AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಆಲಪ್ಪುಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ, ಗಡಿಗಳಲ್ಲಿ ವಿಶೇಷ ಚೆಕ್ ಪೋಸ್ಟ್​

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ಜಿಲ್ಲೆಗೆ ಸೋಂಕು ಹರಡದಂತೆ ತಡೆಯಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೇರಳದ ಆಲಪ್ಪುಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ, ಗಡಿಗಳಲ್ಲಿ ವಿಶೇಷ ಚೆಕ್ ಪೋಸ್ಟ್​
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 22, 2024 | 4:05 PM

Share

ಮಂಗಳೂರು, ಏಪ್ರಿಲ್ 22: ಕೇರಳದ (Kerala) ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ (Bird fever) ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಇಂದಿನಿಂದ (ಸೋಮವಾರ) ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್​​ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಏನಿದು ಹಕ್ಕಿ ಜ್ವರ?

ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು.

ಇದನ್ನೂ ಓದಿ: ಹಕ್ಕಿ ಜ್ವರ ಲಕ್ಷಣವೇನು?

ಹಕ್ಕಿ ಜ್ವರವನ್ನು ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲಾಗುತ್ತದೆ. ಇದು ಸಾಂಕ್ರಾಮಿಕ ಸೋಂಕು ಆಗಿದ್ದು, ಪಕ್ಷಿಗಳಿಗೆ ಮಾತ್ರವಲ್ಲ, ಕೆಲವೊಮ್ಮೆ ಮಾನವರು ಮತ್ತು ಇತರ ಪ್ರಾಣಿಗಳಿಗೂ ಸೋಂಕು ಹರಡುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಮೂಲದ ಪ್ರಕಾರ, ಹಕ್ಕಿ ಜ್ವರಕ್ಕೆ ಕಾರಣವಾಗುವ ವೈರಸನ್ನು 1997ರಲ್ಲಿ ಮೊದಲು ಮಾನವರಲ್ಲಿ ಕಂಡುಹಿಡಿಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!