AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kukke Subramanya: ಇಂದು ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ, ಇಲ್ಲಿದೆ ಲೈವ್ ವಿಡಿಯೊ

Kukke Subramanya: ಇಂದು ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ, ಇಲ್ಲಿದೆ ಲೈವ್ ವಿಡಿಯೊ

TV9 Web
| Updated By: ಆಯೇಷಾ ಬಾನು

Updated on:Nov 29, 2022 | 11:17 AM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಪ್ರಯುಕ್ತ ಕ್ಷೇತ್ರದ ದೇವರಾ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತಿದೆ.

ಮಂಗಳೂರು: ಕರ್ನಾಟಕದ ಪ್ರಸಿದ್ಧ ನಾಗಕ್ಷೇತ್ರ, ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subramanya) ಚಂಪಾ ಷಷ್ಠಿ (Champa Shashti 2022) ಪ್ರಯುಕ್ತ ಕ್ಷೇತ್ರದ ದೇವರಾ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತಿದೆ. ಇದರ ಲೈವ್ ಇಲ್ಲಿ ವೀಕ್ಷಿಸಿ.

ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ‌ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಕೊವಿಡ್ ನಿರ್ಬಂಧಗಳ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಬ್ರಹ್ಮರಥೋತ್ಸವಕ್ಕೆ ಹೆಚ್ಚಿನ ಜನರು ಸೇರಲು ಅವಕಾಶ ಸಿಕ್ಕಿರಲಿಲ್ಲ.

Published on: Nov 29, 2022 11:17 AM