AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ನೇರವಾಗಿ ಕಚೇರಿಗೆ: 2ನೇ ಬಾರಿ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಭೂವಿಜ್ಞಾನಿ ಸಸ್ಪೆಂಡ್

ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಬಂಧಿನಕೊಳ್ಳಲಾಗಿದ್ದರು. 18 ದಿನ ಜೈಲಿನಲ್ಲಿದ್ದರೂ ಬುದ್ಧಿ ಅಧಿಕಾರಿ ನೇರವಾಗಿ ಕಚೇರಿಗೆ ಆಗಮಿಸಿ ಮತ್ತೆ ದರ್ಬಾರ್ ನಡೆಸಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಅಮಾನತುಗೊಳಿಸಲಾಗಿದೆ.

ಜೈಲಿನಿಂದ ನೇರವಾಗಿ ಕಚೇರಿಗೆ: 2ನೇ ಬಾರಿ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಭೂವಿಜ್ಞಾನಿ ಸಸ್ಪೆಂಡ್
ಕೃಷ್ಣವೇಣಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 22, 2025 | 12:38 PM

Share

ಮಂಗಳೂರು, ಜೂನ್ 22: ಕಚೇರಿಯಲ್ಲಿ ದರ್ಬಾರ್ ಮಾಡುತ್ತಿದ್ದ ಅಧಿಕಾರಿಯನ್ನು ಕೊನೆಗೂ ಅಮಾನತು (suspended) ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ (Mines dept Deputy Director) ಡಿಡಿ ಕೃಷ್ಣವೇಣಿ ಅನ್ನು ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ಜೈಲಿನಿಂದ ನೇರಾವಾಗಿ ಕಚೇರಿಗೆ ಬಂದಿದ್ದ ಅಧಿಕಾರಿಗೆ ಬೊಕ್ಕೆ ಕೊಟ್ಟು ಸ್ವಾಗತಿಸಿದ್ದ ಫೋಟೋ ವೈರಲ್​ ಆಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

12 ಕೋಟಿ ಮೌಲ್ಯದ ಆಸ್ತಿ ಪತ್ತೆ

ಡಿಡಿ ಕೃಷ್ಣವೇಣಿ ಅವರ ಮೇಲೆ 2ನೇ ಬಾರಿ ಲೋಕಾಯುಕ್ತ ದಾಳಿ ನಡೆದಿದ್ದು, ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಈ ವೇಳೆ 12 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಇನ್ನು ಇತ್ತೀಚೆಗೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ವ್ಯಕ್ತಯೊಬ್ಬರ ಬಳಿ 50 ಸಾವಿರ ರೂ ಲಂಚ ಸ್ವೀಕರಿಸುವಾಗ ಬಂಧನಕೊಳ್ಳಗಾಗಿದ್ದರು.

ಇದನ್ನೂ ಓದಿ
Image
ಸರ್ಕಾರ ದಿಟ್ಟ ಹೆಜ್ಜೆ: ಸುಳ್ಳು ಸುದ್ದಿ, ದ್ವೇಷ ಭಾಷಣಕ್ಕೆ ಜೈಲು, ದಂಡ!
Image
ಮಂಗಳೂರು ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಂಗ್ರೆಸ್​​ ಕಾರ್ಯಕರ್ತ
Image
ಸಭೆಗಳಲ್ಲಿ ತುಳು ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶ ಬೆನ್ನಲ್ಲೇ ಆದೇಶ ವಾಪಸ್
Image
ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ ಮಹಿಳೆ

ಇದನ್ನೂ ಓದಿ: ಮಂಗಳೂರು ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಂಗ್ರೆಸ್​ ಕಾರ್ಯಕರ್ತ: ಸ್ಪಷ್ಟನೆ ನೀಡಿದ ಆಯುಕ್ತ

ಸರ್ಕಾರದ ನಿಯಮಗಳ ಪ್ರಕಾರ 48 ಗಂಟೆಗಳಿಗಿಂತ ಹೆಚ್ಚು ಕಾಲ ಪೊಲೀಸ್​ ಕಸ್ಟಡಿಯಲ್ಲಿರುವ ಯಾವುದೇ ಅಧಿಕಾರಿಯನ್ನು ಅಮಾನತುಗೊಳಿಸಲಾಗುತ್ತದೆ. ಆದರೆ, ಕೃಷ್ಣವೇಣಿ 18 ದಿನ ಜೈಲಿನಲ್ಲಿದ್ದರೂ ಈ ನಿಯಮವನ್ನು ಪಾಲನೆ ಆಗಿಲ್ಲ ಎಲ್ಲಾಗಿದ್ದು, ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು.

ಇದನ್ನೂ ಓದಿ: ಮಂಗಳೂರು: ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್

ಜಾಮೀನು ಮೇಲೆ ಹೊರಬಂದು ಮತ್ತೆ ತಮ್ಮ ಸ್ಥಾನಕ್ಕೆ ಹಿಂದಿರುಗಿದ್ದರು. ಜೊತೆಗೆ ಹೈಕೋರ್ಟ್​​ನಿಂದ ಸ್ಟೇ ತಂದು ಅಮಾನತು ಮಾಡದಂತೆ ತಡೆದಿದ್ದರು. ಇತ್ತ ಕಚೇರಿಯಲ್ಲಿ ಮತ್ತೆ ದರ್ಬಾರ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ಬಂದ ಹಿನ್ನಲೆ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಲಾಗಿದೆ.

ಸಂದೀಪ್ ಜೆ.ಯು ಭಾರ ಉಪ ನಿರ್ದೇಶಕರಾಗಿ ನೇಮಕ

ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಉಡುಪಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಸಂದೀಪ್ ಜೆ.ಯು. ಅವರನ್ನು ಪ್ರಭಾರ ಉಪ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.