ಮಂಗಳೂರು: ಬಿಂದು ಕಾರ್ಖಾನೆ ಬಳಿ ಬೋರ್​ವೆಲ್​ ಕೊರೆಯುತ್ತಿದ್ದ ಲಾರಿ ಮೇಲೆ ಅನ್ಯಕೋಮಿನಿಂದ ಕಲ್ಲು ತೂರಾಟ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚಿಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಇದೀಗ ಮಂಗಳೂರಿನಲ್ಲಿ ಬೋರ್​ವೆಲ್​ ಕೊರೆಯವ ಲಾರಿ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆದಿದೆ.

ಮಂಗಳೂರು: ಬಿಂದು ಕಾರ್ಖಾನೆ ಬಳಿ ಬೋರ್​ವೆಲ್​ ಕೊರೆಯುತ್ತಿದ್ದ ಲಾರಿ ಮೇಲೆ ಅನ್ಯಕೋಮಿನಿಂದ ಕಲ್ಲು ತೂರಾಟ
ಕಲ್ಲು ತೂರಾಟ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ

Updated on:May 28, 2024 | 1:37 PM

ಮಂಗಳೂರು, ಮೇ 28: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ (Law and Order) ಹಳಿ ತಪ್ಪುತ್ತಿದೆ. ಅಲ್ಲಲ್ಲಿ ಕೊಲೆ, ಹಲ್ಲೆ, ಕಲ್ಲು ತೂರಾಟದಂತಹ ಪ್ರಕರಣಗಳು ನಡೆಯುತ್ತಿವೆ. ಇದೀಗ, ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಪುರುಷರಕಟ್ಟೆಯಲ್ಲಿನ ರಾಜ್ಯದ ಪ್ರಸಿದ್ಧ ಬಿಂದು ನೀರಿನ ಕಾರ್ಖಾನೆ ಬಳಿ ಬೋರ್​ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆಸಿದೆ. ಬಿಂದು ಕಂಪನಿ, ಬೋರ್​ ವೆಲ್​ಗಳನ್ನು ಫ್ಲಶ್ ಮಾಡುವ ಬದಲು, ಹೊಸದಾಗಿ ಕೊರೆಸುತ್ತಿದೆ ಎಂದು ಅನ್ಯಕೋಮಿನ ಗುಂಪು ಕಲ್ಲು ತೂರಾಟ ಮಾಡಿದೆ. ಬಳಿಕ ಎರಡೂ ಕಡೆಯಿಂದ ಪರಸ್ಪರ ಕಲ್ಲು ತೂರಾಟವಾಗಿದೆ. ಎರಡೂ ಕಡೆ ಗುಂಪುಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ಇತ್ತೀಚಿಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಮಟ್ಕಾ ದಂಧೆ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ಚನ್ನಗಿರಿ ಠಾಣೆ ಪೊಲೀಸರು ಆದಿಲ್​ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದರು. ಆದಿಲ್​ ಠಾಣೆಗೆ ಬರುತ್ತಿದ್ದಂತೆ ಕುಸಿದು ಬಿದ್ದಿದ್ದನು.

ಇದನ್ನೂ ಓದಿ: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಮಹಿಳೆ ಮನೆ ಬಳಿ ದಾಂಧಲೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಮುಸ್ಲಿಂ ಯುವಕರು

ಕೂಡಲೆ ಆದಿಲ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆದಿಲ್​​ ಆಸ್ಪತ್ರೆಯಲ್ಲಿ ಮೃತಪಟ್ಟಿಲ್ಲ, ಇದು ಲಾಕ್​ಪ್​ ಡೆತ್​ ಅಂತ ಆದಿಲ್​ ಸಂಬಂಧಿಕರು ಚನ್ನಗಿರಿ ಪೊಲೀಸ್​ ಠಾಣೆ ಮುಂದೆ ಜಮಾಯಿಸಿದ್ದರು.

ಈ ವೇಳೆ ಸ್ಥಳಕ್ಕೆ ಬಂದ ಡಿವೈಎಸ್​ಪಿ ಮತ್ತು ಎಸ್​ಪಿ ಆದಿಲ್​ ಕುಟುಂಬಸ್ಥರಿಗೆ ವಾಸ್ತವತೆಯನ್ನು ಹೇಳಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರೂ, ಕೇಳದ ಗುಂಪು ಪೊಲೀಸ್​ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದೆ. ಇದರಿಂದ 10 ಪೊಲೀಸ್​ ವಾಹನ ಜಖಂಗೊಂಡಿವೆ. ಮತ್ತು ಪೊಲೀಸ್​ ಸಿಬ್ಬಂದಿಗಳಿಗೆ ಗಾಯವಾಗಿದೆ. ಈ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಕಲ್ಲು ತೂರಾಟ ನಡೆದಿದೆ.

ರಾಜ್ಯದಲ್ಲಿ ಒಂದಲ್ಲಾ ಒಂದು ಅಪರಾಧ ಕೃತ್ಯಗಳು ಪ್ರತಿದಿನ ನಡೆಯುತ್ತಿವೆ. ಈ ಪ್ರಕರಣಗಳು ತೀರ್ವ ಸ್ಪರೂಪ ಪಡೆದುಕೊಳ್ಳುತ್ತಿವೆ.

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬ ವಿಪಕ್ಷಗಳ ಆರೋಪದ ಮಧ್ಯೆಯೇ ಈ ಘಟನೆ ನಡೆದಿದ್ದು, ಸರ್ಕಾರಕ್ಕೆ ತಲೆಬಿಸಿಯಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ, ಹಾವೇರಿಯಲ್ಲಿ ಮಹಿಳೆ ಮೇಲೆ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರ ಆರೋಪ, ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಕೊಲೆ ರಾಜ್ಯ ಸರ್ಕಾರದ ಬುಡ ಅಲುಗಾಡಿಸಿವೆ. ಇದೀಗ ಮಂಡ್ಯದಲ್ಲಿ ಅಭಿಷೇಕ ಎಂಬ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ, ಮಂಗಳೂರಿನಲ್ಲಿ ಬೋರ್​ವೆಲ್ ಕೊರೆಯುವ ಲಾರಿ ಮೇಲೆ ಕಲ್ಲು ತೂರಾಟ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:35 pm, Tue, 28 May 24

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ