದೆ. ಜತೆಗೆ ಸ್ವಯಂಚಾಲಿತ ಬಾಗಿಲುಗಳು, ಸ್ಮೋಕ್ ಅಲರ್ಟ್, ಸಿಸಿಟಿವಿ ಕ್ಯಾಮೆರಾಗಳು, ಸೆನ್ಸಾರ್ ಆಧಾರಿತ ವಾಶ್ ಬೇಸಿನ್ ಕೂಡ ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:54 pm, Fri, 29 December 23

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ