ಮಂಗಳೂರು, ಮಾ.30: ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಗಳಲ್ಲಿ ನಮಾಜ್ ಮಾಡುವುದು, ಇಫ್ತಾರ್ (Iftar) ಕೂಟ ಆಯೋಜನೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತದೆ. ಇದೀಗ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಅಂತಹದ್ದೇ ಒಂದು ಘಟನೆ ನಡೆದಿದೆ. ಉಳ್ಳಾಲ (Ullal) ತಾಲೂಕಿನ ಮುಡಿಪು ಎಂಬಲ್ಲಿ ಸೌಹಾರ್ದ ಹೆಸರಿನಲ್ಲಿ ಒಂದು ಬದಿಯ ರಸ್ತೆಯನ್ನು ತಡೆದು ಇಫ್ತಾರ್ ಕೂಟ ನಡೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Viral Video) ಆಗುತ್ತಿದೆ.
ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುಡಿಪು ಜಂಕ್ಷನ್ನಲ್ಲಿ ಆಟೋ ರಾಜಕನ್ಮಾರ್ ಸಂಘಟನೆಯಿಂದ ಇಫ್ತಾರ್ ಕೂಟ ನಡೆಸಲಾಗಿದೆ. ರಿಕ್ಷಾ ಚಾಲಕರೆಲ್ಲರೂ ಒಟ್ಟಾಗಿ ಸೇರಿಕೊಂಡು ನಡೆಸಿದ ಈ ಇಫ್ತಾರ್ ಕೂಟದಲ್ಲಿ ರಿಕ್ಷಾ ಚಾಲಕರು, ವರ್ತಕರು, ಸ್ಥಳೀಯರು ಭಾಗಿಯಾಗಿದ್ದಾರೆ.
ಇದನ್ನೂ ಓದಿ: Ramadan 2024: ಇಂದಿನಿಂದ ರಂಜಾನ್; ಬೆಂಗಳೂರು ಸೇರಿ ಭಾರತದ ಪ್ರಮುಖ ನಗರಗಳ ಸೆಹ್ರಿ, ಇಫ್ತಾರ್ ಸಮಯ ಇಲ್ಲಿದೆ
ಒಂದು ಭಾಗದ ರಸ್ತೆ ಮಧ್ಯೆ ಟೇಬಲ್, ಚಯರ್ ಇಟ್ಟು ಸಹಭೋಜನ ಮಾಡಲಾಗಿದೆ. ಇದರ ವಿಡಿಯೋವನ್ನು Frontalforce ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ. ಅದಾಗ್ಯೂ, ಸ್ಥಳೀಯರಿಂದ ಯಾವುದೇ ವಿರೋಧ ವ್ಯಕ್ತವಾಗಿಲ್ಲ ಎಂದು ತಿಳಿದುಬಂದಿದೆ.
ಈ ಹಿಂದೆ ಇಫ್ತಾರ್ ಕಾರ್ಯಕ್ರಮವನ್ನು ಸಭಾಂಗಣವೊಂದರಲ್ಲಿ ಆಯೋಜಿಸಲಾಗಿತ್ತು. ಆದರೆ ಹಿಂದೂ ಭಾಂದವರಿಗೆ ಭಾಗವಹಿಸಲು ಸಾಧ್ಯವಾಗದ ಕಾರಣ ಮುಡಿಪು ಜಂಕ್ಷನ್ಗೆ ಈ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.
ಮುಂದೆ ಕಟ್ಟಡ ಕಾರ್ಮಿಕರ ಜೊತೆಗೂ ಇಫ್ತಾರ್ ಕೂಟ ಆಯೋಜಿಸುವ ಚಿಂತನೆ ನಡೆಸಲಾಗಿದೆ. ರಂಜಾನ್ ಸಂದರ್ಭ ಒಂದು ತಿಂಗಳ ಕಾಲ ಉಪವಾಸ ಆಚರಿಸುವ ಮುಸ್ಲಿಮರು ಸೂರ್ಯಾಸ್ತದ ಬಳಿಕ ರೋಜಾ ಮುರಿದು ನಡೆಸುವ ಇಫ್ತಾರ್ ಕೂಟ ಇದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:03 pm, Sat, 30 March 24