ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

Dakshina Kannada News: ಬೆಳ್ತಂಗಡಿ ವೈದ್ಯರಲ್ಲಿ ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 30, 2021 | 11:24 PM

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದ ದುಷ್ಕೃತ್ಯ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿ ಅತ್ಯಾಚಾರದ‌ ಬಳಿಕ ಏಳು ತಿಂಗಳ ಗರ್ಭಿಣಿಯಾಗಿದ್ದಳು. 

10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಬಾಲಕಿ ಜೆಸಿಬಿ ಚಾಲಕನಾಗಿದ್ದ ವ್ಯಕ್ತಿಯಿಂದ ಐದು ಬಾರಿ ಅತ್ಯಚಾರಕ್ಕೆ ಒಳಗಾಗಿದ್ದಳು. ಇದಕ್ಕೂ ಮೊದಲು ಬಾಲಕಿ ಸಂಬಂಧಿ ಒಬ್ಬರಿಂದ ಎರಡು ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಾಹಿತಿ ತಿಳಿದುಬಂದಿದೆ. ಶಾಲೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ವೈದ್ಯರಿಗೆ ವಿದ್ಯಾರ್ಥಿಯ ದೇಹಸ್ಥಿತಿ ನೋಡಿ ಅನುಮಾನ ಉಂಟಾಗಿತ್ತು.

ಬಳಿಕ, ಬೆಳ್ತಂಗಡಿ ವೈದ್ಯರಲ್ಲಿ ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಪೊಲೀಸ್ ಅತ್ಯಾಚಾರ ಪ್ರಕರಣ; ಆರೋಪಿ ಅರೆಸ್ಟ್

ಇದನ್ನೂ ಓದಿ: ಅತ್ಯಾಚಾರದ ನಂತರ ಎರಡು ಬೆರಳು ಪರೀಕ್ಷೆಯಿಂದ ಆಘಾತಕ್ಕೊಳಗಾದೆ: ಐಎಎಫ್ ಅಧಿಕಾರಿ

Published On - 7:21 pm, Thu, 30 September 21