AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮಳೆಗಾಲದ ಮುಂಜಾಗ್ರತಾ ಕ್ರಮಗಳ ನಿರ್ಲಕ್ಷ್ಯ ಆರೋಪ, ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿ!

ಮಂಗಳೂರು ನಗರದಲ್ಲಿ ಮುಂಗಾರು ಮಳೆ ಎದುರಿಸಲು ಪೂರ್ವಸಿದ್ಧತೆಗಳು ಸಮರ್ಪಕವಾಗಿ ನಡೆದಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ಮಂಗಳೂರು: ಮಳೆಗಾಲದ ಮುಂಜಾಗ್ರತಾ ಕ್ರಮಗಳ ನಿರ್ಲಕ್ಷ್ಯ ಆರೋಪ, ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿ!
Mangalore Politicsaಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿImage Credit source: tv9
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 25, 2026 | 4:55 PM

Share

ಮಂಗಳೂರು, ಮೇ 25: ಕರಾವಳಿ (Coastal Karnataka) ಭಾಗದಲ್ಲಿ ಮಳೆಗಾಲ ಆರಂಭವಾಯಿತೆಂದರೆ ಸಾಕು, ಇಲ್ಲಿನ ಸಾರ್ವಜನಿಕರಲ್ಲಿ ಆತಂಕದ ನೆರಳು ಆವರಿಸುತ್ತದೆ. ಕಳೆದ ಕೆಲವು ವರ್ಷಗಳಲ್ಲಿ ಮಳೆಗಾಲ ಸೃಷ್ಟಿಸಿದ ಭೀಕರ ಅವಾಂತರಗಳು ಮತ್ತು ಪ್ರಾಣಹಾನಿಯ ಕಹಿ ನೆನಪುಗಳು ಜನರನ್ನು ಇಂದಿಗೂ ಬೆಚ್ಚಿಬೀಳಿಸುತ್ತವೆ. ಆದರೆ, ಈ ಬಾರಿಯ ಮುಂಗಾರು (Monsoon) ಆರಂಭಕ್ಕೆ ಕೌಂಟ್‌ಡೌನ್ ಶುರುವಾಗಿದ್ದರೂ, ಮಂಗಳೂರು ಮಹಾನಗರ ಪಾಲಿಕೆ (MCC) ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಹಾಗೂ ಪಾಲಿಕೆ ಮಳೆಗಾಲದ ಪೂರ್ವಸಿದ್ಧತೆಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಮುಂಜಾಗ್ರತಾ ಸಿದ್ಧತೆಯ ವೈಫಲ್ಯದ ವಿಷಯ ಇದೀಗ ಕರಾವಳಿ ರಾಜಕಾರಣದಲ್ಲಿ ಭಾರಿ ಕೆಸರೆರಚಾಟಕ್ಕೂ ಕಾರಣವಾಗಿದೆ.

ಮುಖ್ಯಾಂಶಗಳು

  • ಮಳೆಗಾಲ ಸಮೀಪಿಸುತ್ತಿದ್ದರೂ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬಂದಿದೆ.
  • ಪ್ರತಿ ವಾರ್ಡ್‌ಗೆ ಗ್ಯಾಂಗ್‌ಮ್ಯಾನ್ ನೇಮಿಸದ ಹಾಗೂ ಸಭೆ ನಡೆಸದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ತೀವ್ರವಾಗಿ ಕಿಡಿಕಾರಿದ್ದಾರೆ.
  • ಶಾಸಕರ ಆರೋಪಗಳನ್ನು ತಳ್ಳಿಹಾಕಿರುವ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾಡಳಿತದೊಂದಿಗೆ ಈಗಾಗಲೇ ಸಭೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೂಳೆತ್ತದ ರಾಜಕಾಲುವೆಗಳು, ಕೃತಕ ನೆರೆಯ ಭೀತಿ

ಪ್ರತಿ ವರ್ಷ ಭಾರಿ ಮಳೆಗೆ ಮಂಗಳೂರು ನಗರದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳು ಕೆರೆಯಂತಾಗುವುದು ಸಾಮಾನ್ಯವಾಗಿದೆ. ರಾಜಕಾಲುವೆಗಳಲ್ಲಿ ಹೂಳು ತುಂಬಿರುವುದು ಹಾಗೂ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣ. ಈ ಬಾರಿಯೂ ಪಾಲಿಕೆಯು ಕೇವಲ ಹೆಸರಿಗಷ್ಟೇ ಹೂಳೆತ್ತುವ ಕಾಮಗಾರಿ ನಡೆಸಿದ್ದು, ಜೆಸಿಬಿಗಳು ಹೋಗದ ಕಡೆಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ದೂರಿದ್ದಾರೆ.

ಇನ್ನೊಂದೆಡೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದ ಅಪಾಯವಿರುವ ಸ್ಥಳಗಳನ್ನು ಗುರುತಿಸಿರುವ ಜಿಲ್ಲಾಡಳಿತ, ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ: ವೀಕೆಂಡ್, ಬೇಸಿಗೆ ರಜೆ ಎಫೆಕ್ಟ್​​: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ

ಅಲ್ಲದೆ ಮಳೆಗಾಲ ಮುಗಿಯುವವರೆಗೆ ಯಾವುದೇ ರಸ್ತೆ ಅಥವಾ ಮಣ್ಣು ಅಗೆಯುವ ಕಾಮಗಾರಿ ನಡೆಸದಂತೆ ಕಠಿಣ ಆದೇಶ ಹೊರಡಿಸಲಾಗಿದೆ. ಆದರೆ, ಕೇವಲ ಕಾಗದದ ಮೇಲಿರುವ ಈ ಆದೇಶಗಳು ತಳಮಟ್ಟದಲ್ಲಿ ಸರಿಯಾಗಿ ಜಾರಿಯಾಗದಿದ್ದರೆ, ಈ ಬಾರಿಯೂ ಕರಾವಳಿಯಲ್ಲಿ ಮನುಷ್ಯನ ಎಡವಟ್ಟುಗಳಿಂದಾಗಿ ಕೃತಕ ಪ್ರವಾಹದ ಅವಾಂತರಗಳು ಸೃಷ್ಟಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!