ಮಂಗಳೂರು: ಕಾರಿಗೆ ಅಂಟಿಸಿದ್ದ ದೇವರ ಚಿತ್ರ ತೆಗೆಯಲು ಸೂಚಿಸಿದ ಟ್ರಾಫಿಕ್ ಪೊಲೀಸರ ವಿರುದ್ಧ ಜನರ ಆಕ್ರೋಶ
ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದ್ದಲ್ಲದೇ, ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದ್ದಾರೆ.
ಮಂಗಳೂರು: ಕಾರಿನಲ್ಲಿದ್ದ ದೇವರ ಸ್ಟಿಕ್ಕರ್ ತೆಗೆಯಲು ಟ್ರಾಫಿಕ್ ಪೊಲೀಸ್ ಸೂಚಿಸಿದ್ದಕ್ಕಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಬಳಿ ನಡೆದಿದೆ. ಕಾರಿನಲ್ಲಿ ಓಂ ಸಾಯಿ ಮತ್ತು ಕೊರಗಜ್ಜ ದೈವದ ಸ್ಟಿಕ್ಕರ್ ಅಂಟಿಸಲಾಗಿತ್ತು. ಕಾರಿನಿಂದ ಸ್ಟಿಕ್ಕರ್ ತೆಗೆಯುವಂತೆ ಎಎಸ್ಸೈ ಅಲ್ಪರ್ಟ್ ಲಸ್ರಾದೋ ಸೂಚಿಸಿದ್ದಾರೆ. ಈ ಸೂಚನೆ ನೀಡಿರುವುದು ತಿಳಿದುಬರುತ್ತಿದ್ದಂತೆ ಆಕ್ರೋಶಗೊಂಡ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಟ್ರಾಫಿಕ್ ಪೊಲೀಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಮಂಗಳೂರು ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಆಗಮಿಸಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದ್ದಲ್ಲದೇ, ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದ್ದಾರೆ.
ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ: ವ್ಯಾಪಕ ಖಂಡನೆ ಚಿಕ್ಕಮಗಳೂರು: ಜಿಲ್ಲೆಯ ಭದ್ರಾ ವನ್ಯಜೀವಿ ಅಭಯಾರಣ್ಯದ ಉಳಿವಿಗಾಗಿ ಜೀವನವನ್ನೇ ಮುಡಿಪಿಟ್ಟಿರುವ ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಅವರ ಮೇಲೆ ಸೋಮವಾರ ಪುಂಡರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಮಂಗಳವಾರ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಚಿಕ್ಕಮಗಳೂರಿನ ಶೋಲಾ ಹುಲ್ಲುಗಾವಲು, ನೀರಿನ ಸೆಲೆಗಳನ್ನು ಉಳಿಸಲು ಅವಿರತ ಹೋರಾಡುತ್ತಿರುವ ಗಿರೀಶ್ ಅವರ ಮೇಲಿನ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಗಿರೀಶ್ ಅವರು ತಮ್ಮ ಜಿಪ್ಸಿಯಲ್ಲಿ ಕೆಮ್ಮಣ್ಣುಗುಂಡಿ ಸಮೀಪದ ಕಟ್ಟೆಹೊಳೆ ಎಸ್ಟೇಟ್ನಿಂದ ಗೆಳೆಯರೊಂದಿಗೆ ಹಿಂದಿರುಗುವಾಗ ಸಂತವೇರಿ ತಿರುವಿನ ಸಮೀಪ ನಿಂತಿದ್ದ ಕೆಲ ಯುವಕರು ವಾಹನದಲ್ಲಿದ್ದ ಬಾಲಕಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದರು. ಗಿರೀಶ್ ಅವರು ವಾಹನ ನಿಲ್ಲಿಸಿ, ಹೀಗೆ ಮಾತನಾಡಬಾರದು ಎಂದು ಯುವಕರಿಗೆ ಬುದ್ಧಿ ಹೇಳಿದರು. ಸ್ಥಳದಲ್ಲಿ ಗಿರೀಶ್ ಅವರ ಗೆಳೆಯರೊಬ್ಬರು ಬಂದಿದ್ದನ್ನು ಗಮನಿಸಿದ ಯುವಕರು ಸುಮ್ಮನಾದರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ.
ಕೆಲ ಹೊತ್ತಿನ ನಂತರ ಬೈಕ್ಗಳಲ್ಲಿ ಗಿರೀಶ್ ಅವರ ಜಿಪ್ಸಿ ಬೆನ್ನಟ್ಟಿದ ದುಷ್ಟರು, ಕಂಬಿಹಳ್ಳಿ ಸಮೀಪ ಜೀಪ್ ಅಡ್ಡಗಟ್ಟಿ ಅದರಲ್ಲಿದ್ದ ಗಿರೀಶ್ ಮತ್ತು ಕೀರ್ತಿ ಕುಮಾರ್ ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಿದರು. ಗಿರೀಶ್ ಅವರಿಗೆ ಕೆನ್ನೆಲೆಗೆ ಪೆಟ್ಟು ಬಿದ್ದು, ರಕ್ತಗಾಯವಾಯಿತು. ಜಿಪ್ಸಿಯಲ್ಲಿದ್ದ ಬಾಲಕಿಯನ್ನು ದುಷ್ಟರು ಹಿಡಿದು ಎಳೆಯಲು ಯತ್ನಿಸಿದರು ಎಂದು ದೂರಲಾಗಿದೆ.
ನಡುರಸ್ತೆಯಲ್ಲಿ ಹಲ್ಲೆ ನಡೆಸುತ್ತಿದ್ದುದನ್ನು ಗಮನಿಸಿದ ಕಂಬಿಹಳ್ಳಿ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ, ಗಿರೀಶ್ ಮತ್ತು ಅವರ ಗೆಳೆಯರನ್ನು ರಕ್ಷಿಸಿದರು. ಈ ವೇಳೆ ‘ನಿಮ್ಮನ್ನು ಸಾಯಿಸದೇ ಬಿಡುವುದಿಲ್ಲ’ ಎಂದು ಜೀವ ಬೆದರಿಕೆ ಹಾಕಿ ದುಷ್ಕರ್ಮಿಗಳು ಅಲ್ಲಿಂದ ಹೋದರು ಎಂದು ಗಿರೀಶ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಡಿ.ವಿ.ಗಿರೀಶ್ ಅವರ ಮೇಲಿನ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ‘ದುಷ್ಕರ್ಮಿಗಳನ್ನು ಪೊಲೀಸರು ಶೀಘ್ರ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಕರ್ನಾಟಕ ವನ್ಯಜೀವಿ ಮಂಡಳಿಯ ಮಾಜಿ ಸದಸ್ಯ ಸ.ಗಿರಿಜಾಶಂಕರ ಟಿವಿ9 ಕನ್ನಡ ಡಿಜಿಟಲ್ಗೆ ಪ್ರತಿಕ್ರಿಯಿಸಿದರು.
ಇದನ್ನೂ ಓದಿ:
ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ
(Mangaluru People outraged over traffic cops for taking pictures of God sticking to car)
Published On - 8:49 pm, Tue, 31 August 21