Mangaluru News: 14ನೇ ಮಹಡಿಯಿಂದ ಬಿದ್ದು 21 ವರ್ಷದ ಯುವಕ ಸಾವು

| Updated By: Digi Tech Desk

Updated on: Mar 30, 2023 | 4:57 PM

21 ವರ್ಷದ ಯುವಕನೊಬ್ಬ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಕೆಪಿಟಿ ಬಳಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಂಗಳೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Mangaluru News: 14ನೇ ಮಹಡಿಯಿಂದ ಬಿದ್ದು 21 ವರ್ಷದ ಯುವಕ ಸಾವು
ಮೊಹಮ್ಮದ್ ಶಾಮಲ್
Image Credit source: daijiworld
Follow us on

ಮಂಗಳೂರು: 21 ವರ್ಷದ ಯುವಕನೊಬ್ಬ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಕೆಪಿಟಿ ಬಳಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಂಗಳೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಯುವಕನ ಸಾವಿಗೆ ಕಾರಣ ಏನು ಎಂದು ಇನ್ನು ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್ 14ನೇ ಮಹಡಿಯಲ್ಲಿ ವಾಸವಿದ್ದ ಅಬ್ದುಲ್ ಸಲೀಂ ಎಂಬುವವರ ಪುತ್ರ ಮೊಹಮ್ಮದ್ ಶಾಮಲ್ (21) ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ಇಂದು (ಮಾರ್ಚ್ 30) ಮುಂಜಾನೆ 4.45 ರ ಸುಮಾರಿಗೆ ಶಾಮಲ್ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದರು. ಆತನ ದೇಹವನ್ನು ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮೃತರ ಚಿಕ್ಕಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಎರಡು ಬೈಕ್​​ಗಳ ನಡುವೆ ಅಪಘಾತ, ಒಬ್ಬ ಸಾವು

ಎರಡು ಬೈಕ್​​ಗಳ ನಡುವೆ ಅಪಘಾತ ನಡೆದು ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ. ಇನ್ನೊಂದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳ್ತಂಗಡಿ ತಾಲೂಕಿನ ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ಡ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: Mangaluru: ಕೋಟೆಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ದೆಹಲಿ ಮಹಿಳೆಯ ಕೊಲೆ; ಜತೆಗಿದ್ದ ವ್ಯಕ್ತಿ ನಾಪತ್ತೆ

ಸಾವನ್ನಪ್ಪಿದ ಹೆನ್ಡ್ರಿ ಡಿಸೋಜಾ ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗು ಇದೆ. ಸಾವನ್ನಪ್ಪಿದ ಹೆನ್ಡ್ರಿ ಡಿಸೋಜಾ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಶವಗಾರಕ್ಕೆ ಸಾಗಿಸಲಾಗಿದ್ದು. ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:43 pm, Thu, 30 March 23