ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ಕಿರಿಕ್: ಇಸ್ರೇಲ್ ಸಜಂಕಾ ಡಿಜೆ ರದ್ದು..!

ಮಂಗಳೂರಿನಲ್ಲಿ ಹೊಸ ವರ್ಷದ ಆಚರಣೆಗಾಗಿ ಆಯೋಜಿಸಲಾಗಿದ್ದ ಪ್ರಸಿದ್ಧ ಡಿಜೆ ಸಜಂಕಾ ಅವರ ಕಾರ್ಯಕ್ರಮವನ್ನು ಹಿಂದೂ ಸಂಘಟನೆಗಳ ತೀವ್ರ ವಿರೋಧದಿಂದಾಗಿ ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಡಿಜೆ ಕಾರ್ಯಕ್ರಮದಲ್ಲಿ ಹಿಂದೂ ದೇವರಿಗೆ ಅವಮಾನ ಆರೋಪ ಹಿನ್ನೆಲೆಯಲ್ಲಿ ಈ ವಿರೋಧ ವ್ಯಕ್ತವಾಗಿತ್ತು. ಪೊಲೀಸರು ಕೂಡ ಕಾರ್ಯಕ್ರಮಕ್ಕೆ ಅನುಮತಿ ನೀಡದಿರುವುದರಿಂದ ರದ್ದು ಮಾಡಲಾಗಿದೆ.

ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ಕಿರಿಕ್: ಇಸ್ರೇಲ್ ಸಜಂಕಾ ಡಿಜೆ ರದ್ದು..!
ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ಕಿರಿಕ್: ಇಸ್ರೇಲ್ ಸಜಂಕಾ ಡಿಜೆ ರದ್ದು..!
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Dec 27, 2024 | 6:18 PM

ಮಂಗಳೂರು, ಡಿಸೆಂಬರ್​ 27: ನಗರದ ಬೋಳಾರದ ಸಿಟಿ ಬೀಚ್​​ನಲ್ಲಿ ಇಂದು ಸಂಜೆ ನ್ಯೂ ಇಯರ್ (New Year) ಆಚರಣೆಗೂ ಮೊದಲೇ ನಡೆಯಬೇಕಿದ್ದ ಇಸ್ರೇಲ್ ಮೂಲದ ಪ್ರಖ್ಯಾತ ಸಂಗೀತಗಾರ ಸಜಂಕಾ ಡಿಜೆ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಆಗಿದೆ. ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ಬೆನ್ನಲ್ಲೇ ಇದೀಗ ಕಾರ್ಯಕ್ರಮ ರದ್ದಾಗಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಹಿಂದೂ ದೇವರ ಅವಹೇಳನ ಆರೋಪ

ಕಡಲನಗರಿ ಮಂಗಳೂರಿನಲ್ಲಿ ನ್ಯೂ ಇಯರ್ ಆಚರಣೆಗೂ ಮೊದಲೇ ಪಾರ್ಟಿಗಳಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಇಸ್ರೇಲ್ ಮೂಲದ ಪ್ರಖ್ಯಾತ ಸಂಗೀತಗಾರ ಸಜಂಕಾ ಡಿಜೆ ಕುಣಿತದಲ್ಲಿ ಹಿಂದೂ ದೇವರ ಅವಹೇಳನ ಆರೋಪ ಕೇಳಿಬಂದಿತ್ತು. ಹೀಗಾಗಿ ಭಜರಂಗದಳ, ಹಿಂದೂ ಜಾಗರಣಾ ವೇದಿಕೆಯಿಂದ ಕಾರ್ಯಕ್ರಮ ತಡೆಯುವ ಎಚ್ಚರಿಕೆ ನೀಡಿತ್ತು. ಮಂಗಳೂರು ಪೊಲೀಸರಿಗೂ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಸಂಘಟನೆಗಳು ಮನವಿ ಮಾಡಿದ್ದವು.

ಇದನ್ನೂ ಓದಿ: ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳಿಗೆ ಹಿಂದೂಪರ ಸಂಘಟನೆಗಳು ವಿರೋಧ

ಇನ್ನು ಈ ಕಾರ್ಯಕ್ರಮ ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದ ಆರೋಪ ಕೇಳಿಬಂದಿದ್ದು, ಬಜರಂಗದಳ ಕಾರ್ಯಕ್ರಮದಲ್ಲಿ ಭಾರೀ ಪ್ರಮಾಣದ ಡ್ರಗ್ಸ್​ ಪೂರೈಕೆ ಅನುಮಾನ ವ್ಯಕ್ತಪಡಿಸಿದೆ. ಮೃತ್ಯುಂಜಯ ಮಹಾ ಮಂತ್ರ, ರಾಮತಾರಕ ಮಂತ್ರ, ವಿಷ್ಣು ಸಹಸ್ರನಾಮ, ಗಾಯತ್ರಿ ಮಂತ್ರ, ದುರ್ಗಾ ಸಪ್ತತಿ ಮಂತ್ರ ಸೇರಿದಂತೆ ಶೋಕ, ಮಂತ್ರಗಳನ್ನು ಮತ್ತು ದೇವರ ಹಾಡುಗಳನ್ನು ವಿಚಿತ್ರವಾಗಿ ವಿಡಂಬನೆ ಮಾಡುವ ಮೂಲಕ ಧಾರ್ಮಿಕ ಭಾವನೆಗೆ ನಿಂದನೆ ಆರೋಪ ಮಾಡಲಾಗಿತ್ತು.

ಇನ್ನು ಇಷ್ಟೆಲ್ಲಾ ವಿರೋಧಧ ಕೂಡ ಮಂಗಳೂರಿನ ಸಜಂಕಾ ಲೈವ್ ಕಾರ್ಯಕ್ರಮದ ಟಿಕೆಟ್ ಸೋಲ್ಡ್ ಔಟ್ ಆಗಿತ್ತು. ಕಾರ್ಯಕ್ರಮದ ಬಹುತೇಕ ಸಿದ್ದತೆಗಳು ಪೂರ್ಣಗೊಂಡಿದ್ದವು. ಈಗಾಗಲೇ ಮಂಗಳೂರಿಗೆ ಡಿಜೆ ಸಜಂಕಾ ಆಗಮಿಸಿದ್ದಾರೆ. ಆದರೆ ಸಂಜೆ ಕಾರ್ಯಕ್ರಮದ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ ಹಿನ್ನಲೆ ಕಾರ್ಯಕ್ರಮ ರದ್ದು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಹೊಸ ವರ್ಷಾಚರಣೆ: ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗಿಲ್ಲ ನಿರ್ಬಂಧ, ಪರಮೇಶ್ವರ್

ಬಜರಂಗದಳ ಮುಖಂಡ ಪುನೀತ್ ಅತ್ತಾವರ ಇಂದು ಸಂಜೆ 6 ಗಂಟೆಗೆ ಪಾರ್ಟಿ ಆಯೋಜನೆಯ ಸ್ಥಳದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಸಜಂಕಾ ಎಂದು ಪೋಸ್ಟ್ ವೈರಲ್​ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.