ಮಂಗಳೂರಿನಲ್ಲಿ ಪ್ರಾಧ್ಯಾಪಕಿಯ ಕುರಿತು ಮಾನಹಾನಿಕರ ಪತ್ರ ಹಾಗೂ ಪೋಸ್ಟರ್ ಹಂಚಿಕೆ; ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರು ಅರೆಸ್ಟ್

ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಪ್ರಾಧ್ಯಾಪಕಿಯ ಕುರಿತು ಮಾನಹಾನಿಕರ ಪತ್ರ ಹಾಗೂ ಪೋಸ್ಟರ್ ಹಂಚಿಕೆ; ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರು ಅರೆಸ್ಟ್
ಮಂಗಳೂರಿನಲ್ಲಿ ಪ್ರಾಧ್ಯಾಪಕಿಯ ಕುರಿತು ಮಾನಹಾನಿಕರ ಪತ್ರ ಹಾಗೂ ಪೋಸ್ಟರ್ ಹಂಚಿಕೆ; ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರು ಅರೆಸ್ಟ್
Follow us
TV9 Web
| Updated By: ಆಯೇಷಾ ಬಾನು

Updated on: Apr 20, 2022 | 1:35 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರತಿಷ್ಠಿತ ಖಾಸಗಿ ಕಾಲೇಜ್ನಲ್ಲಿ ಪ್ರಾಧ್ಯಾಪಕಿ ಬಗ್ಗೆ ಮಾನಹಾನಿಕರ ಪೋಸ್ಟರ್ ಹರಿಬಿಟ್ಟ ಹಿನ್ನೆಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಶೆಣೈ (44), ಪ್ರದೀಪ್ ಪೂಜಾರಿ(36), ತಾರಾನಾಥ ಬಿ ಎಸ್ ಶೆಟ್ಟಿ(32) ಬಂಧಿತ ಆರೋಪಿಗಳು.

ಆರೋಪಿಗಳು, ಪ್ರಾಧ್ಯಾಪಕಿ ಬಗ್ಗೆ ಮಾನಹಾನಿಕರ ಪೋಸ್ಟರ್ ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಪೋಸ್ಟ್ ಮಾಡಿದ್ದಾರೆ. ಮಾನಹಾನಿಕರವಾದ ಬರಹವನ್ನು ಪ್ರಾರಂಭದಲ್ಲಿ ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮೂಲಕ ಪ್ರಾಧ್ಯಾಪಕಿ ಫೋಟೋ ಬಳಸಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಪ್ರಾಧ್ಯಾಪಕಿಯ ಮೊಬೈಲ್ ನಂಬರ್ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಹಂಚಿದ್ದಾರೆ. ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಪೋಸ್ಟರ್ ಅಂಟಿಸಿದ್ದಾರೆ. ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬವರ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜ್ ಪ್ರಾದ್ಯಪಕಿಯೊಬ್ಬರಿಗೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿದೆ.

ಪ್ರದೀಪ್ ಪೂಜಾರಿ ಕಾಲೇಜಿನ ಎಕನಾಮಿಕ್ ಪ್ರಾಧ್ಯಾಪಕನಾಗಿದ್ದ. ಕಾಲೇಜಿನಲ್ಲಿ ಪ್ರಾಧ್ಯಾಪಕಿ ಜೊತೆ ಇದ್ದ ಮನಸ್ತಾಪದ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರು ಬಾಕಿಯಿದ್ದು, ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 7 ತಿಂಗಳ ಹಿಂದೆ ಯುವತಿಯೊಂದಿಗೆ ಓಡಿಹೋಗಿದ್ದ ವಿವಾಹಿತನಿಗೆ 55,000 ರೂ. ದಂಡ; ಕಾರಣವೇನು ಗೊತ್ತಾ?

ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗ್ತಿದೆ; ಮುನ್ನೆಚ್ಚರಿಕೆ ಕ್ರಮ ಅಗತ್ಯ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್