ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ನಡುವೆ ಲವ್; ವಿಟ್ಲ ಪಿಯು ಕಾಲೇಜಿನ 18 ವಿದ್ಯಾರ್ಥಿಗಳು ಅಮಾನತು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿರುವ ಖಾಸಗಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿ ಮತ್ತು ಮುಸ್ಲಿಂ ವಿದ್ಯಾರ್ಥಿ ನಡುವಿನ ಲವ್ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಇಬ್ಬರ ಸಹಿತ ಒಟ್ಟು 18 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ನಡುವೆ ಲವ್; ವಿಟ್ಲ ಪಿಯು ಕಾಲೇಜಿನ 18 ವಿದ್ಯಾರ್ಥಿಗಳು ಅಮಾನತು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Dec 15, 2022 | 12:22 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಖಾಸಗಿ ಪದವಿಪೂರ್ವ ಕಾಲೇಜಿನ ಹಿಂದು ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ನಡುವಿನ ಪ್ರೇಮ ಪ್ರಕರಣ (Hindu girl and Muslim boy love case)ದ ವಿಚಾರದಲ್ಲಿ ವಿವಾದ ಉಂಟಾಗಿ ಒಟ್ಟು 18 ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆವರೆಗೆ ಅಮಾನತು (Students Suspended) ಮಾಡಿ ಕಾಲೇಜು ಪ್ರಾಂಶುಪಾಲರು ಆದೇಶಿಸಿದ್ದಾರೆ. ಈ ವಿಚಾರವಾಗಿ ಟಿವಿ9 ಜೊತೆ ಮಾತನಾಡಿದ ಪ್ರಾಂಶುಪಾಲ ಆದರ್ಶ, ನಾವು ಒಂದು ಪುಸ್ತಕದಲ್ಲಿ ದಾಖಲಿಸಿ ಸಸ್ಪೆಂಡ್ ಮಾಡಿದ್ದೇವೆ. ಕಾಲೇಜಿನಲ್ಲಿ ವಿಷಮ ವಾತಾವರಣ ಸೃಷ್ಟಿಯಾಗುವುದನ್ನು ತಪ್ಪಿಸಲು ತಾತ್ಕಾಲಿಕವಾಗಿ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ವಾಪಾಸ್ ತರಗತಿಗೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಂದು ಆಡಳಿತ ಮಂಡಳಿಯ ಮತ್ತೊಂದು ಸಭೆ ಇದೆ. ಇದರಲ್ಲಿ ಚರ್ಚಿಸಿ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು ಎಂದರು.

ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡುವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು ೧೮ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ. ಕೆಲವು ಸಮಯದಿಂದ ಹಿಂದೂ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದೆ. ಈ ವಿಚಾರ ಗಮನಕ್ಕೆ ಬಂದ ಕೂಡಲೇ ಕಾಲೇಜು ಆಡಳಿತ ವರ್ಗ ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶ

ಪೋಷಕರಿಗೆ ಮಾಹಿತಿ ನೀಡಿದ ನಂತರ ಯಾವುದೇ ಗೊಂದಲವಿಲ್ಲದೆ ಕಾಲೇಜು ನಡೆಯುತ್ತಿತ್ತು. ಆದರೆ ವಾರ್ಷಿಕೋತ್ಸವ ಸಮಯದಲ್ಲಿ ಮತ್ತೆ ಈ ವಿದ್ಯಾರ್ಥಿಗಳ ನಡುವಿನ ಪ್ರೇಮ ಪ್ರಕರಣದ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ಹಿಂದೂ ವಿದ್ಯಾರ್ಥಿನಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು.

ವಿದ್ಯಾರ್ಥಿಗಳ ತಪಾಸಣೆ ದಿನ ಮುಸ್ಲಿಂ ವಿದ್ಯಾರ್ಥಿ ಕಾಲೇಜಿಗೆ ಗೈರಾಗಿದ್ದನು. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು. ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಒಂದು ವರ್ಗದ ವಿದ್ಯಾರ್ಥಿಗಳು ಹೋಗಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾದ ಪ್ರಸಂಗ ನಡೆದಿದೆ.

ಪ್ರಕರಣ ಗಂಭೀರ ಸ್ಥಿತಿಗೆ ತಲುಪುವ ವಾತಾವರಣವನ್ನು ಗಮನಿಸಿದ ಕಾಲೇಜು ಆಡಳಿತ ವರ್ಗ, ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6 ಮಂದಿ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರನ್ನು ಹಾಗೂ ಮುಸ್ಲಿಂ ವಿದ್ಯಾರ್ಥಿಯನ್ನು ಪ್ರಶ್ನಿಸಲು ಹೋದ ಹಿಂದೂ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Thu, 15 December 22