AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಅಪ್ಪ-ಮಗ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಮಂಗಳೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಂದೆ-ಮಗನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವ ಜೋಡಿಗೆ ಕಿರುಕುಳ ನೀಡಲಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚುತ್ತಿರುವ ಆತಂಕಕಾರಿ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತವೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಅಪ್ಪ-ಮಗ
ಸಾಂದರ್ಭಿಕ ಚಿತ್ರ
ಅಶೋಕ್​ ಪೂಜಾರಿ
| Edited By: |

Updated on: Feb 26, 2026 | 10:36 AM

Share

ಮಂಗಳೂರು, ಫೆ.26: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ (Moral Policing) ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂಬುವವರು ವಿದ್ಯಾರ್ಥಿಗಳ ವಿಡಿಯೋ ಮಾಡಲಾರಂಭಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅಡ್ಡಗಟ್ಟಿದ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬಾಲಕನ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೇವಲ ಹಲ್ಲೆಯಷ್ಟೇ ಅಲ್ಲದೆ, ವಿದ್ಯಾರ್ಥಿಗಳ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ವಿದ್ಯಾರ್ಥಿಗಳ ಮಾನಹಾನಿಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು, ಅಪ್ರಾಪ್ತ ವಿದ್ಯಾರ್ಥಿಗಳ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಬಿಎನ್‌ಎಸ್ (BNS) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿ ಇಬ್ಬರನ್ನೂ ಬಂಧಿಸಲಾಗಿದೆ. ಇದೀಗ ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು

ಬೆಂಗಳೂರು ಬಸ್ಸಿನಲ್ಲಿ ನೈತಿಕ ಪೊಲೀಸ್‌ಗಿರಿ

22 ವರ್ಷದ ಯುವಕ ಮತ್ತು ಆತನ ಗೆಳತಿ ಬೆಂಗಳೂರಿನಿಂದ ಪ್ರಯಾಣಿಸಲು ಖಾಸಗಿ ಸ್ಲೀಪರ್ ಬಸ್‌ನಲ್ಲಿ 3 ಬರ್ತ್‌ಗಳನ್ನು ಬುಕ್ ಮಾಡಿದ್ದರು. ಹೆಚ್ಚು ಜಾಗವಿರಲಿ ಮತ್ತು ಆರಾಮದಾಯಕವಾಗಿ ಪ್ರಯಾಣಿಸಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದರು. ಆದರೆ ಬಸ್ ಹತ್ತಿದ ನಂತರ ಕಂಡಕ್ಟರ್ ಇವರಿಬ್ಬರನ್ನು ಒಟ್ಟಿಗೆ ಕುಳಿತುಕೊಳ್ಳದಂತೆ ತಡೆದಿದ್ದಾರೆ. ಇಬ್ಬರೂ ವಯಸ್ಕರಾಗಿದ್ದರೂ ಮತ್ತು ಅಧಿಕೃತ ಟಿಕೆಟ್ ಹೊಂದಿದ್ದರೂ, ಕಂಡಕ್ಟರ್ ಇಬ್ಬರನ್ನು ಪ್ರತ್ಯೇಕ ಸೀಟುಗಳಲ್ಲಿ ಮಲಗುವಂತೆ ಒತ್ತಾಯಿಸಿದ್ದಾರೆ.ನಿಮ್ಮ ಪೋಷಕರಿಗೆ ಫೋನ್ ಮಾಡಿ” ಇಲ್ಲವೆಂದರೆ “ಪೊಲೀಸರಿಗೆ ದೂರು ನೀಡುತ್ತೇವೆ” ಎಂದು ಕಂಡಕ್ಟರ್ ನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ