ಗುಂಪು ಹಲ್ಲೆ ಕೇಸ್​: ಮಂಗಳೂರು ಗ್ರಾಮಾಂತರ ಠಾಣೆ ಇನ್​​ಸ್ಪೆಕ್ಟರ್ ಸೇರಿ ಮೂವರು ಅಮಾನತು

ಮಂಗಳೂರಿನ ಕುಡುಪು ಬಳಿ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪದ ಮೇಲೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಈಗಾಗಲೇ 23 ಜನರನ್ನು ಬಂಧಿಸಲಾಗಿದೆ.

ಗುಂಪು ಹಲ್ಲೆ ಕೇಸ್​: ಮಂಗಳೂರು ಗ್ರಾಮಾಂತರ ಠಾಣೆ ಇನ್​​ಸ್ಪೆಕ್ಟರ್ ಸೇರಿ ಮೂವರು ಅಮಾನತು
ಪ್ರಾತಿನಿಧಿಕ ಚಿತ್ರ
Edited By:

Updated on: May 01, 2025 | 12:39 PM

ಮಂಗಳೂರು, ಮೇ 01: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಹೊರವಲಯದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳ ಮೂಲದ ಮುಸ್ಲಿಂ ಯುವಕನನ್ನು ಹತ್ಯೆ ಮಾಡಲಾಗಿತ್ತು. ಸದ್ಯ ಈ ಪ್ರಕರಣ  ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಗುಂಪು ಹಲ್ಲೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಆರಂಭದಲ್ಲಿ ‘‘ಅಸಹಜ ಸಾವು’’ ಪ್ರಕರಣ ದಾಖಲಿಸಲಾಗಿತ್ತು. ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಇದೀಗ ಕರ್ತವ್ಯ ಲೋಪ ಆರೋಪದಡಿ ಗ್ರಾಮಾಂತರ ಠಾಣೆ ಇನ್​​ಸ್ಪೆಕ್ಟರ್​ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು (suspend) ಮಾಡಲಾಗಿದೆ.

ಮಂಗಳೂರು ಗ್ರಾಮಾಂತರ ಠಾಣೆ ಇನ್​​ಸ್ಪೆಕ್ಟರ್ ಶಿವಕುಮಾರ್​, ಹೆಡ್ ಕಾನ್​​ಸ್ಟೇಬಲ್ ಚಂದ್ರ.ಪಿ ಮತ್ತು ಕಾನ್​ಸ್ಟೇಬಲ್​ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್​ ಕಮಿಷನರ್​ ಅನುಪಮ್​ ಅಗ್ರವಾಲ್ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಇನ್​​ಸ್ಪೆಕ್ಟರ್​ ಶಿವಕುಮಾ‌ರ್​ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್​​ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಪತ್ರ ಬರೆದಿದ್ದರು.

ಇದನ್ನೂ ಓದಿ: ಮಂಗಳೂರು ಗುಂಪು ಹಲ್ಲೆ ಪ್ರಕರಣ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣ, ಎಫ್​ಐಆರ್​ನಲ್ಲಿ ಉಲ್ಲೇಖ

ಇದನ್ನೂ ಓದಿ
ಕರ್ನಾಟಕ ಕರವಾಳಿಯಲ್ಲಿ ಭಾರಿ ಕಟ್ಟೆಚ್ಚರ: ಪ್ರವಾಸಿ ತಾಣಗಳ ಮೇಲೆ ನಿಗಾ
ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ
ಕ್ರಿಕೆಟ್ ಪಂದ್ಯದ ವೇಳೆ ಪಾಕಿಸ್ತಾನ್ ಜಿಂದಾಬಾದ್ಎಂದಿದ್ದಕ್ಕೆ ನಡೀತಾ ಕೊಲೆ?

ಇನ್​​ಸ್ಪೆಕ್ಟರ್ ಶಿವಕುಮಾರ್​ ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಎಂದು ಎಫ್​ಐಆರ್ ದಾಖಲಿಸಿದ್ದಾರೆ. ಮೃತ ಯುವಕನ ಮೇಲೆ ಗಾಯಗಳು ಕಂಡು ಬಂದರು ಸಹ ಅಸಹಜ ಸಾವು ಪ್ರಕರಣವೆಂದು ದಾಖಲಿಸಿಕೊಂಡಿದ್ದರು. ಹೀಗಾಗಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದ ಹಿನ್ನೆಲೆ ಮೂವರನ್ನು ಅಮಾನತ್ತು ಮಾಡಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ನಡೆದದ್ದೇನು?

ಮಂಗಳೂರಿನ ಹೊರವಲಯದ ಕುಡುಪು ಎಂಬಲ್ಲಿ ಏಪ್ರಿಲ್ 27ರ ಸಂಜೆ ಒಂದು ಕ್ರಿಕೆಟ್​ ಪಂದ್ಯ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕೇರಳದ ವಯನಾಡ್​ ಮೂಲದ ಮೊಹಮ್ಮದ್ ಆಶ್ರಫ್​ ಬಂದಿದ್ದಾನೆ. ಕ್ರಿಕೆಟ್​ ಆಡುತ್ತಿದ್ದವರಿಗೂ ಹಾಗೂ ಆತನ ಮಧ್ಯೆ ಗಲಾಟೆ ಉಂಟಾಗಿದೆ. ಈ ವೇಳೆ ಅಲ್ಲಿದ್ದ ಗುಂಪೊಂದು ಆತನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಹಲ್ಲೆಗೆ ಕಾರಣವೆಂದು ಹೇಳಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಆಶ್ರಫ್ ಮರುದಿನ ಮೃತಪಟ್ಟಿದ್ದ.

ಇದನ್ನೂ ಓದಿ: ಮಂಗಳೂರಿನಲ್ಲೂ ಗುಂಪು ಹಲ್ಲೆ, ಹತ್ಯೆ: ಕ್ರಿಕೆಟ್ ಪಂದ್ಯದ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದಿದ್ದಕ್ಕೆ ನಡೆಯಿತಾ ಕೊಲೆ?

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿತ್ತು. ಎರಡು ದಿನವಾದರೂ ಆತನ ಗುರುತು ಪತ್ತೆಯಾಗಿರಲಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಅದು ಕೊಲೆ ಎನ್ನುವುದು ಬೆಳಕಿಗೆ ಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:19 pm, Thu, 1 May 25