Mangaluru: ಅನ್ಯಕೋಮಿನ ವಿದ್ಯಾರ್ಥಿನಿಗೆ ಚಾಕಲೇಟ್ ಬೇಕಾ ಅಂತ ಕೇಳಿದಾತನಿಗೆ ಥಳಿತ ಪ್ರಕರಣ; 6 ಮಂದಿ ವಿರುದ್ಧ ದೂರು ದಾಖಲು

| Updated By: Rakesh Nayak Manchi

Updated on: Jan 14, 2023 | 9:34 PM

ಅನ್ಯಕೋಮಿನ ಯುವತಿಗೆ ಚಾಕಲೇಟ್ ಬೇಕಾ ಅಂತ ಕೇಳಿದ್ದಕ್ಕೆ ಮಹಮ್ಮದ್ ಶಾಕೀರ್ ಎಂಬಾತನ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ಇಂತಹ ಪ್ರಕರಣಗಳು ಸಾಮಾನ್ಯವಾಗಿಬಿಟ್ಟಿವೆ.

Mangaluru: ಅನ್ಯಕೋಮಿನ ವಿದ್ಯಾರ್ಥಿನಿಗೆ ಚಾಕಲೇಟ್ ಬೇಕಾ ಅಂತ ಕೇಳಿದಾತನಿಗೆ ಥಳಿತ ಪ್ರಕರಣ; 6 ಮಂದಿ ವಿರುದ್ಧ ದೂರು ದಾಖಲು
ಸಾಂದರ್ಭಿಕ ಚಿತ್ರ
Image Credit source: iStock Photo
Follow us on

ಬಂಟ್ವಾಳ: ಅನ್ಯ ಕೋಮಿನ ಯುವತಿಗೆ ಚಾಕಲೇಟ್ ಬೇಕಾ ಎಂದು ಕೇಳಿದ ಮುಸ್ಲಿಂ ವಿದ್ಯಾರ್ಥಿ ಮೇಲೆ ಯುವಕರ ತಂಡವೊಂದು ಹಲ್ಲೆ (Assault on student) ನಡೆಸಿದ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಮಹಮ್ಮದ್ ಶಾಕೀರ್ ನೀಡಿದ ದೂರಿನ ಅನ್ವಯ ವಿಟ್ಲ ಠಾಣೆ ಪೊಲೀಸರು, ಕೆಲಿಂಜದ ಚಂದ್ರಶೇಖರ್, ಪ್ರಜ್ವಲ್, ರೋಹಿತ್ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೀರಕಂಬದ ಮಂಗಲಪದವು ನಿವಾಸಿ ಮಹಮ್ಮದ್ ಶಾಕೀರ್ ಮಂಗಳೂರಿನ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾನೆ. ಎಂದಿನಂತೆ ಕಾಲೇಜಿಗೆ ಹೋಗಿ ಬಸ್ ಮೂಲಕ ಮನೆಗೆ ವಾಪಸ್ ಆಗುತ್ತಿದ್ದಾಗ ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಲು ಯತ್ನಿಸುವ ನೆಪದಲ್ಲಿ ಚಾಕಲೇಟ್ ಬೇಕೇ ಎಂದು ಕೇಳಿದ್ದಾನೆ. ಅನುಮಾನಗೊಂಡ ಯುವಕರ ತಂಡ ಮಹಮ್ಮದ್ ಶಾಕೀರ್​ನನ್ನು ಪ್ರಶ್ನಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Santro Ravi: ಕುಖ್ಯಾತ ಕ್ರಿಮಿನಲ್ ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್

ಗುರುವಾರದಂದು ಈ ಘಟನೆ ನಡೆದಿದ್ದು, ಶಾಕೀರ್ ನೀಡಿದ ದೂರಿನಲ್ಲಿ ಕೆಲಿಂಜದ ಚಂದ್ರಶೇಖರ್, ಪ್ರಜ್ವಲ್, ರೋಹಿತ್ ಮತ್ತು ಇತರ ಮೂವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಲಾಗಿದೆ. ಗುರುವಾರ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.

ಚನ್ನಪಟ್ಟಣದಲ್ಲಿ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡಿದ ಮಾನಸಿಕ ಅಸ್ವಸ್ಥ

ರಾಮನಗರ: ಮಾನಸಿಕ ಅಸ್ವಸ್ಥನೊಬ್ಬ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡಿ ನಿವಾಸಿಗರಲ್ಲಿ ಭಯ ಹುಟ್ಟಿಸಿದ ಘಟನೆ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದ ವ್ಯಕ್ತಿ, ಇಂದು ಏಕಾಏಕಿ ಮನೆಯಿಂದ ಮಚ್ಚು ಹಿಡಿದು ಹೊರಬಂದಿದ್ದು, ನಿವಾಸಿಗಳು ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸುವಂತೆ ಮಾನಸಿಕ ಅಸ್ವಸ್ಥನ ಕುಟುಂಬ ಸದಸ್ಯರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Sat, 14 January 23