
ಮಂಗಳೂರು, ಜನವರಿ 22: ಕೊಲೆ, ಅತ್ಯಾಚಾರ ಮತ್ತು ದರೋಡೆಗಳಿಗೆ ಕುಖ್ಯಾತವಾಗಿದ್ದ ದಂಡುಪಾಳ್ಯ ಗ್ಯಾಂಗ್‌ನ (Dandupalya Gang) ಓರ್ವ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ (Arrest). ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಈವರೆಗೆ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ.
1997 ಅಕ್ಟೋಬರ್ 11ರಂದು ಉರ್ವ ಮಾರಿಗುಡಿ ಕ್ರಾಸ್ ಬಳಿಯ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ್ದ ದಂಡುಪಾಳ್ಯ ಗ್ಯಾಂಗ್, ಮನೆಯಲ್ಲಿದ್ದ ಲೂವಿಸ್ ಡಿಮೆಲ್ಲೋ(80), ರಂಜಿತ್ ವೇಗಸ್(19)ರನ್ನು ಕೊಲೆ ಮಾಡಿತ್ತು. ಬಳಿಕ ಚಿನ್ನಾಭರಣಗಳ್ನು ದೊಚಿಕೊಂಡು ಪರಾರಿಯಾಗಿದ್ದರು. ಚಿಕ್ಕ ಹನುಮಂತಪ್ಪ ಸೇರಿದಂತೆ ಎಂಟು ಸದಸ್ಯರಿಂದ ಕೃತ್ಯ ಎಸಗಲಾಗಿತ್ತು.
ಇದನ್ನೂ ಓದಿ: ದಂಡುಪಾಳ್ಯ ಸಿನಿಮಾ ರೀತಿಯಲ್ಲಿ ಅಧಿಕಾರಿ ಪ್ರತಿಮಾ ಹತ್ಯೆ: ಇಬ್ಬರು ಹಂತಕರ ಸ್ಫೋಟಕ ಅಂಶ ಬೆಳಕಿಗೆ
ಪ್ರಕರಣದ ವಿಚಾರಣೆ ಮುಕ್ತಾಯಗೊಂಡು ಆಪಾದಿತರು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ ಆರೋಪಿ ಚಿಕ್ಕ ಹನುಮ ಹೆಸರು ಬದಲಿಸಿಕೊಂಡು ನಾಪತ್ತೆಯಾಗಿದ್ದ. ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ, ಕೆ.ಕೃಷ್ಣಪ್ಪ ಅಲಿಯಾಸ್ ಕೃಷ್ಣ ಎಂದು ಹೆಸರು ಬದಲಿಸಿಕೊಂಡಿದ್ದ.
ಇದನ್ನೂ ಓದಿ: ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ಮೇಲ್, ಲಕ್ಷಾಂತರ ರೂ. ವಸೂಲಿ: ಚಿಕ್ಕಮಗಳೂರಿನ ಮಹಿಳೆಯ ಬಂಧನ
ಚಿಕ್ಕ ಹನುಮನ ವಿರುದ್ದ 2010ರಲ್ಲಿ ಮಂಗಳೂರಿನ JMFC 2ನೇ ನ್ಯಾಯಾಲಯ ಎಲ್ಪಿಸಿ ವಾರೆಂಟ್ ಹೊರಡಿಸಿತ್ತು. 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆಂಧ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ ಮದನಪಳ್ಳೆ ಎಂಬಲ್ಲಿ ಬಂಧಿಸಲಾಗಿದೆ. ಸದ್ಯ ಆರೋಪಿಯ ಪತ್ತೆ ಕಾರ್ಯ ನಡೆಸಿದ ಉರ್ವ ಪೊಲೀಸ್ ತಂಡಕ್ಕೆ ಪೊಲೀಸ್ ಕಮೀಷನರ್ ಪ್ರಶಂಸೆ ವ್ಯಕ್ತಪಡಿಸಿದ್ದು, ಹೆಚ್ಚಿನ ಬಹುಮಾನಕ್ಕಾಗಿ ರಾಜ್ಯದ ಡಿಜಿ ಮತ್ತು ಐಜಿಪಿಗೆ ಶಿಫಾರಸ್ಸು ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 5ನೇ ಹೆಚ್ಚುವರಿ ಕೋರ್ಟ್ನಲ್ಲೇ ವ್ಯಕ್ತಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಾವು ಮಣಿಯಡ್ಕ ನಿವಾಸಿ ರವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ತಕ್ಷಣ ರವಿಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ರವಿ ಶಿಫ್ಟ್ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.