AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ಗೆ ಬೆಂಬಲ ಆರೋಪ: ಆರೋಪಿ ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ ಮಂಗಳೂರು ಪೊಲೀಸ್​

Israel-Hamas conflict: ಇಸ್ರೇಲ್​ನಲ್ಲಿ‌ ನರಮೇಧ ನಡೆಸಿದ ಹಮಾಸ್ ಉಗ್ರರಿಗೆ ಬೆಂಬಲ ನೀಡಿದ ಆರೋಪಿ ಜಾಕೀರ್ ವಿರುದ್ಧ ಮಂಗಳೂರು ಉತ್ತರ ಪೊಲೀಸರು ಸ್ವಯಂ ದೂರು ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಹಮಾಸ್​ಗೆ ಬೆಂಬಲ ಆರೋಪ: ಆರೋಪಿ ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ ಮಂಗಳೂರು ಪೊಲೀಸ್​
ಜಾಕೀರ್ ಬಂಧಿತ ವ್ಯಕ್ತಿ
ಅಶೋಕ್​ ಪೂಜಾರಿ
| Edited By: |

Updated on: Oct 14, 2023 | 6:24 PM

Share

ಮಂಗಳೂರು, ಅಕ್ಟೋಬರ್​​​​ 14: ಇಸ್ರೇಲ್​ನಲ್ಲಿ‌ (isrel) ನರಮೇಧ ನಡೆಸಿದ ಹಮಾಸ್ ಉಗ್ರರಿಗೆ ಬೆಂಬಲ ನೀಡಿದ ಆರೋಪಿ ಜಾಕೀರ್ ವಿರುದ್ಧ ಮಂಗಳೂರು ಉತ್ತರ ಪೊಲೀಸರು ಸ್ವಯಂ ದೂರು ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮಾಹಿತಿ ನೀಡಿದ್ದಾರೆ.

ಆರೋಪಿ ವಿರುದ್ಧ ಈ ಹಿಂದೆಯೇ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಏಳು ಪ್ರಕರಣ ದಾಖಲಾಗಿವೆ. ಮಂಗಳೂರಿನ ಬಂದರಿನ ಜಿ.ಎಂ ರಸ್ತೆಯ ನಿವಾಸಿಯಾಗಿರುವ ಜಾಕೀರ್​​, ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳೆಂದು ಕರೆದಿದ್ದ. ಪ್ಯಾಲೆಸ್ತೀನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ‌ ನೀಡಿದ್ದ.

ಇದನ್ನೂ ಓದಿ: ವಿಜಯನಗರ: ಪ್ಯಾಲೆಸ್ಟೀನ್​ ಬೆಂಬಲಿಸಿ ಸ್ಟೇಟಸ್​ ಹಾಕಿದ್ದ ಯುವಕನನ್ನು ವಶಕ್ಕೆ ಪಡೆದ ಪೊಲೀಸ್​​

ಹಮಾಸ್ ಉಗ್ರರನ್ನು ದೇಶ ಪ್ರೇಮಿ ಯೋಧರೆಂದು ಬಣ್ಣಿಸಿದ್ದ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸುವಂತೆ ಕರೆ ನೀಡಿದ್ದ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ  ಜಾಕಿರ್ ಗುರುತಿಸಿಕೊಂಡಿದ್ದ. ​​​ಜಾಕೀರ್ ಹಂಚಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಹಿಂದೂ‌ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಅಜಯ್ ಮೂಲಕ ತಾಯ್ನಾಡಿಗೆ ಆಗಮಿಸಿದ 9 ಕನ್ನಡಿಗರು; ಇಸ್ರೇಲ್​ ಪರಿಸ್ಥಿತಿ ಬಗ್ಗೆ ಹೇಳಿದ್ದಿಷ್ಟು

ಪ್ಯಾಲೆಸ್ತೀನ್​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕನ ವಿರುದ್ಧ ನಿನ್ನೆ ಸುಮುಟೋ ಪ್ರಕರಣ ದಾಖಲು ಮಾಡಲಾಗಿತ್ತು. ಆಲಂ ಬಾಷಾ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಯುವಕ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದರು.

ಆಲಂ ಬಾಷಾ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ನಿವಾಸಿ ಆಗಿದ್ದು, ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್​ ಕೆಲಸ ಮಾಡುತ್ತಿದ್ದ. ವಾಟ್ಸಾಪ್​​​ ಸ್ಟೇಟಸ್​ನಲ್ಲಿ ಯುದ್ಧ ಪೀಡಿತ ಪ್ಯಾಲೆಸ್ತೀನ್ ಭಾವಚಿತ್ರ ಹಾಕಿ ವಿಡಿಯೋ ಹಂಚಿಕೊಂಡಿದ್ದು, ನಾವು ಪ್ಯಾಲೆಸ್ತೀನ್ ಪರವಾಗಿದ್ದೇವೆ. ಪ್ಯಾಲೆಸ್ತೀನ್ ಜಿಂದಾಬಾದ್ ಅಂತ ಬರೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ