ಮಂಗಳೂರು, ಮೇ 28: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ (Law and Order) ಹಳಿ ತಪ್ಪುತ್ತಿದೆ. ಅಲ್ಲಲ್ಲಿ ಕೊಲೆ, ಹಲ್ಲೆ, ಕಲ್ಲು ತೂರಾಟದಂತಹ ಪ್ರಕರಣಗಳು ನಡೆಯುತ್ತಿವೆ. ಇದೀಗ, ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಪುರುಷರಕಟ್ಟೆಯಲ್ಲಿನ ರಾಜ್ಯದ ಪ್ರಸಿದ್ಧ ಬಿಂದು ನೀರಿನ ಕಾರ್ಖಾನೆ ಬಳಿ ಬೋರ್ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆಸಿದೆ. ಬಿಂದು ಕಂಪನಿ, ಬೋರ್ ವೆಲ್ಗಳನ್ನು ಫ್ಲಶ್ ಮಾಡುವ ಬದಲು, ಹೊಸದಾಗಿ ಕೊರೆಸುತ್ತಿದೆ ಎಂದು ಅನ್ಯಕೋಮಿನ ಗುಂಪು ಕಲ್ಲು ತೂರಾಟ ಮಾಡಿದೆ. ಬಳಿಕ ಎರಡೂ ಕಡೆಯಿಂದ ಪರಸ್ಪರ ಕಲ್ಲು ತೂರಾಟವಾಗಿದೆ. ಎರಡೂ ಕಡೆ ಗುಂಪುಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.
ಇತ್ತೀಚಿಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಮಟ್ಕಾ ದಂಧೆ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ಚನ್ನಗಿರಿ ಠಾಣೆ ಪೊಲೀಸರು ಆದಿಲ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದರು. ಆದಿಲ್ ಠಾಣೆಗೆ ಬರುತ್ತಿದ್ದಂತೆ ಕುಸಿದು ಬಿದ್ದಿದ್ದನು.
ಇದನ್ನೂ ಓದಿ: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಮಹಿಳೆ ಮನೆ ಬಳಿ ದಾಂಧಲೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಮುಸ್ಲಿಂ ಯುವಕರು
ಕೂಡಲೆ ಆದಿಲ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆದಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿಲ್ಲ, ಇದು ಲಾಕ್ಪ್ ಡೆತ್ ಅಂತ ಆದಿಲ್ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.
ಈ ವೇಳೆ ಸ್ಥಳಕ್ಕೆ ಬಂದ ಡಿವೈಎಸ್ಪಿ ಮತ್ತು ಎಸ್ಪಿ ಆದಿಲ್ ಕುಟುಂಬಸ್ಥರಿಗೆ ವಾಸ್ತವತೆಯನ್ನು ಹೇಳಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರೂ, ಕೇಳದ ಗುಂಪು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದೆ. ಇದರಿಂದ 10 ಪೊಲೀಸ್ ವಾಹನ ಜಖಂಗೊಂಡಿವೆ. ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಗಾಯವಾಗಿದೆ. ಈ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಕಲ್ಲು ತೂರಾಟ ನಡೆದಿದೆ.
ರಾಜ್ಯದಲ್ಲಿ ಒಂದಲ್ಲಾ ಒಂದು ಅಪರಾಧ ಕೃತ್ಯಗಳು ಪ್ರತಿದಿನ ನಡೆಯುತ್ತಿವೆ. ಈ ಪ್ರಕರಣಗಳು ತೀರ್ವ ಸ್ಪರೂಪ ಪಡೆದುಕೊಳ್ಳುತ್ತಿವೆ.
ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬ ವಿಪಕ್ಷಗಳ ಆರೋಪದ ಮಧ್ಯೆಯೇ ಈ ಘಟನೆ ನಡೆದಿದ್ದು, ಸರ್ಕಾರಕ್ಕೆ ತಲೆಬಿಸಿಯಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ, ಹಾವೇರಿಯಲ್ಲಿ ಮಹಿಳೆ ಮೇಲೆ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರ ಆರೋಪ, ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಕೊಲೆ ರಾಜ್ಯ ಸರ್ಕಾರದ ಬುಡ ಅಲುಗಾಡಿಸಿವೆ. ಇದೀಗ ಮಂಡ್ಯದಲ್ಲಿ ಅಭಿಷೇಕ ಎಂಬ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ, ಮಂಗಳೂರಿನಲ್ಲಿ ಬೋರ್ವೆಲ್ ಕೊರೆಯುವ ಲಾರಿ ಮೇಲೆ ಕಲ್ಲು ತೂರಾಟ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:35 pm, Tue, 28 May 24