ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪೊಲೀಸರ ಪ್ರಕಾರ, ಆರೋಪಿಯು ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದನು.

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಗಳೂರಿನ ಪೋಕ್ಸೋ ನ್ಯಾಯಾಲಯ (ಸಾಂದರ್ಭಿಕ ಚಿತ್ರ)Image Credit source: Pxfuel (CC0)
Follow us
Rakesh Nayak Manchi
|

Updated on:Jun 22, 2023 | 5:58 PM

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ (Mangaluru) ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪೊಲೀಸರ ಪ್ರಕಾರ, ಅಶ್ವಥ್ ಮಲ್ಲಿಕಾ ಅಲಿಯಾಸ್ ರಾಜೀವಿಯ ಎರಡನೇ ಪತಿಯಾಗಿದ್ದಾನೆ. ಮಲ್ಲಿಕಾಗೆ ಮೊದಲ ಪತಿಯಿಂದ ಹೆಣ್ಣು ಮಗು ಜನಿಸಿತ್ತು. ಆದರೆ ಅಶ್ವಥ್, 2022 ಜುಲೈ 26 ರಂದು ಮುಂಜಾನೆ 3.30 ರ ಸುಮಾರಿಗೆ ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಅಲ್ಲದೆ, ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು.

ಇದನ್ನೂ ಓದಿ: ಹೈದರಾಬಾದ್: ಅಪ್ರಾಪ್ತ ಸೋದರಳಿಯನ ಸಹಾಯದಿಂದ ಪತಿಯನ್ನು ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ವಿಚಾರವನ್ನು ಸಂತ್ರಸ್ತೆಯು ತನ್ನ ಚಿಕ್ಕಮ್ಮನ ಬಳಿ ಹೇಳಿಕೊಂಡಿದ್ದಾಳೆ. ಕೂಡಲೇ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಅದರಂತೆ ಪೊಲೀಸರು, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 506 (ಅಪರಾಧ ಬೆದರಿಕೆ) ಮತ್ತು ಸೆಕ್ಷನ್ 6 (ಲೈಂಗಿಕ ದೌರ್ಜನ್ಯ) ರಕ್ಷಣೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ನಂತರ ಪೊಲೀಸರು ಸಂತ್ರಸ್ತೆ ಮತ್ತು ಆರೋಪಿಯ ತನಿಖೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಿ ಪೋಕ್ಸೋ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಅಂತಿಮ ತೀರ್ಪು ಪ್ರಕಟಿಸಿದ ಜಿಲ್ಲಾ ಮತ್ತು ಸೆಷನ್ಸ್ FTSC II (POCSO) ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಘೋಷಿಸಿ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Thu, 22 June 23

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ