ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ಗುಂಡೂರಾವ್ ಬದಲಾವಣೆಗೆ ಮಂಗಳೂರು ಮುಸ್ಲಿಂ ಮುಖಂಡರ ಪಟ್ಟು: ಕಾಂಗ್ರೆಸ್​ಗೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಇದೀಗ ಕೋಮು ಆಧಾರಿತ ರಾಜಕೀಯ ಆಯಾಮ ಪಡೆದುಕೊಂಡಿದೆ. ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಪರಮೇಶ್ವರ್ ಬದಲಾವಣೆಗೆ ಜಿಲ್ಲೆಯ ಮುಸ್ಲಿಂ ಮುಖಂಡರು ಪಟ್ಟುಹಿಡಿದಿದ್ದಾರೆ. ಒಂದು ವೇಳೆ, ಬದಲಾವಣೆ ಮಾಡದಿದ್ದರೆ ಕಾಂಗ್ರೆಸ್​​ಗೆ ಸಾಮೂಹಿಕ ರಾಜೀನಾಮೆ ನೀಡುವ, ಹೊಸ ಪಕ್ಷ ಕಟ್ಟುವ ಬ್ಲ್ಯಾಕ್​ಮೇಲ್ ತಂತ್ರವನ್ನೂ ಹೂಡಿದ್ದಾರೆ.

ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ಗುಂಡೂರಾವ್ ಬದಲಾವಣೆಗೆ ಮಂಗಳೂರು ಮುಸ್ಲಿಂ ಮುಖಂಡರ ಪಟ್ಟು: ಕಾಂಗ್ರೆಸ್​ಗೆ ಎಚ್ಚರಿಕೆ
ಮಂಗಳೂರಿನಲ್ಲಿ ಬಿಗಿ ಬಂದೋಬಸ್ತ್
Edited By:

Updated on: May 29, 2025 | 10:41 AM

ಮಂಗಳೂರು, ಮೇ 29: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ, ಮುಸ್ಲಿಂ ಮುಖಂಡರು (Muslim Leaders) ಸದ್ಯ ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾಯಿಸಲು ಪಟ್ಟು ಹಿಡಿದಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷವನ್ನು ಬ್ಲ್ಯಾಕ್​ಮೇಲ್ ಮಾಡಲು ಆರಂಭಿಸಿದ್ದಾರೆ. ಉಭಯ ಸಚಿವರ ಬದಲಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಮುಸ್ಲಿಂ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂಗೆ ಡಿಕೆ ಶಿವಕುಮಾರ್​​ಗೆ ಭಾರೀ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳೂ ತಿಳಿಸಿವೆ.

ರಹಿಮಾನ್ ಹತ್ಯೆ ಬೆನ್ನಲ್ಲೇ ಗೃಹ ಇಲಾಖೆ ಕಾರ್ಯವೈಖರಿಗೆ ಮುಸ್ಲಿಂ ಮುಖಂಡರು ಕಿಡಿಕಾರಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮುಸ್ಲಿಂ ಸಮುದಾಯದ ನೋವು ಕೇಳುತ್ತಿಲ್ಲ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

ಸಾಫ್ಟ್ ಗೃಹ ಸಚಿವರಿಂದ ನ್ಯಾಯ ಸಿಗುತ್ತಿಲ್ಲ: ಮುಸ್ಲಿಂ ಮುಖಂಡರ ಅಳಲು

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆ ಕಾರ್ಯ ವೈಫಲ್ಯಕ್ಕೂ ಕಾಂಗ್ರೆಸ್​ನಲ್ಲಿರುವ ಮುಸ್ಲಿಂ ಮುಖಂಡರಿಂದ ವ್ಯಾಪಕ ಆಕ್ಷೇಪ ವ್ಯಕ್ತಪವಾಗಿದೆ. ನಮಗೆ ಓರ್ವ ಖಡಕ್ ಗೃಹ ಸಚಿವರು ಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ಸಾಫ್ಟ್ ಹೋಂ ಮಿನಿಸ್ಟರ್ ಅವರಿಂದ ಮುಸ್ಲಿಮರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿದಿದ್ದಾರೆ.

ಇದನ್ನೂ ಓದಿ
ಬಂಟ್ವಾಳ ರಹಿಮಾನ್ ಹತ್ಯೆ ಹೇಗಾಯ್ತು?ಮಂಗಳೂರಿನಲ್ಲಿ ಏನೇನಾಯ್ತು?ಈಗ ಹೇಗಿದೆ?
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ಬಂಟ್ವಾಳ ಅಬ್ದುಲ್ ಹತ್ಯೆ​: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಮುಸ್ಲಿಂ ಮುಸಾಮೂಹಿಕ ರಾಜೀನಾಮೆ ಬೆದರಿಕೆ

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅಲ್ಲದೆ, ಪರ್ಯಾಯ ಪಕ್ಷ ಕಟ್ಟುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಕೋಮುಹತ್ಯೆ ತಡೆಯಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹಿಮಾನ್ ಕೊಲೆಯಾಗಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ವಾಪಾಸ್ ಪಡೆಯಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ ರಹಿಮಾನ್ ಹತ್ಯೆ..ಮತ್ತೆ ಪ್ರತೀಕಾರದ ಪೋಸ್ಟರ್: ಮಂಗಳೂರಿನಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಏತನ್ಮಧ್ಯೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸದ್ಯ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ನಾಳೆ ಸಂಜೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ. ಮಂಗಳೂರು ಕಮಿನರೇಟ್ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲೂ ನಿಷೇಧಾಜ್ಞೆ ಇದೆ. ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us