ಮಂಗಳೂರು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 09, 2025 | 7:13 PM

ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದಲ್ಲಿ ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಇಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆಬ್ರುವರಿ 11ರಿಂದ ನಾಪತ್ತೆಯಾಗಿದ್ದ ಇವರಿಬ್ಬರೂ ಪ್ರೀತಿಸುತ್ತಿದ್ದರೆ ಎನ್ನಲಾಗುತ್ತಿದೆ. ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ಬಳಿಕ ಪೊಲೀಸರು ಹುಡುಕಾಟ ನಡೆಸಿ ಶವಗಳನ್ನು ಪತ್ತೆ ಹಚ್ಚಿದ್ದಾರೆ.

ಮಂಗಳೂರು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ
ಮಂಗಳೂರು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ
Follow us on

ಮಂಗಳೂರು, ಮಾರ್ಚ್ 09: ನಾಪತ್ತೆಯಾಗಿದ್ದ ಅಪ್ರಾಪ್ತ (teenager) ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ (dead) ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿದ್ದರು. ಅದೇ ದಿನ ನಾಪತ್ತೆ ಬಗ್ಗೆ ಕುಂಬಳೆ ಪೊಲೀಸರಿಗೆ ಅಪ್ರಾಪ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದರೂ ಇಬ್ಬರೂ ಪತ್ತೆಯಾಗಿರಲಿಲ್ಲ. ಇಬ್ಬರ ಮೊಬೈಲ್ ಫೋನ್‌ಗಳು ಮಂಡೆಕಾಪು ಬಳಿ ಸ್ವಿಚ್ ಆಫ್ ಆಗಿರುವುದು ತನಿಖೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ: ಬರ್ತ್​​ಡೇ ದಿನವೇ ಸೇಹಿತರ ದುರಂತ ಅಂತ್ಯ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು

ಇದರ ಆಧಾರದ ಮೇಲೆ ಡ್ರೋನ್ ಹಾಗೂ ಪೊಲೀಸ್ ಶ್ವಾನ ಬಳಸಿ ಶೋಧ ನಡೆಸಲಾಗಿತ್ತು. ಆದರೂ ಇಬ್ಬರ ಬಗ್ಗೆ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಅಪ್ರಾಪ್ತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪೋಷಕರು ಹೈಕೋರ್ಟ್ ಮೊರೆ ಹೋಗಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಇಂದು ಸ್ಥಳೀಯರ ನೆರವಿನೊಂದಿಗೆ ಇಬ್ಬರ ಮನೆಯ ಸಮೀಪ ಹುಡುಕಾಟ ಮಾಡಲಾಗಿದೆ.

ಎಕರೆಗಟ್ಟಲೆ ಹರಡಿರುವ ಅಕೇಶಿಯಾ ಅರಣ್ಯದಲ್ಲಿ ಶೋಧ ನಡೆಸಿದ ವೇಳೆ ಒಂದೇ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಒಂದು ಚಾಕು ಮತ್ತು ಎರಡು ಮೊಬೈಲ್ ಫೋನ್‌ಗಳು ಪತ್ತೆ‌ಯಾಗಿದೆ.

ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯಕರ ಚಿಕಿತ್ಸೆ ಫಲಿಸದೆ ಸಾವು

ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯಕರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸಂಜಯ್(21) ಮೃತ ಯುವಕ. ಕಳೆದ 4 ವರ್ಷಗಳಿಂದ ಓರ್ವ ಯುವತಿಯನ್ನು ಸಂಜಯ್ ಪ್ರೀತಿಸುತ್ತಿದ್ದ. ಪ್ರಿಯತಮೆ ಕೈಕೊಟ್ಟ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ 4 ದಿನಗಳ ಹಿಂದೆ ವಿಷ ಸೇವಿಸಿದ್ದ.

ಇದನ್ನೂ ಓದಿ: ದುಬೈಯಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ: ರನ್ಯಾ ಬಂಧನದ ಮರುದಿನವೇ ಅಂಧ ವ್ಯಕ್ತಿ ಅರೆಸ್ಟ್

ಅಸ್ವಸ್ಥ ಸಂಜಯ್​ನನ್ನು ಮೆಗ್ಗಾನ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯಲ್ಲಿ ಸಂಜಯ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.