AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್​​​ ಟ್ವಿಸ್ಟ್​: ಸಂಬಂಧಿಕರ ಮನೆಯಲ್ಲಿ ಯುವತಿ ಪತ್ತೆ; ಸ್ಫೋಟಕ ಹೇಳಿಕೆ ನೀಡಿದ ಯುವತಿ

ಮಂಗಳೂರಿನ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳನ್ನು ಪೋಷಕರು ಥಾರ್ ವಾಹನದಲ್ಲಿ ಅಪಹರಿಸಿದ್ದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಹಿಂದೂ ಯುವಕನನ್ನು ಪ್ರೀತಿಸಿದ್ದ ಯುವತಿಯನ್ನು ಕುಟುಂಬದವರು ಕಾಲೇಜು ಕ್ಯಾಂಪಸ್‌ನಿಂದಲೇ ಬಲವಂತವಾಗಿ ಕರೆದೊಯ್ದಿದ್ದರು. ವೈರಲ್ ವಿಡಿಯೋ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು, ಕೇರಳದಲ್ಲಿ ಯುವತಿಯನ್ನು ಪತ್ತೆಹಚ್ಚಿ ರಕ್ಷಿಸಿದ್ದಾರೆ. ತನಗೆ ಮನೆಯವರ ಜೊತೆ ಹೋಗುವ ಇಚ್ಛೆ ಇಲ್ಲವೆಂದಿದ್ದು, ಈ ಕೃತ್ಯ ಅಪರಾಧವೆಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್​​​ ಟ್ವಿಸ್ಟ್​: ಸಂಬಂಧಿಕರ ಮನೆಯಲ್ಲಿ ಯುವತಿ ಪತ್ತೆ; ಸ್ಫೋಟಕ ಹೇಳಿಕೆ ನೀಡಿದ ಯುವತಿ
ಮಂಗಳೂರು ಖಾಸಗಿ ಮೆಡಿಕಲ್ ಕಾಲೇಜು
ಪ್ರಶಾಂತ್​ ಬಿ.
| Edited By: |

Updated on:Nov 21, 2026 | 10:24 AM

Share

ಮಂಗಳೂರು ನ.21: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ಕ್ಯಾಂಪಸ್‌ನಿಂದಲೇ ಪೋಷಕರ ಕಡೆಯವರು ಯುವತಿಯನ್ನು ಬಲವಂತವಾಗಿ ಥಾರ್ ವಾಹನದಲ್ಲಿ ಅಪಹರಿಸಿಕೊಂಡು ಹೋಗಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಕೋಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು, ಅಪಹರಣಕ್ಕೊಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಕೇರಳದ ಸಂಬಂಧಿಕರ ಮನೆಯಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ಮುಸ್ಲಿಂ ಯುವತಿ, ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪೋಷಕರ ಕಡೆಯವರು, ಕಾಲೇಜು ಕ್ಯಾಂಪಸ್‌ನಿಂದಲೇ ವಿದ್ಯಾರ್ಥಿನಿಯನ್ನು ಬಲವಂತವಾಗಿ ಥಾರ್ ವಾಹನದಲ್ಲಿ ಕಿಡ್ನಾಪ್ ಮಾಡಿ ಕರೆದೊಯ್ದಿದ್ದರು. ವಿದ್ಯಾರ್ಥಿನಿಯನ್ನು ವಾಹನದಲ್ಲಿ ಹೊತ್ತೊಯ್ಯುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಪ್ರಕರಣ ದಾಖಲಿಸಿಕೊಂಡ ಕೋಣಾಜೆ ಪೊಲೀಸರು ತನಿಖೆ ಚುರುಕುಗೊಳಿಸಿ ಕೇರಳದ ಸಂಬಂಧಿಕರ ಮನೆಯಲ್ಲಿದ್ದ ಯುವತಿಯನ್ನು ಪತ್ತೆಹಚ್ಚಿದ್ದಾರೆ. ಬಳಿಕ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, “ನನಗೆ ಮನೆಯವರ ಜೊತೆ ಹೋಗುವ ಇಚ್ಛೆ ಇಲ್ಲ” ಎಂದು ಯುವತಿ ಸ್ಪಷ್ಟವಾಗಿ ತಿಳಿಸಿದ್ದಾಳೆ. ಕಿಡ್ನಾಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು, ಕಾನೂನು ಪ್ರಕ್ರಿಯೆಯಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಲವ್​: ಪೋಷಕರಿಂದಲೇ ವಿದ್ಯಾರ್ಥಿನಿ ಅಪಹರಣ

ವಿದ್ಯಾರ್ಥಿನಿಯನ್ನು ಥಾರ್ ವಾಹನದಲ್ಲಿ ಕರೆದೊಯ್ಯುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪ್ರಕರಣದ ಕಾನೂನು ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ. “ಯುವತಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪವಿದೆ. ಈ ರೀತಿಯ ಕೃತ್ಯವೂ ಕಾನೂನಿನ ಪ್ರಕಾರ ಅಪರಾಧವಾಗುತ್ತದೆ” ಎಂದು ಆಯುಕ್ತರು ಎಚ್ಚರಿಸಿದ್ದಾರೆ.

“ಯುವತಿ ಪ್ರಾಪ್ತವಯಸ್ಕಳಾಗಿದ್ದು, ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ. ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನ ಹೆಚ್ಚು ದೂರ ಸಾಗುವ ಮುನ್ನವೇ ತಡೆದು ಯುವತಿಯನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿತ್ತು” ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 am, Sat, 21 November 26

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?