ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್

25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು.

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್
ಆಯುಕ್ತ ಮನ್ಸೂರ್​ ಅಲಿ
Edited By: ವಿವೇಕ ಬಿರಾದಾರ

Updated on: Mar 23, 2024 | 7:43 PM

ಮಂಗಳೂರು, ಮಾರ್ಚ್​ 23: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (MUDA) ಆಯುಕ್ತ ಮನ್ಸೂರ್ ಅಲಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ಡಿವೈಎಸ್​ಪಿ ಚೆಲುವರಾಜ್, ಇನ್ಸ್ಪೆಕ್ಟರ್​ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್​ ದಾಳಿ ಮಾಡಿ ಆಯುಕ್ತ ಮನ್ಸೂರ್​ ಅಲಿಯನ್ನು ರೆಡ್​ ಆ್ಯಂಡ್​ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಆಯುಕ್ತ ಮನ್ಸೂರ್​ ಅಲಿ ಜೊತೆ ಬ್ರೋಕರ್ ಸಲೀಂ ಎಂಬುವವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ…

Published On - 7:42 pm, Sat, 23 March 24

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us