AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು-ಕಾಸರಗೋಡಿನ ನಡುವೆ ಒಂದು ವಾರ ಬಸ್ ಸಂಚಾರ ಸ್ಥಗಿತ

Kerala Covid 19: ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ನಾಳೆಯಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿ ಯಾವುದೇ ಬಸ್ ಸಂಚಾರ ಲಭ್ಯವಿರುವುದಿಲ್ಲ.

ಮಂಗಳೂರು-ಕಾಸರಗೋಡಿನ ನಡುವೆ ಒಂದು ವಾರ ಬಸ್ ಸಂಚಾರ ಸ್ಥಗಿತ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 31, 2021 | 9:01 PM

Share

ಮಂಗಳೂರು: ಕೇರಳದಲ್ಲಿ ಕೊವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಮಂಗಳೂರು-ಕಾಸರಗೋಡು (Mangaluru-Kasaragod) ಮಧ್ಯೆ ಒಂದು ವಾರಗಳ ಕಾಲ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧರಿಸಲಾಗಿದೆ. ಕೊವಿಡ್-19 (Covid 19) ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ನಾಳೆಯಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿ ಯಾವುದೇ ಬಸ್ ಸಂಚಾರ ಲಭ್ಯವಿರುವುದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನ ನಡೆಸುವಂತಿಲ್ಲ. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಲಾಗುವುದು. ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ನಿಯಮ ಉಲ್ಲಂಘಿಸಿದರೆ ಮಾಲೀಕರ ಮೇಲೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ತೀರ್ಮಾನಿಸಲಾಗಿದೆ.

ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ವಿದ್ಯಾರ್ಥಿ ನಿಲಯಗಳಲ್ಲಿಯೇ 1 ವಾರ ಕ್ವಾರಂಟೈನ್‍ ಮಾಡಬೇಕಿದೆ. ಕುಟುಂಬದಲ್ಲಿ ಇಬ್ಬರಿಗಿಂತ ಹೆಚ್ಚಿನವರಿಗೆ ಸೋಂಕು ಕಂಡುಬಂದರೆ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಘೋಷಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: 

ಕೊರೊನಾ 3ನೇ ಅಲೆ ಆತಂಕ: ಕೊವಿಡ್ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಳಕ್ಕೆ ಬಸವರಾಜ ಬೊಮ್ಮಾಯಿ ಸೂಚನೆ

ಕೊವಿಡ್ ಮತ್ತು ಅಪರಾಧ ಚಟುವಟಿಕೆಗಳ ಹೆಚ್ಚಳದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕಳವಳ 

(Mangaluru Kasaragod Buses stopped by One week due to covid cases increase)

Published On - 8:42 pm, Sat, 31 July 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್