AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ; ಕಮಿಷನರ್​ಗೆ ಲೋಕಾಯುಕ್ತ ಬುಲಾವ್

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉಳ್ಳಾಲ ಇನ್ಸ್​​ಪೆಕ್ಟರ್​ ಸಂದೀಪ್​​, ಎಸ್​ಐ ಪ್ರದೀಪ್ ವಿರುದ್ಧ ದೂರು ದಾಖಲಾಗಿದೆ.

Mangaluru News: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ; ಕಮಿಷನರ್​ಗೆ ಲೋಕಾಯುಕ್ತ ಬುಲಾವ್
Mangaluru Police Commissioner Shashi Kumar
TV9 Web
| Edited By: |

Updated on:Jan 28, 2023 | 9:19 AM

Share

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತರಿಂದ ನೋಟಿಸ್ ಜಾರಿ ಮಾಡಲಾಗಿದೆ. ಫೆ.14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉಳ್ಳಾಲ ಇನ್ಸ್​​ಪೆಕ್ಟರ್​ ಸಂದೀಪ್​​, ಎಸ್​ಐ ಪ್ರದೀಪ್ ವಿರುದ್ಧ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ದೂರಿನ ಆಧಾರದ ಮೇಲೆ ಲೋಕಾಯುಕ್ತರು ಮಂಗಳೂರು ಪೊಲೀಸ್ ಕಮಿಷನರ್​ಗೆ ನೋಟಿಸ್ ನೀಡಿದ್ದಾರೆ. ಹಾಗೂ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.

ದೂರಿನಲ್ಲೇನಿದೆ?

ಇನ್ಸ್​​ಪೆಕ್ಟರ್​​​, ಎಸ್​ಐ ವಿರುದ್ಧ ಹಣ ವಸೂಲಿ ಸೇರಿ ಹಲವು ಆರೋಪಗಳನ್ನು ಕಬೀರ್ ಮಾಡಿದ್ದಾರೆ. ಬ್ರೋಕರ್​​ ಹಮೀದ್ ಎಂಬುವನ ಮೂಲಕ ಹಣ ವಸೂಲಿ ಆರೋಪ. ಗಾಂಜಾ ಮಾಫಿಯಾ, ಮರಳು ಮಾಫಿಯಾಗಳಿಂದ ಹಣ ವಸೂಲಿ. ಹೋಟೆಲ್​ ಮಾಲೀಕರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ. ಹಾಗೂ ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದನೆ ಮಾಡಿದ್ದಾರೆ. ಚಿನ್ನದ ಅಂಗಡಿ ದರೋಡೆ ಕೇಸ್​ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ್ದಾರೆ ಎಂದು ದೂರಿನಲ್ಲಿ ಕಬೀರ್ ಉಲ್ಲೇಖಿಸಿದ್ದಾರೆ. ಹಾಗೂ ಮಂಗಳೂರು ಪೊಲೀಸ್​ ಕಮಿಷನರ್ ವಿರುದ್ಧವೂ ಆರೋಪ ಮಾಡಿದ್ದಾರೆ. ಕಮಿಷನರ್ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಗೆ ಮೊಹಮ್ಮದ್ ಕಬೀರ್ ದೂರು ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟಿಸ್ ನೀಡಿದ್ದು 2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಪೊಲೀಸ್ ಕಮೀಷನರ್ ಶಶಿಕುಮಾರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇನ್ಸ್ ಪೆಕ್ಟರ್ ಸಂದೀಪ್, ಎಸ್.ಐ ಪ್ರದೀಪ್ ಠಾಣೆಗೆ ಬರುವವರೊಂದಿಗೆ ಹಣ ವಸೂಲು ಮಾಡಲು ಹಮೀದ್ ಎಂಬ ಬ್ರೋಕರ್ ಇಟ್ಟುಕೊಂಡಿದ್ದು, ಗಾಂಜಾ ಮಾಫಿಯ, ಮರಳು ಮಾಫಿಯ, ಹೊಟೇಲ್ ಮಾಲೀಕರಿಗೆ ಪ್ರತಿಯೊಂದರಲ್ಲಿ ಹಣದ ಬೇಡಿಕೆಯನ್ನು ಇಟ್ಟು ಜನರ ನೆಮ್ಮದಿಯನ್ನು ಹಾಳು ಮಾಡಿದ್ದಾರೆ. ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ರೂ. ಸಂಪಾದಿಸಿದ್ದಾರೆ. ಈ ಕುರಿತು ಇ-ಮೇಲ್ ಮೂಲಕ ಹಲವು ಇಲಾಖೆಯ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಎಸಿಬಿ, ಎಡಿಜಿಪಿ, ದ.ಕ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಎಲ್ಲರಿಗೂ ಭ್ರಷ್ಟಾಚಾರದ ವಿರುದ್ಧ ದೂರು ನೀಡಿದರೂ ಯಾವುದೇ ಸ್ಪಂದನೆಯಿಲ್ಲ. ಪೊಲೀಸರ ಭ್ರಷ್ಟಾಚಾರದ ಬಗ್ಗೆ ದೂರು ನೀಡಿರುವುದಕ್ಕೆ ತನಗೆ ಬೆದರಿಕೆಯನ್ನು ಹಾಕಲಾಗಿದೆ. ಅಲ್ಲದೇ ದೂರು ನೀಡಿದ ಬಗ್ಗೆ ತನ್ನನ್ನೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಕಬೀರ್ ದೂರು ನೀಡಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:15 am, Sat, 28 January 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್