Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮುಡಿಪು ಜಂಕ್ಷನ್​ ರಸ್ತೆಯಲ್ಲೇ ಸೌಹಾರ್ದ ಇಫ್ತಾರ್ ಕೂಟ; ವಿಡಿಯೋ ವೈರಲ್

ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಎಂಬಲ್ಲಿ ರಸ್ತೆ ಮಧ್ಯೆಯೇ ಸೌಹಾರ್ದ ಇಫ್ತಾರ್ ಕೂಟ ಆಯೋಜನೆ ಮಾಡಲಾಗಿದೆ. ಒಂದು ಬದಿ ರಸ್ತೆ ತಡೆದು ಸಹಭೋಜನ ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಬಗ್ಗೆ ಸ್ಥಳೀಯರಿಂದ ಯಾವುದೇ ವಿರೋಧ ವ್ಯಕ್ತವಾಗದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಕಾರಣವಾಗಿದೆ.

Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on:Mar 30, 2024 | 7:10 PM

ಮಂಗಳೂರು, ಮಾ.30: ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಗಳಲ್ಲಿ ನಮಾಜ್ ಮಾಡುವುದು, ಇಫ್ತಾರ್ (Iftar) ಕೂಟ ಆಯೋಜನೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತದೆ. ಇದೀಗ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಅಂತಹದ್ದೇ ಒಂದು ಘಟನೆ ನಡೆದಿದೆ. ಉಳ್ಳಾಲ (Ullal) ತಾಲೂಕಿನ ಮುಡಿಪು ಎಂಬಲ್ಲಿ ಸೌಹಾರ್ದ ಹೆಸರಿನಲ್ಲಿ ಒಂದು ಬದಿಯ ರಸ್ತೆಯನ್ನು ತಡೆದು ಇಫ್ತಾರ್ ಕೂಟ ನಡೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Viral Video) ಆಗುತ್ತಿದೆ.

ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುಡಿಪು ಜಂಕ್ಷನ್​ನಲ್ಲಿ ಆಟೋ ರಾಜಕನ್ಮಾರ್ ಸಂಘಟನೆಯಿಂದ ಇಫ್ತಾರ್ ಕೂಟ ನಡೆಸಲಾಗಿದೆ. ರಿಕ್ಷಾ ಚಾಲಕರೆಲ್ಲರೂ ಒಟ್ಟಾಗಿ ಸೇರಿಕೊಂಡು ನಡೆಸಿದ ಈ ಇಫ್ತಾರ್ ಕೂಟದಲ್ಲಿ ರಿಕ್ಷಾ ಚಾಲಕರು, ವರ್ತಕರು, ಸ್ಥಳೀಯರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: Ramadan 2024: ಇಂದಿನಿಂದ ರಂಜಾನ್; ಬೆಂಗಳೂರು ಸೇರಿ ಭಾರತದ ಪ್ರಮುಖ ನಗರಗಳ ಸೆಹ್ರಿ, ಇಫ್ತಾರ್ ಸಮಯ ಇಲ್ಲಿದೆ

ಒಂದು ಭಾಗದ ರಸ್ತೆ ಮಧ್ಯೆ ಟೇಬಲ್, ಚಯರ್ ಇಟ್ಟು ಸಹಭೋಜನ ಮಾಡಲಾಗಿದೆ. ಇದರ ವಿಡಿಯೋವನ್ನು Frontalforce ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ. ಅದಾಗ್ಯೂ, ಸ್ಥಳೀಯರಿಂದ ಯಾವುದೇ ವಿರೋಧ ವ್ಯಕ್ತವಾಗಿಲ್ಲ ಎಂದು ತಿಳಿದುಬಂದಿದೆ.

ಈ ಹಿಂದೆ ಇಫ್ತಾರ್ ಕಾರ್ಯಕ್ರಮವನ್ನು ಸಭಾಂಗಣವೊಂದರಲ್ಲಿ ಆಯೋಜಿಸಲಾಗಿತ್ತು. ಆದರೆ ಹಿಂದೂ ಭಾಂದವರಿಗೆ ಭಾಗವಹಿಸಲು ಸಾಧ್ಯವಾಗದ ಕಾರಣ ಮುಡಿಪು ಜಂಕ್ಷನ್​ಗೆ ಈ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.

ಮುಂದೆ ಕಟ್ಟಡ ಕಾರ್ಮಿಕರ ಜೊತೆಗೂ ಇಫ್ತಾರ್ ಕೂಟ ಆಯೋಜಿಸುವ ಚಿಂತನೆ ನಡೆಸಲಾಗಿದೆ. ರಂಜಾನ್‌ ಸಂದರ್ಭ ಒಂದು ತಿಂಗಳ ಕಾಲ ಉಪವಾಸ ಆಚರಿಸುವ ಮುಸ್ಲಿಮರು ಸೂರ್ಯಾಸ್ತದ ಬಳಿಕ ರೋಜಾ ಮುರಿದು ನಡೆಸುವ ಇಫ್ತಾರ್ ಕೂಟ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 pm, Sat, 30 March 24

ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ