ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್
25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು.
ಮಂಗಳೂರು, ಮಾರ್ಚ್ 23: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (MUDA) ಆಯುಕ್ತ ಮನ್ಸೂರ್ ಅಲಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಆಯುಕ್ತ ಮನ್ಸೂರ್ ಅಲಿಯನ್ನು ರೆಡ್ ಆ್ಯಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಆಯುಕ್ತ ಮನ್ಸೂರ್ ಅಲಿ ಜೊತೆ ಬ್ರೋಕರ್ ಸಲೀಂ ಎಂಬುವವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುತ್ತಿದೆ…
Published On - 7:42 pm, Sat, 23 March 24