AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರ ರಕ್ಷಣೆಗೆ ಕಾರ್ಯಾಚರಣೆ

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಮೋಂಟೆಪದವು ಬಳಿ ಮನೆಗಳ ಮೇಲೆ ಗುಡ್ಡ ಕುಸಿದು ಐವರು ಸಿಲುಕಿದ್ದು, ಇಬ್ಬರ ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರ ರಕ್ಷಣೆಗೆ ಕಾರ್ಯಾಚರಣೆ
ಮೋಂಟೆಪದವು ಬಳಿ ಮನೆಗಳ ಮೇಲೆ ಗುಡ್ಡ ಕುಸಿತ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma|

Updated on:May 30, 2025 | 9:04 AM

Share

ಮಂಗಳೂರು, ಮೇ 30: ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ (Monsoon Rainಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಫಾತಿಮಾ ನಯೀಮ (6) ಎನ್ನುವ ಮಗು ಮೃತಪಟ್ಟಿದೆ. ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.

ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ರಕ್ಷಣೆ ಮಾಡಿದ್ದರು. ಸದ್ಯ ಮೋಂಟೆಪದವು ಬಳಿ ಮೂವರ ರಕ್ಷಣೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಮಂಗಳೂರಿನ ಹಲವು ಪ್ರದೇಶಗಳು ಜಲಾವೃತ

ಭಾರಿ ಮಳೆಯ ಪರಿಣಾಮ ಮಂಗಳೂರು ಸುತ್ತಮುತ್ತಲಿನ ಲವು ಪ್ರದೇಶಗಳು ಜಲಾವೃತಗೊಂಡಿವೆ. ಉಳ್ಳಾಲ, ಕಲ್ಲಾಪು, ಬಗಂಬಿಲ, ಪಿಲಾ‌ರ್, ಅಂಬಿಕಾರಸ್ತೆ, ಕೋಟೆಕಾರು, ತಲಪಾಡಿ, ಪಾವೂರು, ಹರೇಕಳ, ಉಳಿಯ ಪ್ರದೇಶಗಳು ಜಲಾವೃತವಾಗಿವೆ.

ಇದನ್ನೂ ಓದಿ
Image
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ: ಶಾಲೆಗಳಿಗೆ ಇಂದು ರಜೆ
Image
ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​
Image
ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಕೊಲೆ ಬೆದರಿಕೆ
Image
ಕರ್ನಾಟಕದಲ್ಲಿ ಕೊರೋನಾ ಮಧ್ಯೆ ಡೆಂಘಿ, ಚಿಕುನ್ ಗುನ್ಯಾ ಟೆನ್ಷನ್ ಶುರು

50ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಕಲ್ಲಾಪುವಿನಲ್ಲಿ 50 ಕ್ಕೂ ಹೆಚ್ಚು ಮನೆಗಳಿಗೆ ನೆರೆಯಿಂದ ಸಮಸ್ಯೆಯಾಗಿದೆ. ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ತೀವ್ರ ಹಾನಿಯಾಗಿದ್ದು, ರಾತ್ರಿಯೇ ಸಂತ್ರಸ್ತ ಕುಟುಂಬವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪಟ್ಟಣ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಗ್ರಾಮ ಲೆಕ್ಕಿಗ ಸುರೇಶ್, ಮತ್ತಿತರ ಅಧಿಕಾರಿಗಳು ರಾತ್ರಿ ವೇಳೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆಗಳಿಗೆ ಇಂದು ರಜೆ

ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಮೇ 30) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರ: ಶಾಲೆಗಳಿಗೆ ಇಂದು ರಜೆ

ದಕ್ಷಿಣ ಕನ್ನಡ ಜೂನ್​ 2ರವರೆಗೂ ಭಾರಿ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 am, Fri, 30 May 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ