ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್‌

ಮಂಗಳೂರಿನ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೂವರನ್ನು ಬಂಧಿಸುವ ಮೂಲಕ ಪೊಲೀಸರು ಪ್ರಕರಣವನ್ನು ಬೇಧಿಸಿದ್ದರು. ಹೀಗಿರುವಾಗ ಇಂದು ಮಹಜರಿಗೆ ಕರೆದುಕೊಂಡು ಹೋಗುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಪ್ರಮುಖ ಆರೋಪಿಗೆ ಫೈರಿಂಗ್ ಮಾಡಿದ್ದಾರೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್‌
ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನ: ಕೋಟೆಕಾರ್ ಬ್ಯಾಂಕ್ ದರೋಡೆ ಆರೋಪಿ ಮೇಲೆ ಫೈರಿಂಗ್
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Jan 21, 2025 | 6:32 PM

ಮಂಗಳೂರು, ಜನವರಿ 21: ಮಂಗಳೂರಿನ ಕೋಟೆಕಾರ್ ಬ್ಯಾಂಕ್​​ನಲ್ಲಿ ಚಿನ್ನಾಭರಣ, ನಗದು ದರೋಡೆ (Bank Robbery) ಕೇಸ್​ಗೆ ಸಂಬಂಧಿಸಿದಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್​ಮಣಿ ಕಾಲಿಗೆ ಫೈರಿಂಗ್​ ಮಾಡಲಾಗಿದೆ.

ನಿನ್ನೆ ತಮಿಳುನಾಡಿನ ತಿರುವನ್ವೇಲಿ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ತಮಿಳುನಾಡಿನಿಂದ ಆರೋಪಿಗಳನ್ನ ಮಂಗಳೂರಿನ ಕೆ.ಸಿ.ರೋಡ್​ಗೆ ಮಹಜರು ಮಾಡಲು ಕರೆತರಲಾಗುತ್ತಿತ್ತು.

ಇದನ್ನೂ ಓದಿ: ಮಂಗಳೂರಿನ ಕೋಟೆಕಾರು ಬ್ಯಾಂಕ್​​ ದರೋಡೆ: ಮೂವರು ಆರೋಪಿಗಳ ಬಂಧನ

ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿಯನ್ನ ನಿನ್ನೆ ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಿದ್ದ ಪೊಲೀರು ಇಂದು ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದರು. ಆದರೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಅಲಂಕಾರು ಗುಡ್ಡ ಬಳಿ ಆರೋಪಿ ಕಣ್ಣನ್‌ಮಣಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಇನ್ಸ್‌ಪೆಕ್ಟರ್‌ ರಫೀಕ್‌, ಆರೋಪಿ ಮೇಲೆ ಫೈರಿಂಗ್‌ ಮಾಡಿದ್ದಾರೆ. ಸದ್ಯ ಆತನನ್ನ ದೇರಳಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ಸ್ ಪೆಕ್ಟರ್ ಸೇರಿ ಮೂವರಿಗೆ ಗಾಯ

ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಸೇರಿ ಮೂವರಿಗೆ ಗಾಯವಾಗಿದೆ. ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ, ಸಿಬ್ಬಂದಿ ನಿತಿನ್ ಹಾಗೂ ಅಂಜನಪ್ಪಗೆ ಗಾಯಗಳಾಗಿವೆ. ಸಂಜೆ 4.20ರ ವೇಳೆ ತಲಪಾಡಿ ಅಲಂಗಾರು ಗುಡ್ಡೆ ಬಳಿ ಪೊಲೀಸರು ಮಹಜರಿಗೆ ಕರೆ ತಂದಿದ್ದರು. ಈ ವೇಳೆ ಬಿಯರ್ ಬಾಟಲಿಯಿಂದ ಸಿಸಿಬಿ ಸಿಬ್ಬಂದಿ ಅಂಜನಪ್ಪ ಹಾಗೂ ಉಳ್ಳಾಲ ಠಾಣೆ ಸಿಬ್ಬಂದಿ ನಿತಿನ್ ಮೇಲೆ ಆರೋಪಿಗಳು ದಾಳಿ ಮಾಡಿದ್ದಾರೆ. ತಡೆಯಲು ಬಂದ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಮೇಲೂ ದಾಳಿ ಮಾಡಿದ್ದು, ಆಗ ಸ್ಥಳದಲ್ಲೇ ಇದ್ದ ಸಿಸಿಬಿ ಇನ್ಸ್ ಪೆಕ್ಟರ್ ರಫೀಕ್​ರಿಂದ ಕಣ್ಣನ್ ಕಾಲಿಗೆ ಫೈರಿಂಗ್ ಮಾಡಲಾಗಿದೆ.

ಮಂಗಳೂರು ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ನಿನ್ನೆಯಷ್ಟೇ ಖಾಕಿ ಬಲೆಗೆ ಬಿದ್ದಿದ್ದಾರೆ. ಜನವರಿ 17 ರಂದು ಕೋಟೆಕಾರು ಸಹಕಾರಿ ಬ್ಯಾಂಕ್‌ಗೆ ನುಗ್ಗಿ ದರೋಡೆ ಮಾಡಿದ್ದ ಗ್ಯಾಂಗ್‌ ಕೇರಳ ಮೂಲಕ ತಮಿಳುನಾಡು ಸೇರಿದ್ದರು. ಖಚಿತ ಮಾಹಿತಿ ಮೇರೆಗೆ ಗ್ಯಾಂಗ್‌ನ ಮೂವರನ್ನು ಪೊಲೀಸರು ಲಾಕ್ ಮಾಡಿದ್ದರು.

ಇದನ್ನೂ ಓದಿ: ಮಂಗಳೂರು: ಕದ್ದ ಗೋಣಿ ಚಿನ್ನದ ಸಹಿತ 700 ಕಿ.ಮೀ. ಕಾರಿನಲ್ಲೇ ಪ್ರಯಾಣಿಸಿದ್ದ ದರೋಡೆಕೋರರು!

ಕೋಟೆಕಾರು ಬ್ಯಾಂಕ್‌ ಲೂಟಿ ಮಾಡಿದವರು ತಮಿಳುನಾಡಿನವರೇ ಆದರೂ, ಇವರೆಲ್ಲಾ ಮುಂಬೈನ ನಟೋರಿಯಸ್‌ ಧಾರಾವಿ ಗ್ಯಾಂಗ್‌ನವರು. ಕೋಟೆಕಾರ್ ಬ್ಯಾಂಕ್ ದರೋಡೆಯ ಕಿಂಗ್ ಪಿನ್ ಮುರುಗನ್ ದರೋಡೆಯ ಕಂಪ್ಲೀಟ್ ಪ್ಲ್ಯಾನ್ ಸಿದ್ಧಪಡಿಸಿದ್ದೇ ಮುರುಗನ್​, ಧಾರಾವಿಯಲ್ಲಿ ಆಕ್ಟೀವ್ ಆಗಿದ್ದ ಮೊಸ್ಟ್ ಡೇಂಜರಸ್ ಗ್ಯಾಂಗ್, ಈ ಹಿಂದೆಯೂ ಹಲವು ದರೋಡೆ ನಡೆಸಿ ಪಳಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:43 pm, Tue, 21 January 25

ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ