AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ರಾಜ್ಯ ಹೇಳಿಕೆ: ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿ ಉಲ್ಟಾ ಹೊಡೆದ ಸಚಿವ ಆನಂದ್ ಸಿಂಗ್

ಉತ್ತರ ಕರ್ನಾಟಕ ರಾಜ್ಯ ಆಗುತ್ತೆ, ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅಂತ ಹೇಳಿರುವುದಾಗಿ ತಮ್ಮ ಹೇಳಿಕೆಗೆ ಸಚಿವ ಆನಂದ್ ಸಿಂಗ್ ಸಮಜಾಯಸಿ ನೀಡಿದ್ದಾರೆ.

ಪ್ರತ್ಯೇಕ ರಾಜ್ಯ ಹೇಳಿಕೆ: ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿ ಉಲ್ಟಾ ಹೊಡೆದ ಸಚಿವ ಆನಂದ್ ಸಿಂಗ್
ಸಚಿವ ಆನಂದ್ ಸಿಂಗ್
TV9 Web
| Edited By: |

Updated on:Dec 17, 2022 | 10:34 AM

Share

ಮಂಗಳೂರು: ಉತ್ತರ ಕರ್ನಾಟಕ ರಾಜ್ಯ ಆಗುತ್ತೆ, ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅಂತ ಹೇಳಿರುವುದಾಗಿ ತಮ್ಮ ಹೇಳಿಕೆಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಸಮಜಾಯಸಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಹೇಳಿಕೆ ಬಗ್ಗೆ ಉಲ್ಟಾ ಹೊಡೆದ ಅವರು, ಮಾಧ್ಯಮ ಸ್ನೇಹಿತರು ನನ್ನ ಹೇಳಿಕೆಯನ್ನ ಸರಿಪಡಿಸಿಕೊಳ್ಳಬೇಕು. ಉತ್ತರ ಕರ್ನಾಟಕ (North Karnataka) ರಾಜ್ಯ ಆಗುತ್ತದೆ, ವಿಜಯನಗರ (Vijayanagara) ರಾಜಧಾನಿ ಆಗುತ್ತದೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಎಂದರು.

ಮುಂದುವರೆದು ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ವಿಜಯನಗರ ರಾಜಧಾನಿಯಾದರೆ, ಜಿಲ್ಲಾ ಕೇಂದ್ರ ಯಾವುದಾಗುತ್ತದೆ ಅಂದರೆ ರಾಯಚೂರು, ಬೀದರ್, ಗುಲ್ಬರ್ಗಾ, ಹೊಸಪೇಟೆ, ಬಳ್ಳಾರಿ. ಉತ್ತರ ಕರ್ನಾಟಕ ಅಂದರೆ ನಮ್ಮದು ಕಲ್ಯಾಣ ಕರ್ನಾಟಕ. ಕಲ್ಯಾಣ ಕರ್ನಾಟಕಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅನ್ನೋ ಅರ್ಥದಲ್ಲಿ ಹೇಳಿದ್ದು. ಪ್ರತ್ಯೇಕ ರಾಜ್ಯ ಆಗುತ್ತದೆ ಅನ್ನೋದನ್ನ ಮಾಧ್ಯಮದವರು ಸರಿ ಪಡಿಸಬೇಕು ಎಂದರು.

ಇದನ್ನೂ ಓದಿ: ತುಂಗಭದ್ರಾ ನದಿ ಆಂಧ್ರದಲ್ಲಿದ್ಯಾ? ಶಿಕ್ಷಣ ಇಲಾಖೆಯಿಂದ ಮತ್ತೊಂದು ಯಡವಟ್ಟು, ವಿವಾದದ ಸುಳಿಯಲ್ಲಿ CBSE ಪಠ್ಯ..!

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ಟರಳ್ಳಿ ಗ್ರಾಮದ ಆಂಜನೇಯ ದೇಗುಲದ ಬಳಿ ಡಿ.15ರಂದು ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಆನಂದ್ ಸಿಂಗ್, ಜಿಲ್ಲಾ ಕೇಂದ್ರದಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಜಿಲ್ಲಾ ಕಚೇರಿ ಕಾಮಗಾರಿ ಆರಂಭವಾಗಿದೆ. ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಮಾತಿನ ಭರದಲ್ಲಿ ಹೇಳಿಕೆ ನೀಡಿದ್ದರು. ಈ ಹಿಂದೆ ಉಮೇಶ್ ಕತ್ತಿ ಅವರು ಕೂಡ ಆಗಾಗ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಹೇಳುತ್ತಿದ್ದರು.

ವಿಜಯನಗರವನ್ನು ಕರ್ನಾಟಕದ 31ನೇ ಜಿಲ್ಲೆಯಾಗಿಸಿದ ಕೀರ್ತಿ ಸಚಿವ ಆನಂದ್ ಸಿಂಗ್‌ ಅವರಿಗೆ ಸಲ್ಲುತ್ತದೆ. ಹೀಗಾಗಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬಹುದಾ ಎಂಬ ಚರ್ಚೆಗಳು ನಡೆಯುತ್ತಿವೆ. 2020ರಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಿಂದ ಬೇರ್ಪಡಿಸಿ 2021ರ ಫೆಬ್ರವರಿ 8ರಂದು ಕರ್ನಾಟಕದಲ್ಲಿ 31ನೇ ಜಿಲ್ಲೆಯನ್ನಾಗಿ ವಿಜಯನಗರ ಜಿಲ್ಲೆಯನ್ನು ರಚಿಸಲಾಯಿತು. ಅಂದು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರವು 2020ರ ನವೆಂಬರ್‌ 18ರಂದು ಜಿಲ್ಲೆಯ ರಚನೆಗೆ ಅನುಮೋದನೆ ನೀಡಿ ಅಧಿಸೂಚನೆ ಹೊರಡಿಸಿದ್ದರು.

ತುಳು ನಾಡಿನ ದೈವಗಳ ಬಗ್ಗೆ ಹೆಚ್ಚಿದ ನಂಬಿಕೆ

ತುಳು ನಾಡಿನ ದೈವಗಳ ಬಗ್ಗೆ ಇದೀಗ ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಿಗರಲ್ಲಿ ನಂಬಿಕೆ ಹೆಚ್ಚಾಗಿದೆ. ಬೇರೆಬೇರೆ ಕಡೆಗಳಿಂದ ಬರುವ ಜನರು, ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳು, ಪ್ರವಾಸಿಗರು ದೈವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ನಟ ಶಿವರಾಜ್ ಕುಮಾರ್ ಅವರು ಕೊರಗಜ್ಜನ ಸ್ಥಾನಕ್ಕೆ ಭೇಟಿ ನೀಡಿದ್ದರು. ಇದೀಗ ದೈವಾರಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಆನಂದ್ ಸಿಂಗ್ ಭೇಟಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆನಂದ್ ಸಿಂಗ್ ಭೇಟಿ ನೀಡಿದ್ದಾರೆ. ಇಲ್ಲಿ ಕಲ್ಲುರ್ಟಿ ದೈವದ ಕೋಲ ಸೇವೆಯಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು. ಇದಕ್ಕೂ ಮುನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Sat, 17 December 22

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್