Mangaluru News: ಕೊಣಾಜೆ ಬಾಳೆಪುಣಿ ಶಾಲೆಯ ಬಳಿ ಬಾರ್; ವಿದ್ಯಾರ್ಥಿಗಳಿಂದ ಪ್ರತಿಭಟನೆ

| Updated By: Ganapathi Sharma

Updated on: Jul 13, 2023 | 6:40 PM

ಶಿಕ್ಷಣ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕಾನೂನು ಇದ್ದರೂ ಬಾರ್ ಕಾರ್ಯಾರಂಭ ಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Mangaluru News: ಕೊಣಾಜೆ ಬಾಳೆಪುಣಿ ಶಾಲೆಯ ಬಳಿ ಬಾರ್; ವಿದ್ಯಾರ್ಥಿಗಳಿಂದ ಪ್ರತಿಭಟನೆ
ವಿದ್ಯಾರ್ಥಿಗಳಿಂದ ಪ್ರತಿಭಟನೆ
Follow us on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯ (Konaje) ಬಾಳೆಪುಣಿಯಲ್ಲಿ (Balepuni) ಶಾಲೆಯೊಂದರ ಸಮೀಪವೇ ಬಾರ್ ತೆರೆದಿರುವುದಕ್ಕೆ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯ ಬಾಳೆಪುಣಿಯಲ್ಲಿ ಈ ಘಟನೆ ನಡೆದಿದೆ.

ಕೇರಳ-ಕರ್ನಾಟಕ ಗಡಿಯಲ್ಲಿರುವ ಶಾರದಾ ಗಣಪತಿ ವಿದ್ಯಾಲಯದ 15 ಮೀಟರ್ ವ್ಯಾಪ್ತಿಯಲ್ಲಿ ಕೆಲವು ಖಾಸಗಿ ಲಾಬಿದಾರರು ಬಾರ್ ತೆರೆದಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯಿತಿಯಿಂದ ಅಕ್ರಮವಾಗಿ ಅನುಮತಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಶಿಕ್ಷಣ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕಾನೂನು ಇದ್ದರೂ ಬಾರ್ ಕಾರ್ಯಾರಂಭ ಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: Puttur News: ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲುಗಳನ್ನು ತಯಾರಿಸಿ ವಂಚನೆ ಎಸಗುತ್ತಿದ್ದ ವ್ಯಕ್ತಿಯ ಬಂಧನ

ಗುರುವಾರ ಮುಂಜಾನೆ ಶಾರದಾ ಗಣಪತಿ ವಿದ್ಯಾಲಯದ ವಿದ್ಯಾರ್ಥಿಗಳು ಬಾಳೆಪುಣಿ ಗ್ರಾಮ ಪಂಚಾಯತ್​​ಗೆ ಪಾದಯಾತ್ರೆ ನಡೆಸಿ ಬಾರ್ ಜಾಗ ಬದಲಾಯಿಸುವಂತೆ ಆಗ್ರಹಿಸಿದರು. ಈ ಕುರಿತು ಪಂಚಾಯತ್ ಅಧಿಕಾರಿಗಳು ಇನ್ನಷ್ಟೇ ಅಧಿಕೃತ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ