AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾದಂಬರಿಕಾರ, ಭಾಷಾತಜ್ಞ, ಸಾಹಿತಿ ಕೆಟಿ ಗಟ್ಟಿ ನಿಧನ

ಕರ್ನಾಟಕ ಸಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ. ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಇಂದು (ಸೋಮವಾರ, ಫೆಬ್ರವರಿ 19) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಕಾದಂಬರಿಕಾರ, ಭಾಷಾತಜ್ಞ, ಸಾಹಿತಿ ಕೆಟಿ ಗಟ್ಟಿ ನಿಧನ
ಖ್ಯಾತ ಕಾದಂಬರಿಕಾರ ಕೆಟಿ ಗಟ್ಟಿ
ವಿವೇಕ ಬಿರಾದಾರ
|

Updated on:Feb 19, 2024 | 2:19 PM

Share

ಮಂಗಳೂರು, ಫೆಬ್ರವರಿ 19: ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ. ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) (86 ವರ್ಷ) (KT Gatti) ಅವರು ಇಂದು (ಸೋಮವಾರ, ಫೆಬ್ರವರಿ 19) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಯಶೋದಾ, ಪುತ್ರ ಸತ್ಯಜಿತ್​, ಪುತ್ರಿಯರಾದ ಪ್ರಿಯದರ್ಶಿನಿ, ಜಿತ್​ ಪ್ರಭಾ ಇದ್ದಾರೆ. ಕೆ.ಟಿ. ಗಟ್ಟಿಯವರು 1938ರ ಜುಲೈ 22 ರಂದು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದರು. ಕೆ.ಟಿ ಗಟ್ಟಿಯವರು ಈಚೆಗೆ ದಕ್ಷಿಣ ಕನ್ನಡದಲ್ಲಿ ನೆಲಸಿದ್ದರು. 1957ರಿಂದಲೇ ಸಾಹಿತ್ಯ ಕೃಷಿ ಪ್ರಾರಂಭಿಸಿದ ಗಟ್ಟಿಯವರಿಗೆ ತಂದೆ ತಾಯಿಗಳೇ ಪ್ರೇರಣೆ. ವೃತ್ತಿಯಲ್ಲಿ ಕೃಷಿಕರಾದರೂ ಯಕ್ಷಗಾನ ಪ್ರಿಯರಾಗಿದ್ದರು. ತಾಯಿ ಪರಮೇಶ್ವರಿಯವರು ಮನೆಯಲ್ಲಿ ಹಾಡುತ್ತಿದ್ದ ತುಳು ಮತ್ತು ಮಲಯಾಳಂ ಪಾಡ್ದನಗಳು (ಪದ್ಯರೂಪಿ ಕಥಾನಕಗಳು) ಸಾಹಿತ್ಯದಲ್ಲಿ ಮತ್ತಷ್ಟು ಆಸಕ್ತಿ ಬೆಳೆಯುವಂತೆ ಮಾಡಿದವು.

ಕೆ.ಟಿ ಗಟ್ಟಿಯವರು ಕಾಸರಗೋಡಿನ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿದರು. ಭೋದನೆ ಜೊತೆ ಜೊತೆಗೆಯೇ ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದರು. ನಂತರ 1968ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆ ಸೇರಿ ಆರು ವರ್ಷಗಳ ಕಾಲ ಇಂಗ್ಲಿಷ್‌ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದರ ಜೊತೆಗೆ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿ ಸೇವೆಸಲ್ಲಿಸಿದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ನಿಯುಕ್ತರಾಗಿ ಇಥಿಯೋಪಿಯಾದಲ್ಲಿ ಕಾರ್ಯನಿರ್ವಹಿಸಿ 1982ರಲ್ಲಿ ಸ್ವದೇಶಕ್ಕೆ ಮರಳಿದರು.

ಪೂರ್ಣಾವಧಿ ಲೇಖಕರಾಗಿ ಬದುಕಲು ನಿರ್ಧರಿಸಿ ಉಜಿರೆಯ ಬಳಿ ಜಮೀನು ಖರೀದಿಸಿ ‘ವನಸಿರಿ’ಯಲ್ಲಿ ಕೃಷಿ, ಸಾಹಿತ್ಯ ಕೃಷಿ ಎರಡರಲ್ಲೂ ತೊಡಗಿಸಿಕೊಂಡರು. ಕೆ ಟಿ ಗಟ್ಟಿಯವರ ಮೊದಲ ಕಾದಂಬರಿ ‘ಶಬ್ದಗಳು’ ಧಾರಾವಾಹಿಯಾಗಿ 1976ರಲ್ಲಿ ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿತ್ತು.

ಕಾದಂಬರಿಗಳು

ಕಾರ್ಮುಗಿಲು, ಪುನರಪಿ ಜನನಂ, ಬಿಸಿಲುಗುದುರೆ, ಕಾಮರೂಪಿ, ಸನ್ನಿವೇಶ, ಉರಿ, ಶಬ್ದಗಳು, ನಿರಂತರ, ಸ್ವರ್ಣ ಮೃಗ, ಅಬ್ರಾಹ್ಮಣ, ಪರುಷ, ಅಶ್ರುತ ಗಾನ, ಅರಗಿನ ಅರಮನೆ, ಶಿಲಾ ತಪಸ್ವಿ, ಸನ್ನಿವೇಶ, ಗ್ಲಾನಿ, ಪರಮಾರ್ಥ, ಪರಿಧಿ, ಪೂಜಾರಿ, ಮನೆ, ಕೆಂಪು ಕಳವೆ, ಕರ್ಮಣ್ಯೇವಾಧಿಕಾರಸ್ತೆ, ಭೂಮಿಗೀತೆ, ಕೂಪ, ಅಪೂರ್ಣ, ಸುಖಾಂತ, ಸಾಫಲ್ಯ, ಕಾಮಯಜ್ಞ, ಅವಿಭಕ್ತರು, ರಸಾತಳ, ನವೆಂಬರ್ 10, ಯುಗಾಂತರ, ಮಿತಿ, ರಾಗಲಹರಿ, ಮೃತ್ಯೋರ್ಮಾ ಅಮೃತಂ ಗಮಯ, ಏಳು ಮಲ್ಲಿಗೆ ತೂಕದ ಹುಡುಗಿ, ಇತಿಹಾಸದ ಮೊಗಸಾಲೆಯಲ್ಲಿ, ಅನಂತರ, ಅಂತರಂಗದ ಅತಿಥಿ, ಯುದ್ಧ ಹೀಗೆ ಅವರ ಕಾದಂಬರಿಗಳ ಐವತ್ತರ ಸಂಖ್ಯೆಯನ್ನು ಮೀರಿವೆ.

ಪತ್ರಿಕೆಗಳಿಗೆ ಬರೆದ ಕಥೆಗಳು

‘ಮನುಷ್ಯನ ವಾಸನೆ ಮತ್ತು ಇತರ ಕಥೆಗಳು’, ‘ನೀಲಿ ಗುಲಾಬಿ ಮತ್ತು ಇತರ ಕಥೆಗಳು’, ‘ಭೂಗತ ಮತ್ತು ಇತರ ಕಥೆಗಳು’, ‘ವಿಶ್ವ ಸುಂದರಿ ಮತ್ತು ಇತರ ಕಥೆಗಳು’ ಹಾಗೂ ‘ಪ್ರೀತಿ ಎಂಬ ಮಾಯೆ ಮತ್ತು ಇತರ ಕಥೆಗಳು’ ಎಂಬ ಸಂಕಲನಗಳಲ್ಲಿ ಸೇರಿವೆ.

ವೈಚಾರಿಕ ಬರಹಗಳು

ಶಿಕ್ಷಣ, ಸಾಹಿತ್ಯ, ಸಾಮಾಜಿಕ ಈ ವಿಷಯಗಳ ಬಗ್ಗೆ ಚಿಂತನೆಗೆ ಹಚ್ಚುವ ಅವರ ಹಲವಾರು ಮೌಲಿಕ ಲೇಖನಗಳು ಆಗಾಗ್ಗೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ‘ಮೂರನೆಯ ಧ್ವನಿ’ (ಸಾಹಿತ್ಯ ಚಿಂತನ), ‘ನಿನ್ನೆ ನಾಳೆಗಳ ನಡುವೆ’ (ಸಾಮಾಜಿಕ ಚಿಂತನ), ‘ನಮ್ಮ ಬದುಕಿನ ಪುಟಗಳು’, ‘ನಮ್ಮೊಳಗಿನ ಆಕಾಶ’, ‘ನಾಲ್ಕುದಿಕ್ಕು ಮತ್ತು ಅಂತರಾಳದ ತಂತಿ’ (ವೈಚಾರಿಕ ಲೇಖನಗಳ ಕೃತಿಗಳು) ಪ್ರಕಟಗೊಂಡಿವೆ.

ನಾಟಕಗಳು

ನಾಟಕ ಕೃತಿಗಳು ನಾಟ್ಕ, ಕೆಂಪುಕಾಗೆ, ಸತ್ಯಕ್ಕೆ ಜಯ, ಕುರುಡರು, ನಗರ ಪರ್ವ, ಬೊಂಬೆಯಾಟ, ಜುಜುಬಿದೇವರ ಜುಗಾರಿ ಮುಂತಾದವು. ಹೀಗೆ ಮೂಡಿ ಬಂದ ಇಪ್ಪತ್ತಕ್ಕೂ ಹೆಚ್ಚು ನಾಟಕಗಳು ಅವರಿಂದ ಮೂಡಿ ಬಂದಿವೆ.

ಪ್ರಶಸ್ತಿ ಗೌರವಗಳು

ಸಾಹಿತ್ಯ ಕ್ಷೇತ್ರದ ಗಣನೀಯ ಸೇವೆಗಾಗಿ ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ‘ಸಂದೇಶ’ ವರ್ಷದ ಲೇಖಕ ಪ್ರಶಸ್ತಿ, ಸಾಹಿತ್ಯ ಸವ್ಯಸಾಚಿ -2011 ಗೌರವ, ನಾಟಕಗಳಿಗಾಗಿ ಚದುರಂಗ ಪ್ರಶಸ್ತಿ ಮತ್ತು ಸಮತಂತೋ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ 10ನೇಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ, ಕಾಸರಗೊಡು ಜಿಲ್ಲಾ 2ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:11 pm, Mon, 19 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್