Cyber Crime: ಆನ್​ಲೈನ್ ವಂಚನೆಯಿಂದ ಬರೋಬ್ಬರಿ 1.60 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

ಆನ್ಲೈನ್ ವಂಚನೆ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ..ತ್ತೀಚಿನ ದಿನಗಳಲ್ಲಿ ಬಹುದೊಡ್ಡದು ಎನ್ನಬಹುದಾದಂತಹ ಸೈಬರ್ ವಂಚನೆ ಪ್ರಕರಣ ಒಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ನಿವೃತ್ತ ಇಂಜಿನಿಯರ್ ಒಬ್ಬರು ಬರೋಬ್ಬರಿ 1.60 ಕೋಟಿ ರೂ. ಕಳೆದುಕೊಂಡಿದ್ದಾರೆ. ಸಂತ್ರಸ್ತ ವ್ಯಕ್ತಿ ಮೋಸ ಹೋಗಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

Cyber Crime: ಆನ್​ಲೈನ್ ವಂಚನೆಯಿಂದ ಬರೋಬ್ಬರಿ  1.60 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
ಆನ್​ಲೈನ್ ವಂಚನೆ
Follow us
Ganapathi Sharma
|

Updated on: May 10, 2024 | 8:22 AM

ಮಂಗಳೂರು, ಮೇ 10: ಮುಂಬೈ ಕ್ರೈಂ ಬ್ರಾಂಚ್ ಮತ್ತು ಸಿಬಿಐ ಅಧಿಕಾರಿಗಳ (Mumbai crime branch and CBI officers) ಸೋಗಿನಲ್ಲಿ ಆನ್‌ಲೈನ್ ವಂಚಕರು (Online Fraud) 72 ವರ್ಷದ ನಿವೃತ್ತ ಇಂಜಿನಿಯರ್‌ ಒಬ್ಬರಿಗೆ ಬೆದರಿಕೆ ಹಾಕಿ 1.60 ಕೋಟಿ ರೂ.ಗಳನ್ನು ಪಟಾಯಿಸಿರುವ ಬಹುದೊಡ್ಡ ಆನ್‌ಲೈನ್ ವಂಚನೆ (Cyber Crime) ಪ್ರಕರಣ ಮಂಗಳೂರಿನಲ್ಲಿ (Mangaluru) ಇತ್ತೀಚೆಗೆ ಬೆಳಕಿಗೆ ಬಂದಿದೆ. 72 ವರ್ಷದ ವ್ಯಕ್ತಿಗೆ ಮುಂಬೈ ಕ್ರೈಂ ಬ್ರಾಂಚ್ ವಿಭಾಗದ ಸೋಗಿನಲ್ಲಿ ವಂಚಕರಿಂದ ಬೆದರಿಕೆ ಕರೆ ಬಂದಿದ್ದು, ನಿಮ್ಮ ಹೆಸರಿನಲ್ಲಿ ಥಾಯ್ಲೆಂಡ್‌ಗೆ ಕಳುಹಿಸಲಾದ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿದ್ದಾರೆ.

ಫೋನ್ ಮಾಡಿದ ಅಪರಿಚಿತ ವ್ಯಕ್ತಿ ತನ್ನ ಹೆಸರು ರಾಜೇಶ್ ಕುಮಾರ್ ಮತ್ತು ಫೆಡೆಕ್ಸ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾನೆ. ನೀವು ಥೈಲ್ಯಾಂಡ್‌ಗೆ ಕಳುಹಿಸಿದ್ದ ಪಾರ್ಸೆಲಲನ್ನು ಕಸ್ಟಮ್ಸ್ ವಶಪಡಿಸಿಕೊಂಡಿದೆ. ಇದು ಅಫ್ಘಾನಿಸ್ತಾನ ಮತ್ತು ಕೀನ್ಯಾದ ಐದು ಪಾಸ್‌ಪೋರ್ಟ್‌ಗಳನ್ನು, ಮೂರು ಕ್ರೆಡಿಟ್ ಕಾರ್ಡ್‌ಗಳನ್ನು ಹೊಂದಿದೆ. 140 ಗ್ರಾಂ ಎಂಡಿಎಂಎ ಔಷಧ, ನಾಲ್ಕು ಕಿಲೋ ಬಟ್ಟೆ ಮತ್ತು ಲ್ಯಾಪ್‌ಟಾಪ್ ಹೊಂದಿದೆ. ಮುಂಬೈ ಅಪರಾಧ ವಿಭಾಗವು ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ವಂಚಕ ಹೇಳಿದ್ದಾನೆ.

ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿ ಎಂದು ಹೇಳಿಕೊಂಡ ಇನ್ನೊಬ್ಬ ವ್ಯಕ್ತಿ ಸಿಬಿಐ ಅಧಿಕಾರಿ ರುದ್ರ ರಾಥೋಡ್ ಹೆಚ್ಚುವರಿ ಮಾಹಿತಿಯನ್ನು ನೀಡಲಿದ್ದಾರೆ ಮತ್ತು ಇ-ಮೇಲ್ ಮೂಲಕ rathoreb@21 ಗೆ ಸಂಪರ್ಕಿಸಲು ನಿವೃತ್ತ ಎಂಜಿನಿಯರ್​​​ಗೆ ಸೂಚಿಸಿದ್ದಾರೆ. ನಂತರ ರುದ್ರ ರಾಥೋಡ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿ ಹಲವು ಮಕ್ಕಳನ್ನು ಹತ್ಯೆಗೈದ ತಂಡ ಈ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ತಿಳಿಸಿದ್ದಾನೆ. ಜತೆಗೆ, ನೀವು ತನಿಖೆಗೆ ಸಹಕರಿಸದಿದ್ದರೆ ನಿಮ್ಮ ಮಗ ಮತ್ತು ಮಗಳನ್ನು ಇಂಟರ್‌ಪೋಲ್ ಮೂಲಕ ಬಂಧಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾನೆ.

ನಿವೃತ್ತ ಎಂಜಿನಿಯರ್ ಇದು ಮೋಸದ ದೂರವಾಣಿ ಕರೆ ಎಂದು ಅರ್ಥಮಾಡಿಕೊಳ್ಳದೆ ಭಯಗೊಂಡಿದ್ದಾರೆ. ವಂಚಕರು ಸ್ಕೈಪ್ ಖಾತೆ ತೆರೆಯುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾರೆ. ನಂತರ, ವಂಚಕರು ಸ್ಕೈಪ್ ಅಪ್ಲಿಕೇಶನ್‌ನಲ್ಲಿ ಸಿಬಿಐ ಅಧಿಕಾರಿಗಳಂತೆ ಪೋಸ್ ನೀಡಿ ಹಲವಾರು ನೋಟಿಸ್‌ಗಳನ್ನು ಕಳುಹಿಸಿದ್ದಾರೆ. ಬಂಧನದಿಂದ ಬಚಾವಾಗಬೇಕಾದರೆ ಬಾಂಡ್‌ಗಳ ರೂಪದಲ್ಲಿ ಹಣವನ್ನು ಕಳುಹಿಸುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ

ನಂತರ ವಂಚಕರು, ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಮೊತ್ತವನ್ನು ಹಿಂದಿರುಗಿಸುವುದಾಗಿ ನಿವೃತ್ತ ಎಂಜಿನಿಯರ್‌ಗೆ ಭರವಸೆ ನೀಡಿದ್ದರು. ತನಗೆ ಮತ್ತು ಮಕ್ಕಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ ಎಂಜಿನಿಯರ್, ಐಸಿಐಸಿಐ ಬ್ಯಾಂಕ್ ಖಾತೆಯಿಂದ ಮೇ 2 ರಂದು 1.1 ಕೋಟಿ ರೂ. ಮತ್ತು ಮೇ 6 ರಂದು 50 ಲಕ್ಷ ರೂ. ಗಳನ್ನು ಹಣ ವರ್ಗಾವಣೆ ಮಾಡಿದ್ದರು. ಆದರೆ, ಮರುದಿನ ಅಪರಿಚಿತರಿಗೆ ಅವರಿಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಸಂತ್ರ ವ್ಯಕ್ತಿ ತನ್ನ ಮಗಳಿಗೆ ಮಾಹಿತಿ ನೀಡಿದ್ದು, ವಾಸ್ತವದ ಅರಿವಾಗಿದೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ