ಮಹಾತ್ಮಾ ಗಾಂಧೀಜಿ ಕುರಿತು ವಿವಾದಾತ್ಮ ಹೇಳಿಕೆ ನೀಡಿದ ಹಿಂದೂ ಮಹಾಸಭಾ ಮುಖಂಡನ ಬಂಧನ
ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಮಂಗಳೂರು: ಮಹಾತ್ಮಾ ಗಾಂಧೀಜಿಯವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದೇವಾಲಯ ಕೆಡವಿದ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬೆದರಿಕೆ ಹಾಕಿದ್ದರು. ತಮ್ಮ ಮಾತು ವಿವಾದದ ಸ್ವರೂಪ ಪಡೆದುಕೊಂಡಂತೆಯೇ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರು.
ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದರು.
ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? ಯಾವ ತುಘಲಕ್ ಸರ್ಕಾರ ನಡೆಸುತ್ತಿದ್ದೀರೇ ನೀವು? ತಾಲಿಬಾನ್ ಸರ್ಕಾರ ಇದೆಯಾ? ಕರ್ನಾಟಕದಲ್ಲಿ? ತಾಲಿಬಾನ್ ಆದ್ರೂ ಪರವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸ್ತಾ ಇದೀರ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಅವರ ಮಾತುಗಳು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ: ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ
(Mangaluru Police Arrest Hindu Mahasabha leader Dharmendra for saying we did not left Gandhiji so dont care others)