ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ; ಅಪ್ರಾಪ್ತ ಯುವಕ ಅರೆಸ್ಟ್

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಲಾದ ಘಟನೆ ಸಂಬಂಧ 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಲಾಗಿದೆ. ಅಪ್ರಾಪ್ತ ಯುವಕ ರೋಗಿಯಂತೆ ಕಾಲೇಜಿಗೆ ಬಂದು ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟಿದ್ದ. ಸದ್ಯ ಮೊಬೈಲ್ ರಿಂಗ್ ಆಗಿದ್ದು ಸದ್ದು ಕೇಳಿ ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ; ಅಪ್ರಾಪ್ತ ಯುವಕ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on: May 08, 2024 | 7:54 AM

ಮಂಗಳೂರು, ಮೇ.08: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದಕ್ಕೆ ಪೊಲೀಸರು 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಿದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆದಿದೆ. ಮೇ 06ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ ಲೇಡಿಸ್ ಟಾಯ್ಲೆಟ್​ಗೆ ಹೋಗಿ ಮೊಬೈಲ್ ಇಟ್ಟಿದ್ದ. ತದನಂತರ ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆದ ಸದ್ದು ಕೇಳಿಸಿದ್ದು ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಸಿಕ್ಕ ಬಳಿಕ ಕಾಲೇಜು ಸಿಬ್ಬಂದಿ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹದಿನೇಳು ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ರೌಡಿಶೀಟರ್ ಕಾರ್ತಿಕೇಯನ್​ ಕೊಚ್ಚಿ ಕೊಲೆ

ಬೆಂಗಳೂರಿನಲ್ಲಿ ರೌಡಿಶೀಟರ್ ಕಾರ್ತಿಕೇಯನ್​ನನ್ನ ಬರ್ಬರ ಹತ್ಯೆ ಮಾಡಿದ್ದಾರೆ. ನಗರದ ರಾಮಸ್ವಾಮಿಪಾಳ್ಯದ ನಡುರಸ್ತೆಯಲ್ಲಿ ಅಟ್ಟಾಡಿಸಿ ಕೊಚ್ಚಿ ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಕ್ತಸ್ರಾವವಾಗಿ ರಸ್ತೆಯಲ್ಲೇ ಕಾರ್ತಿಕೇಯನ್ ಮೃತಪಟ್ಟಿದ್ದಾನೆ. ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದ್ದ ಕಾರ್ತಿಕೇಯನ್, ಮೈಕೆಲ್ ಮಂಜ & ಸಹಚರರ ವಿರೋಧ ಕಟ್ಟಿಕೊಂಡಿದ್ನಂತೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ರು.

ಇದನ್ನೂ ಓದಿ: ಕಳೆದ ಐದು ವರ್ಷದಿಂದ ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ ಮಾಡುತಿದ್ದ ಗ್ಯಾಂಗ್ ಸಿಸಿಬಿ ಬಲೆಗೆ

ಸುಂಕದಕಟ್ಟೆ ಬಳಿ ಮಹಿಳೆ ಬರ್ಬರ ಹತ್ಯೆ

ಬೆಂಗಳೂರಿನ ಸುಂಕದಕಟ್ಟೆ ಬಳಿ ಮಹಿಳೆಯನ್ನ ಬರ್ಬರ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ 9.40ರ ಸುಮಾರಿಗೆ ಮಹಿಳೆಯ ಎಡಗೈ ಸೀಳಿದ್ದಾರೆ. ಇದ್ರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾಳೆ. ಇನ್ನೂ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ, ಕೊಲೆಯಾದ ಮಹಿಳೆ ಗುರುತು ಪತ್ತೆಯಾಗಿಲ್ಲ.

ರೌಡಿಶೀಟರ್ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕೊಲೆ ನಡೆದ 10 ತಿಂಗಳಲ್ಲಿ ವಿಚಾರಣೆ ಮುಗಿಸಿ ತೀರ್ಪು ಪ್ರಕಟಿಸಿದೆ. 2023ರ ಜುಲೈ 4ರಂದು ರೌಡಿಶೀಟರ್ ಮಾಸ್ತಿಗೌಡನನ್ನು ಚನ್ನರಾಯಪಟ್ಟಣದ ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ರು. ಜೈಲಿನಲ್ಲಿದ್ದುಕೊಂಡೇ ಕೊಲೆ ಮಾಡಿಸಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ