Crime Updates: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ, ಪ್ರೇಮಿ ಜೊತೆ ಸೇರಿ ಗಂಡನ ಕೊಲೆ

ಪಿಯುಸಿ ವಿದ್ಯಾರ್ಥಿಯನ್ನು 2- 3 ತಿಂಗಳುಗಳಿಂದ ವೇಶ್ಯಾವಾಟಿಕೆ ಬಳಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಗ್ರಾಹಕರ ರೀತಿಯಲ್ಲಿ ಬಂದು ಲೈಂಗಿಕ ‌ಕಿರುಕುಳ ನೀಡಿದ ಮೂವರ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ 3 ಮಂದಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Crime Updates: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ, ಪ್ರೇಮಿ ಜೊತೆ ಸೇರಿ ಗಂಡನ ಕೊಲೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Feb 09, 2022 | 3:07 PM

ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರು ಸಿಸಿಬಿ ಪೊಲೀಸರು ಈ ಪ್ರಕರಣದ ಬೆನ್ನು ಬಿದ್ದಿದ್ದಾರೆ. ನಗರದ ನಂದಿಗುಡ್ಢ ರಿಯಾನ್ ರೆಸಿಡೆನ್ಸಿಯ ಪೆಂಟ್ ಹೌಸ್ ನಲ್ಲಿ ಹೈಟೆಕ್ ವೇಶ್ಯೆವಾಟಿಕೆ ಪ್ರಕರಣ ನಡೆಯುತ್ತಿರುವುದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 6 ಜನರನ್ನು ಮಂಗಳೂರು ಪೊಲೀಸರು‌ ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಒಟ್ಟು 10 ಜನರ ವಿರುದ್ಧ ಪೊಕ್ಸೊ ಪ್ರಕರಣ ದಾಖಲು ಮಾಡಲಾಗಿದೆ.

ನಂದಿಗುಡ್ಡದ ರಿಯಾನಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್​ನ ಪೆಂಟ್ ಹೌಸ್​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿತ್ತು. ವಿದ್ಯಾರ್ಥಿನಿಯರನ್ನು ಬೆದರಿಸಿ ವೇಶ್ಯಾವಾಟಿಕೆಗೆ ದೂಡಿದ್ದರು ಎಂದು ಹೇಳಲಾಗಿದೆ. 3 ಮಹಿಳೆಯರು ಸೇರಿದಂತೆ 6 ಜನರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ಇಟ್ಟುಕೊಂಡು ವಿದ್ಯಾರ್ಥಿಗೆ ಆರೋಪಿಗಳು ಬ್ಲಾಕ್ ಮೇಲ್ ಮಾಡುತ್ತಿದ್ದರು. ಪಿಯುಸಿ ವಿದ್ಯಾರ್ಥಿಯನ್ನು 2- 3 ತಿಂಗಳುಗಳಿಂದ ವೇಶ್ಯಾವಾಟಿಕೆ ಬಳಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಗ್ರಾಹಕರ ರೀತಿಯಲ್ಲಿ ಬಂದು ಲೈಂಗಿಕ ‌ಕಿರುಕುಳ ನೀಡಿದ ಮೂವರ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ 3 ಮಂದಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹಾಸನ: ಪ್ರೇಮಿ ಜೊತೆ ಸೇರಿ ಗಂಡನ ಕೊಲೆ; ವ್ಯಕ್ತಿ ಬಂಧನ

ಹಾಸನ ಜಿಲ್ಲೆ ಕಾವಲುಹೊಸೂರಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರೇಮಿ ಜೊತೆ ಸೇರಿ ಗಂಡನನ್ನೇ ಕೊಲ್ಲಿಸಿದ ಖತರ್ನಾಕ್ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ಜನವರಿ 31 ರಂದು ಮಕ್ಕಳನ್ನು ಶಾಲೆಯಿಂದ ಕರೆತರಲು ತೆರಳುವ ವೇಳೆ ಬೈಕ್ ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಕಾವಲುಹೊಸೂರು ಗ್ರಾಮದ ಆನಂದ್ (42) ಕೊಲೆ ನಡೆದಿತ್ತು. ಕೊಲೆ ಆರೋಪದಲ್ಲಿ ಪತ್ನಿ ಸುನಿತಾ ಹಾಗು ಲವರ್ ಬಂಧನ ಮಾಡಲಾಗಿದೆ. ಗಂಡನಿಗೆ ವಿಚಾರ ಗೊತ್ತಾಗಿ ಆಡ್ಡಿಯಾಗುತ್ತಾನೆ ಎಂದು ಬೆಂಗಳೂರಿನ ಇಬ್ಬರಿಗೆ ಸುಪಾರಿಕೊಟ್ಟು ಕೊಲೆ ನಡೆಸಲಾಗಿದೆ. ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಕೊಲೆ ಆರೋಪದಲ್ಲಿ ಪತ್ನಿ ಸುನಿತಾ ಹಾಗು ಲವರ್ ನವೀನ್ ಬಂಧನ ಮಾಡಲಾಗಿದೆ.

ಧಾರವಾಡ: ಕಬ್ಬಿನ ಗದ್ದೆಗೆ ನುಗ್ಗಿ ಕೂಲಿಕಾರರ ಮೇಲೆ ದೌರ್ಜನ್ಯ

ಕಬ್ಬಿನ ಗದ್ದೆಗೆ ನುಗ್ಗಿ ಕೂಲಿಕಾರರ ಮೇಲೆ ದೌರ್ಜನ್ಯ ಪ್ರಕರಣ ನಡೆದಿದೆ. ರೌಡಿಶೀಟರ್ ಅರ್ಜುನ್ ವಡ್ಡರ್ ಕೃತ್ಯ ಎಸಗಲಾಗಿದೆ. ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಅರುಣ ಶಿರಹಟ್ಟಿ ಕುಟುಂಬಕ್ಕೆ ಸೇರಿದ ಎರಡೂವರೆ ಎಕರೆ ಜಮೀನಿನಲ್ಲಿ ನಿಂಗಪ್ಪ ಸಾಗುವಳಿ ಮಾಡುತ್ತಿದ್ದಾರೆ. ಇದೀಗ ನಿಂಗಪ್ಪ ಕಬ್ಜಾದ ಜಮೀನಿಗೆ ನುಗ್ಗಿ ಗಲಾಟೆ ಮಾಡಲಾಗಿದೆ. ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ‌ ಹಲ್ಲೆ ನಡೆಸಲಾಗಿದೆ. ಲಕ್ಷ್ಮೀಬಾಯಿ ಎಂಬ ಮಹಿಳೆ ಹಲ್ಲೆಗೊಳಗಾಗಿದ್ದಾರೆ. ಜಮೀನಿಗೆ ಏಕಾಏಕಿ ನುಗ್ಗಿ ಗಲಾಟೆ ಮಾಡಲಾಗಿದೆ. ಕಬ್ಬು ಕಟಾವು ಮಾಡುತ್ತಿದ್ದ ಹೊಸಪೇಟೆ ಮೂಲದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಅರ್ಜುನ ಎಂಬಾತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಳ್ನಾವರ ಪೊಲೀಸರು ಭೇಟಿ ನೀಡಿದ್ದಾರೆ.

ಮಂಡ್ಯ: ಕೆಆರ್‌ಎಸ್ ಸಾಮೂಹಿಕ ಹತ್ಯೆ ಪ್ರಕರಣ; ಆರೋಪಿ ಲಕ್ಷ್ಮಿ ವಿರುದ್ದ ಸಂಬಂಧಿಕರ ಆಕ್ರೋಶ

ಕೆಆರ್‌ಎಸ್ ಸಾಮೂಹಿಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಲಕ್ಷ್ಮಿ ವಿರುದ್ದ ಸಂಬಂಧಿಕರ ಆಕ್ರೋಶ ಕೇಳಿಬಂದಿದೆ. ಆರೋಪಿಯನ್ನು ನಮ್ಮ ವಶಕ್ಕೆ ನೀಡಿ. ಆಕೆಯನ್ನು ಕೆಆರ್​ಎಸ್ ವೃತ್ತದಲ್ಲಿ ನಿಲ್ಲಿಸಿ ಬೆಂಕಿ ಹಚ್ಚುತ್ತೇವೆ ಎಂದು ಟಿವಿ9 ಬಳಿ ಮೃತರ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯಾಲಯ ಪೊಲೀಸ್ ಠಾಣೆ ವಿಚಾರಣೆ ಏನು ಬೇಡ. ಆಕೆಗೆ ಗಲ್ಲು ಶಿಕ್ಷೆ ಕೊಡಿಸಿ ಮೃತರ ಆತ್ಮಕ್ಕೆ ಶಾಂತಿ ದೊರಕಿಸಿ. ಇದು ಎಲ್ಲರಿಗೂ ಪಾಠವಾಗಬೇಕು ಎಂದು ಮೃತರ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀದರ್​: ಹುಮ್ನಾಬಾದ್ ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ ಮೇಲಿನ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಚಿಟಗುಪ್ಪಾ ತಾಲೂಕು ಕಚೇರಿ ಎದುರು ಕಲ್ಯಾಣ ಕರ್ನಾಟಕ ಸರ್ವ ಸಮುದಾಯದ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: Crime News: ಯುವತಿ ವಿಚಾರಕ್ಕೆ ವಿದ್ಯಾರ್ಥಿಗೆ ಚಾಕು ಇರಿತ, ಮೊಬೈಲ್ ಬಳಕೆ ಕಡಿಮೆ ಮಾಡಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ವರನಟ ಡಾ. ರಾಜ್​​ಕುಮಾರ್ ಪುತ್ಥಳಿ ಕಳವು; ಇಲ್ಲಿದೆ ಕ್ರೈಂ ಅಪ್ಡೇಟ್ಸ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ