AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್; ಮಂಗಳೂರಿನಲ್ಲಿ 21 ಪ್ರಕರಣ ದಾಖಲು

ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಪುನರಾವರ್ತಿತ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Mangaluru News: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್; ಮಂಗಳೂರಿನಲ್ಲಿ 21 ಪ್ರಕರಣ ದಾಖಲು
ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 12, 2023 | 4:20 PM

Share

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದಿ ಸಂದೇಶಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ (Mangaluru Police Commissioner) ಕುಲದೀಪ್ ಕುಮಾರ್ ಜೈನ್ (Kuldeep Kumar Jain) ತಿಳಿಸಿದ್ದಾರೆ. ಮೇಲಿನ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಜೈನ್, ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಮತ್ತು ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

‘ವಾಟ್ಸ್​​ಆ್ಯಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಇತರ ಅಪ್ಲಿಕೇಶನ್‌ಗಳಲ್ಲಿ ಕೋಮು ಸೂಕ್ಷ್ಮ ಸಂದೇಶಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ’ ಎಂದು ಜೈನ್ ಹೇಳಿದ್ದಾರೆ. ಯಾವುದೇ ಧರ್ಮದ ಪರವಾಗಿ ಮತ್ತು ವಿರುದ್ಧವಾಗಿ ಸಂದೇಶಗಳನ್ನು ಪೋಸ್ಟ್ ಮಾಡುವ, ಹಂಚಿಕೊಳ್ಳುವ ಮತ್ತು ಕಾಮೆಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಎಲ್ಲಾ ಪೊಲೀಸ್ ಠಾಣೆಗಳ ಸಾಮಾಜಿಕ ಮಾಧ್ಯಮ ಸೆಲ್‌ಗಳಲ್ಲಿ ಕಟ್ಟುನಿಟ್ಟಾದ ನಿಗಾ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಪುನರಾವರ್ತಿತ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿ ಹಲವೆಡೆ ಡೆಂಗ್ಯೂ ಪ್ರಕರಣ ಹೆಚ್ಚಳ; ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ

ನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡಲು ಆ್ಯಂಟಿ ಕಮ್ಯುನಲ್ ವಿಂಗ್ ಅನ್ನು ಕಳೆದ ತಿಂಗಳು ಮಂಗಳೂರಿನಲ್ಲಿ ಸ್ಥಾಪಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Wed, 12 July 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!