AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿರುದ್ಧ ಮುಸ್ಲಿಂ ಸಂಘಟನೆಗಳ ಹೋರಾಟ: ಹೈಕೋರ್ಟ್​ ಖಡಕ್​ ಸೂಚನೆ

ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ ಏಪ್ರಿಲ್ 18ರಂದು ನಡೆಯಲಿದೆ. ಆದರೆ, ಹೈಕೋರ್ಟ್ ರಸ್ತೆ ಸಂಚಾರ ನಿರ್ಬಂಧಿಸದಂತೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕರ್ನಾಟಕ ಉಲಮಾ ಸಮನ್ವಯ ಸಮಿತಿ ಈ ಪ್ರತಿಭಟನೆಗೆ ಕರೆ ನೀಡಿದ್ದು, ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿಭಟನೆಯು ಶಾಂತಿಯುತವಾಗಿರಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ವಕ್ಫ್​ ವಿರುದ್ಧ ಮುಸ್ಲಿಂ ಸಂಘಟನೆಗಳ ಹೋರಾಟ: ಹೈಕೋರ್ಟ್​ ಖಡಕ್​ ಸೂಚನೆ
ಹೈಕೋರ್ಟ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Apr 17, 2025 | 8:31 PM

Share

ಮಂಗಳೂರು, ಏಪ್ರಿಲ್​ 17: ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ಜಾರಿ ವಿರೋಧಿಸಿ ಮುಸ್ಲಿಂ (Muslim) ಸಂಘಟನೆಗಳು ಶುಕ್ರವಾರ (ಏ. 18) ರಂದು ಮಂಗಳೂರು (Mangaluru) ಹೊರವಲಯದ ಅಡ್ಯಾರ್‌ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿವೆ. ಆದರೆ, ಪ್ರತಿಭಟನೆ ವೇಳೆ ರಸ್ತೆ ಸಂಚಾರ ನಿರ್ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಮಂಗಳೂರಿನ ರಾಜೇಶ್ ಅರ್ಕುಳ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಕ್ಫ್ ತಿದ್ದುಪಡಿ ವಿಚಾರ ಸುಪ್ರೀಂ ಕೋರ್ಟ್​ ಪರಿಗಣಿಸುವಾಗ ಪ್ರತಿಭಟನೆ ಸರಿಯಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್​ಹೆಚ್ 73 ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ. ಸರ್ಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಸರ್ಕಾರ ಅನುಮತಿ ನೀಡುವಾಗ ಸುಪ್ರೀಂಕೋರ್ಟ್ ವಿಚಾರಣೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪೀಠ ಹೇಳಿದೆ.

ವಕ್ಫ್​ ತಿದ್ದುಪಡಿ ಜಾಯ್ದೆ ಜಾರಿ ವಿರೋಧಿಸಿ ದೇಶದ ಹಲವು ಕಡೆ ಪ್ರತಿಭಟನೆ ನಡೆಯುತ್ತಿವೆ. ಆದ್ರೆ ಪಶ್ಚಿಮ ಬಂಗಾಳದಲ್ಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿ ಘರ್ಷಣೆಗೆ ಕಾರಣವಾಗುತ್ತಿದೆ. ವಕ್ಫ್​ ತಿದ್ದುಪಡಿ ವಿರೋಧಿ ಹೋರಾಟಕ್ಕೆ ಮಂಗಳೂರಿನಲ್ಲಿ ಮೆಗಾ ಪ್ಲಾನ್ ರೂಪಿಸಲಾಗಿದೆ. ಕರ್ನಾಟಕ ಉಲಮಾ ಸಮನ್ವಯ ಸಮಿತಿ ಈ ಬೃಹತ್‌ ಹೋರಾಟಕ್ಕೆ ಕರೆ ನೀಡಿದ್ದು, ಇದೇ ಮೊದಲ ಬಾರಿಗೆ ಭಾರೀ ಸಂಖ್ಯೆಯಲ್ಲಿ ಹೋರಾಟಕ್ಕೆ ಧಾರ್ಮಿಕ ಪಂಡಿತರು ಧುಮುಕಲಿದ್ದಾರೆ.

ಇದನ್ನೂ ಓದಿ
Image
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
Image
ಹಿಂದೂ ಟ್ರಸ್ಟ್​ನಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ಸುಪ್ರೀಂ ಪ್ರಶ್ನೆ
Image
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
Image
ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ ವಕ್ಫ್​ ಕಾನೂನು ರೂಪಿಸಿತ್ತು

ಮುಸ್ಲಿಂ ಬಾಹುಳ್ಯದ ಕರಾವಳಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರಿಸಿ ದೊಡ್ಡ ಪ್ರತಿಭಟನೆ ಮಾಡಬೇಕೆಂದು ಈಗಾಗಲೇ ಮಸೀದಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಶುಕ್ರವಾರ ಮಸೀದಿ ಪ್ರಾರ್ಥನೆ ಬಳಿಕ ಎಲ್ಲ ಮುಸ್ಲಿಂ ಜನತೆ ಪ್ರತಿಭಟನೆಗೆ ಬರುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗದಿಂದ ಲಕ್ಷಾಂತರ ಜನ ಬರುವ ಸಾಧ್ಯತೆಯಿದೆ.

ಕರ್ನಾಟಕದ ಪ್ರಮುಖ ಮುಸ್ಲಿಂ ಧಾರ್ಮಿಕ ನಾಯಕರಾದ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ಮತ್ತು ಖಾಝಿ ಶೈಖುನಾ ಮಾಣಿ ಉಸ್ತಾದ್ ಮಾರ್ಗದರ್ಶನದಲ್ಲಿ ಈ ಪ್ರತಿಭಟನಾ ಸಭೆ ನಡೆಯಲಿದೆ. ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಕರ್ನಾಟಕದಲ್ಲಿ ಮೊದಲ ಬಾರಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಸಭೆ ಇದಾಗಿದ್ದು ಮುಂದೆ ಬೆಂಗಳೂರು, ಹುಬ್ಬಳಿಯಲ್ಲಿಯೂ ಪ್ರತಿಭಟನೆಗೆ ಪ್ಲಾನ್ ಮಾಡಲಾಗಿದೆ.

ಇದನ್ನೂ ಓದಿ: ಮುಂದಿನ ವಿಚಾರಣೆಯವರೆಗೆ ವಕ್ಫ್​ ಕಾಯ್ದೆಯಲ್ಲಿ ಬದಲಾವಣೆ ಮಾಡುವಂತಿಲ್ಲ; ಸುಪ್ರೀಂ ಕೋರ್ಟ್

2020ರಲ್ಲಿ ಇದೇ ಶಾ ಗಾರ್ಡನ್ ಮೈದಾನದಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆದಿತ್ತು. ಇದೀಗ ವಕ್ಫ್ ತಿದ್ದುಪಡಿ ವಿರುದ್ಧ ಮತ್ತೊಂದು ಬೃಹತ್ ಶಕ್ತಿ ಪ್ರದರ್ಶನಕ್ಕೆ ಮಂಗಳೂರು ಸಜ್ಜುಗೊಂಡಿದೆ. ಪ್ರತಿಭಟನಾ ಸಭೆಗೆ ಬರುವಾಗ ಶಿಸ್ತು, ಶಾಂತಿಯನ್ನು ಪಾಲಿಸಬೇಕು, ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಆಯೋಜಕರು ಮನವಿ ಮಾಡಿಕೊಂಡಿದ್ದು ಭದ್ರತೆ ದೃಷ್ಟಿಯಿಂದ ಪೊಲೀಸರು ಸಹ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Thu, 17 April 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ